ಭದ್ರಾವತಿ : ಭದ್ರಾವತಿ ತಾಲೂಕಿನ ವೀರಾಪುರ ಸಮೀಪದ ಕಾಗೆಹಳ್ಳ ಎಂಬಲ್ಲಿ ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಸೇತುವೆಯಿಂದ ಉರುಳಿಬಿದ್ದ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ > ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ದಿಢೀರ್ ಕರಡಿ ಪ್ರತ್ಯಕ್ಷ!, ಹೇಗಿತ್ತು ಕರಡಿ ಸೆರೆ ಕಾರ್ಯಾಚರಣೆ
ದಾವಣಗೆರೆಯಿಂದ ಹೊರಟಿದ್ದ ಬಸ್ ಚನ್ನಗಿರಿ ದಾಟಿ ಕಾಗೇಹಳ್ಳ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ಸಂದರ್ಭದಲ್ಲಿ ಬಸ್‌ನಲ್ಲಿದ್ದ ೩೫ ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಕಾಲು ಮುರಿದಿದ್ದರೆ, ಮೂರ್ನಾಲ್ಕು ಮಂದಿಗೆ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ > ಹೊಳೆಹೊನ್ನೂರು, ರಸ್ತೆ ಅಪಘಾತ, ಓರ್ವ ಸಾವು
ಬಸ್ ಚಾಲಕನಿಗೂ ತೀವ್ರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಸ್ಥರು ಬಸ್‌ನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.














