• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

ಕೋರ್ಸ್ ಆಯ್ಕೆಯಲ್ಲಿ ಮಕ್ಕಳ ಆಸಕ್ತಿಗೆ ಆದ್ಯತೆ ನೀಡಿ | ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 14, 2026
in ಶಿವಮೊಗ್ಗ
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?
Share on FacebookShare on TwitterShare on WhatsApp
ಶಿವಮೊಗ್ಗ: ವಿದ್ಯಾರ್ಥಿಗಳ ಶಿಕ್ಷಣ ಹಾಗೂ ವೃತ್ತಿಜೀವನದ ಯಶಸ್ಸಿಗೆ ವಿಷಯ ಆಯ್ಕೆಯೇ ಪ್ರಮುಖ ಅಡಿಪಾಯವಾಗಿದ್ದು, ಪೋಷಕರು ತಮ್ಮ ನಿರೀಕ್ಷೆಗಳಿಗಿಂತ ಮಕ್ಕಳ ಆಸಕ್ತಿ, ಸಾಮರ್ಥ್ಯ ಮತ್ತು ಭವಿಷ್ಯದ ಗುರಿಗಳನ್ನು ಗಮನದಲ್ಲಿಟ್ಟುಕೊಂಡು ಕೋರ್ಸ್‌ಗಳ ಆಯ್ಕೆಗೆ ಪ್ರೋತ್ಸಾಹಿಸಬೇಕು ಎಂದು ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಹೇಳಿದರು.
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಇಂಜಿನಿಯರಿಂಗ್ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಏರ್ಪಡಿಸಿದ್ದ ಸಿಇಟಿ/ಕಾಮೆಡ್-ಕೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆಸಕ್ತಿ ಹೊಂದಿದ ಕ್ಷೇತ್ರದಲ್ಲಿ ಕಲಿಯುವ ವಿದ್ಯಾರ್ಥಿಗಳು, ಉತ್ತಮ ಸಾಧನೆ ಮಾಡುವುದರ ಜೊತೆಗೆ ಕೌಶಲ್ಯಾಭಿವೃದ್ದಿ ಮತ್ತು ಉದ್ಯೋಗಾವಕಾಶಗಳಲ್ಲಿ ಮುಂದೆ ಸಾಗಲು ಸಾಧ್ಯವಾಗಲಿದೆ. ಶಿಕ್ಷಣದ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆ ಮತ್ತು ಮಾರ್ಗದರ್ಶನದಿಂದ ಆಗಬೇಕು.
ಪಿಯು ಫಲಿತಾಂಶದ ನಂತರ ದೊರೆಯುವ ನಾಲ್ಕು ತಿಂಗಳ ಕಾಲಾವಕಾಶವನ್ನು ವಿದ್ಯಾರ್ಥಿಗಳು, ತಮ್ಮ ಸಾಮರ್ಥ್ಯ ಮತ್ತು ಆಸಕ್ತಿಗೆ ಹೊಂದುವ ಶಿಕ್ಷಣ ಮತ್ತು ವೃತ್ತಿ ಮಾರ್ಗವನ್ನು ಹುಡುಕಿಕೊಳ್ಳಲು ಬಳಸಿಕೊಳ್ಳಬೇಕು. ತಮ್ಮ ಬಲಗಳ ಆಧಾರದ ಮೇಲೆ ವಿವಿಧ ಕೋರ್ಸ್‌ಗಳು, ಕಾಲೇಜುಗಳು ಹಾಗೂ ಭವಿಷ್ಯದ ಅವಕಾಶಗಳ ಕುರಿತು ಸಮೀಕ್ಷೆ ನಡೆಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.  ಇಂದಿನ ಉದ್ಯೋಗ ಮಾರುಕಟ್ಟೆಯಲ್ಲಿ, ಕಂಪನಿಗಳು ಕೇವಲ ಪದವೀಧರರನ್ನು ಮಾತ್ರವಲ್ಲದೆ, ಸಮಾಜ ಮತ್ತು ಉದ್ಯಮ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ನೀಡುವಂತಹ ಸಾಮರ್ಥ್ಯ ಹೊಂದಿರುವ ವಿದ್ಯಾರ್ಥಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದೆ. ನವೀನತೆ, ಸಂಶೋಧನೆ, ಉದ್ಯಮ ಪೋಷಣೆ, ಹೊಸ ಉದ್ಯಮಶೀಲತಾ ಸಂಸ್ಕೃತಿ ಹಾಗೂ ಪ್ರಾಯೋಗಿಕ ಕಲಿಕೆಗೆ ಆದ್ಯತೆ ನೀಡುವ ಕಾಲೇಜುಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿ ಎಂದು ಸಲಹೆ ನೀಡಿದರು.
