• About Us
  • Advertise
  • Privacy & Policy
  • Contact Us
Friday, June 12, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಅಣ್ಣನಿಂದಲೇ ತಮ್ಮನ ಹತ್ಯೆ, ಕಾರಣವೇನು? ಸ್ಥಳಕ್ಕೆ ಎಸ್’ಪಿ ನಿಖಿಲ್ ಭೇಟಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 10, 2026
in ಕ್ರೈಂ ನ್ಯೂಸ್, ಸಾಗರ
ಅಣ್ಣನಿಂದಲೇ ತಮ್ಮನ ಹತ್ಯೆ, ಕಾರಣವೇನು? ಸ್ಥಳಕ್ಕೆ ಎಸ್’ಪಿ ನಿಖಿಲ್ ಭೇಟಿ
Share on FacebookShare on TwitterShare on WhatsApp

ಆನಂದಪುರಂ: ಬ್ಯಾಂಕ್ ಸಾಲದ ನೋಟೀಸ್ ವಿಚಾರದಲ್ಲಿ ಉಂಟಾದ ವೈಷಮ್ಯದ ಹಿನ್ನೆಲೆಯಲ್ಲಿ ಅಣ್ಣನೇ ತನ್ನ ಸ್ವಂತ ತಮ್ಮನನ್ನೇ ಹತ್ಯೆ ಮಾಡಿರುವ ಘಟನೆ ಸಾಗರ ತಾಲೂಕಿನ ಆನಂದಪುರಂ ಮಾದರಸನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ರಾಘವೇಂದ್ರ(39) ಹಾಗೂ ಹತ್ಯೆ ಮಾಡಿದ ಆರೋಪಿಯನ್ನು ಮಹೇಶ್(49) ಎಂದು ಗುರುತಿಸಲಾಗಿದೆ. ಘಟನೆ ಕುರಿತಂತೆ ಮೃತ ರಾಘವೇಂದ್ರ ಅವರ ಪತ್ನಿ ಲಲಿತಾ ಎನ್ನುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ:
ಬ್ಯಾಂಕ್ ಸಾಲದ ನೋಟಿಸ್ ವಿಚಾರವಾಗಿ ಉಂಟಾದ ವೈಷಮ್ಯ ಹಿನ್ನೆಲೆಯಲ್ಲಿ, ರಾಘವೇಂದ್ರ ಹಾಗೂ ಮಹೇಶ್ ನಡುವೆ ವೈಮನಸ್ಯ ಉಂಟಾಗಿತ್ತು. ಇದರ ಬೆನ್ನಲ್ಲೇ, ಮೇ 23, 2026 ರಂದು ರಾತ್ರಿ ಸುಮಾರು 10:30 ಗಂಟೆ ವೇಳೆಗೆ, ಆರೋಪಿಯ ಮನೆಯ ಬಳಿ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ರಾಘವೇಂದ್ರ ಅವರನ್ನು ಆರೋಪಿಯು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿ, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ರಾಘವೇಂದ್ರ ಅವರನ್ನು ಮೊದಲಿಗೆ ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದಾಗ್ಯೂ, ಚಿಕಿತ್ಸೆ ಫಲಕಾರಿಯಾಗದೇ, ವೈದ್ಯರು ಜೀವ ಉಳಿಯುವ ಸಾಧ್ಯತೆ ಇಲ್ಲವೆಂದು ತಿಳಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ > ಭದ್ರಾವತಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

ಮನೆಯಲ್ಲಿಯೇ ಆರೈಕೆ ಮಾಡುತ್ತಿದ್ದ ವೇಳೆ, ರಾಘವೇಂದ್ರ ಅವರು ಜೂನ್ 9, 2026 ರಂದು ಬೆಳಗಿನ ಜಾವ ಸುಮಾರು 3:45 ಗಂಟೆಗೆ ನಿಧನರಾಗಿದ್ದಾರೆ.

ಮೃತರ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಈಗಾಗಲೇ ಆನಂದಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 89/2026 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ರಾಘವೇಂದ್ರ ಮೃತರಾದ ಹಿನ್ನೆಲೆಯಲ್ಲಿ ಇದೀಗ ನ್ಯಾಯಾಲಯದ ಆದೇಶ ಪಡೆದು, ಪ್ರಕರಣಕ್ಕೆ ಭಾರತೀಯ ನ್ಯಾಯ ಸಂಹಿತೆ (ಆಘೆಖ) 2023ರ ಕಲಂ 126(2), 352, 351(2), 118(2) ಜೊತೆಗೆ 103(1) ಕಲಂಗಳನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ.

ಇದನ್ನೂ ಓದಿ > ಫಾರ್ಮಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಮತ್ತು ಅಂಗದಾನ ಅಭಿಯಾನ

ಪ್ರಕರಣವು ಇದೀಗ ಗಂಭೀರ ಅಪರಾಧವಾಗಿ ಪರಿಗಣಿಸಲ್ಪಟ್ಟಿದ್ದು, ಪೊಲೀಸ್ ಇಲಾಖೆ ತುರ್ತು ವರದಿ ಸಲ್ಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದೆ.

ಹತ್ಯೆಗೆ ಒಳಗಾಗಿದ್ದ ರಾಘವೇಂದ್ರ ಮೃತರಾದ ಹಿನ್ನೆಲೆಯಲ್ಲಿ ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರೆದಿದೆ.

Tags: Brother killed by his own brotherkannada news livelatest newsmalnad newsshimogashivamoga policeshivamoggaSP Nikhilwhat was the reason? SP Nikhil visits the spotಶಿವಮೊಗ್ಗ
Previous Post

ಫಾರ್ಮಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಮತ್ತು ಅಂಗದಾನ ಅಭಿಯಾನ

Next Post

ಕೆ.ಎಸ್.ಈಶ್ವರಪ್ಪ ಅವರ ಜನ್ಮದಿನದ ಸಂಭ್ರಮ, ಅಪಾರ ಅಭಿಮಾನಿಗಳು ಭಾಗಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕೆ.ಎಸ್.ಈಶ್ವರಪ್ಪ ಅವರ ಜನ್ಮದಿನದ ಸಂಭ್ರಮ, ಅಪಾರ ಅಭಿಮಾನಿಗಳು ಭಾಗಿ

ಕೆ.ಎಸ್.ಈಶ್ವರಪ್ಪ ಅವರ ಜನ್ಮದಿನದ ಸಂಭ್ರಮ, ಅಪಾರ ಅಭಿಮಾನಿಗಳು ಭಾಗಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

June 12, 2026
ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

June 11, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ

June 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

June 12, 2026

Copyright © 2026 Yuva Dhwani. Designed by KIPL