ತೀರ್ಥಹಳ್ಳಿ: ತಾಲ್ಲೂಕಿನ ಘಂಟೆಹಕ್ಲು ಬಳಿ ಬಸ್ ಹಾಗೂ ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ವಾಹನ ಚಾಲಕರು ಗಾಯಗೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ > > ಚಾಕು ತೋರಿಸಿ ದರೋಡೆ, ಇಬ್ಬರನ್ನು ಬಂಧಿಸಿದ ಪೊಲೀಸರು!
ತೀರ್ಥಹಳ್ಳಿ-ಉಡುಪಿ ಮಾರ್ಗ ಮಧ್ಯದ ಘಂಟೆಹಕ್ಲು ಬಳಿ ಬಸ್ ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಅಪಘಾತದಲ್ಲಿ ವಾಹನದ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದ್ದು, ಅವರನ್ನು ಚಿಕಿತ್ಸೆಗಾಗಿ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ > > ಶಿವಮೊಗ್ಗ, ಪ್ರೀ-ಪೇಯ್ಡ್ ದರಕ್ಕಿಂತ ಹೆಚ್ಚುವರಿ ಹಣದ ಬೇಡಿಕೆ, ಆಟೋ ವಶ, ಕೇಸ್ ದಾಖಲು!
ಈ ಘಟನೆ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.