ಇದನ್ನೂ ಓದಿ >  ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!
ಕೆನರಾ ಬ್ಯಾಂಕ್‌ನ ವಿಭಾಗೀಯ ವ್ಯವಸ್ಥಾಪಕರಾದ ಗೋಪಿ ಮಾತನಾಡಿ, ಭಾರತ ಸರ್ಕಾರದ ನಿರ್ದೇಶನದಂತೆ ವಿದ್ಯಾರ್ಥಿಗಳು ಪಿಎಂ ವಿದ್ಯಾಲಕ್ಷ್ಮಿ ಪೋರ್ಟಲ್ ಮೂಲಕ ಸ್ವಯಂ ನೋಂದಣಿ ಮಾಡಿಕೊಂಡು ಶಿಕ್ಷಣ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. ಮೆರಿಟ್ ಕೋಟಾದಡಿ ₹7.5 ಲಕ್ಷದವರೆಗೆ ಹಾಗೂ ನಿರ್ವಹಣಾ ಕೋಟಾದಡಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ₹4 ಲಕ್ಷದವರೆಗೆ ಶಿಕ್ಷಣ ಸಾಲ ಪಡೆಯುವ ಅವಕಾಶವಿದೆ ಎಂದರು.
ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ಅನೇಕ ವಿದ್ಯಾರ್ಥಿ ವೇತನದ ಸೌಲಭ್ಯ ನೀಡಲಾಗುತ್ತಿದ್ದು, ಅಂಗವಿಕಲರಿಗೆ, ಕೋವಿಡ್ ನಲ್ಲಿ ಮೃತರಾದ ಪೋಷಕರ ಮಕ್ಕಳಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂದು ವಿದ್ಯಾರ್ಥಿ ವೇತನದ ಕುರಿತಾಗಿ ಕಾಲೇಜಿನ ಲೆಕ್ಕಪತ್ರ ವಿಭಾಗದ ಸತೀಶ್ ಮಾಹಿತಿ ನೀಡಿದರು.
ಇದನ್ನೂ ಓದಿ >  ಶಿವಮೊಗ್ಗದ ಏಳು ರೈಲುಗಳ ಮಹತ್ವದ ಮಾಹಿತಿ, ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಅಪ್ಡೇಟ್
ಸಿಇಟಿ–ಕಾಮೆಡ್-ಕೆ ಆಯ್ಕೆ ಪ್ರಕ್ರಿಯೆ ಕುರಿತು ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎಸ್. ನರೇಂದ್ರ ಕುಮಾರ್ ಅವರು ಪ್ರಾತ್ಯಕ್ಷಿಕೆ ಮೂಲಕ ವಿವರಿಸುತ್ತಾ, ವೈದ್ಯಕೀಯ ಶಿಕ್ಷಣದ ಕೌನ್ಸಿಲಿಂಗ್ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಅನಗತ್ಯವಾಗಿ ತಡವಾಗದಂತೆ ಮಾಡಲು, ಕೆಇಎ ಮೊದಲ ಬಾರಿಗೆ ‘ಪ್ರಿ-ರೌಂಡ್’ ಎಂಬ ವಿಶೇಷ ಕೌನ್ಸೆಲಿಂಗ್ ವ್ಯವಸ್ಥೆಯನ್ನು ಪರಿಚಯಿಸಿದೆ ಎಂದು ವಿವರಿಸಿದರು.
ಕಾಲೇಜಿನ ಪ್ರವೇಶಾತಿ ಸಮಿತಿಯ ಮುಖ್ಯಸ್ಥರಾದ ಡಾ.ಮೋಯಿನುದ್ದಿನ್ ಖಾನ್, ಡಾ.ಸುರೇಂದ್ರ, ರಾಷ್ಟ್ರೀಯ ಶಿಕ್ಷಣ ಸಮಿತಿ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು. ಆಡಳಿತ ವಿಭಾಗದ ಸಿಬ್ಬಂದಿ ಹೇಮಲತಾ ನಿರೂಪಿಸಿದರು. ಸಂವಾದದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಗೊಂದಲಗಳಿಗೆ ಶಿಕ್ಷಣ ತಜ್ಞರಿಂದ ಸ್ಪಷ್ಟನೆ ಪಡೆದರು.

ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳು:

  1.  ಕೆಇಎ ನೀಡುವ ಸೀಕ್ರೆಟ್-ಕೀ ಸುರಕ್ಷಿತವಾಗಿ ಸಂಗ್ರಹಿಸಿಡಿ.
  2.  ಪ್ರತಿದಿನ ಕೆಇಎ ಜಾಲತಾಣ ಪರಿಶೀಲಿಸಿ ಹೊಸ ಪ್ರಕಟಣೆಗಳು ಮತ್ತು ವೇಳಾಪಟ್ಟಿಗಳ ಬಗ್ಗೆ ಮಾಹಿತಿ ಪಡೆಯಿರಿ.
  3.  ಆಯ್ಕೆ ಮಾಡುವ ಕಾಲೇಜುಗಳು, ಎನ್.ಬಿ.ಎ (NBA) ಹಾಗೂ ನ್ಯಾಕ್ (NAAC) ಮಾನ್ಯತೆ ಪಡೆದಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ.
  4.  ಕಾಲೇಜಿನ ಬೋಧನಾ ವಿಧಾನ, ಪ್ರಯೋಗಶಾಲೆ, ಕೌಶಲಾಭಿವೃದ್ಧಿ ಅವಕಾಶಗಳು ಹಾಗೂ ವಸತಿ ಸೌಲಭ್ಯಗಳ ಬಗ್ಗೆ ಮುಂಚಿತವಾಗಿ ಮಾಹಿತಿ ಸಂಗ್ರಹಿಸಿ.
  5.  “ಕೋರ್ಸ್ ಮುಖ್ಯವೋ ಅಥವಾ ಕಾಲೇಜು ಮುಖ್ಯವೋ” ಎಂಬುದರ ಕುರಿತು ನಿಮ್ಮ ಆದ್ಯತೆಯನ್ನು ಮೊದಲೇ ನಿರ್ಧರಿಸಿಕೊಳ್ಳಿ.
  6.  ಹಿಂದಿನ ವರ್ಷಗಳ ಕಟ್‌ಆಫ್ ಮಾಹಿತಿ ಆಧರಿಸಿ ವಾಸ್ತವಿಕ ಮತ್ತು ಆದ್ಯತೆಯ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ.
  7.  ಪ್ರವೇಶ ಶುಲ್ಕವನ್ನು ನಿಮ್ಮ ಸ್ವಂತ ಬ್ಯಾಂಕ್ ಖಾತೆಯ ಮೂಲಕವೇ ಪಾವತಿಸಿ.
  8.  ನಾವೀನ್ಯತೆ ಮತ್ತು ಪ್ರಾಯೋಗಿಕ ಆಧಾರಿತ ಕಲಿಕೆಗೆ ಆದ್ಯತೆ ನೀಡುವ ಕಾಲೇಜುಗಳನ್ನು ಆಯ್ಕೆ ಮಾಡಿ.
Tags: CET/COMED-K interaction at JNNCE Collegekannada news livelatest newsmalnad newsshimogashivamoggawhat are the key suggestions from education experts?ರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

Next Post

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ!

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL