ಶಿವಮೊಗ್ಗ ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಎರಡು ದಿನ ಚುಂಚಾದ್ರಿ ಕಪ್ ವಾಲಿಬಾಲ್ ಸಂಭ್ರಮವನ್ನು ಏರ್ಪಡಿಸಲಾಗಿದೆ.
ಸಹ್ಯಾದ್ರಿ ತಪ್ಪಲಿನ ಮಲೆನಾಡಿನ ಮಡಿಲಲ್ಲಿ ಶೈಕ್ಷಣಿಕ ಹಾಗೂ ಬೌದ್ಧಿಕ ಬೆಳವಣಿಗೆಯಲ್ಲಿ ವಿಶೇಷ ಹೆಸರಿನಿಂದ ಕಂಗೊಳಿಸುತ್ತಿರುವ ವಿದ್ಯಾ ಸಂಸ್ಥೆಯೇ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ.
ಯುವ ಜನಾಂಗದಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಯೋಗ್ಯ ಮಾರ್ಗದರ್ಶನ ಮತ್ತು ತರಬೇತಿ ನೀಡಿ ಅವರ ಬದುಕನ್ನು ರೂಪಿಸುವ ಪ್ರಯತ್ನಕ್ಕಾಗಿ ಶಿವಮೊಗ್ಗ ನಗರದಲ್ಲಿರುವ ಶ್ರೀಆದಿಚುಂಚನಗಿರಿ ಶಾಖಾ ಮಠದ ಪೂಜ್ಯರಾದ ಶ್ರೀ ಶ್ರೀ ಪ್ರಸನ್ನನಾಥಸ್ವಾಮೀಜಿ ಯವರ ನೇತೃತ್ವದಲ್ಲಿ ಶಿವಮೊಗ್ಗ ನಗರದ ಅನೇಕ ಸಂಸ್ಥೆಗಳ ಕ್ರೀಡಾ ತಜ್ಞರ ಮತ್ತು ತರಬೇತುದಾರರ ಒಂದು ತಂಡ ಅಸ್ತಿತ್ವಕ್ಕೆ ಬಂದಿರುವುದರಿಂದ ಇವತ್ತು ಕ್ರೀಡಾ ಕ್ಷೇತ್ರದಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳು ಸಾಧನೆ ಮಾಡಲು ಸಾಧ್ಯವಾಗಿದೆ.
ಕ್ರೀಡೆಗೆ ಪೂಜ್ಯರ ಕೊಡುಗೆ ಅಪಾರ
ಶ್ರೀಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯು ಮಕ್ಕಳ ವಿದ್ಯಾಭ್ಯಾಸದ ಜೊತೆಗೆ,ಕ್ರೀಡೆ, ಸಾಂಸ್ಕೃತಿಕ,ಧಾರ್ಮಿಕ ಕ್ಷೇತ್ರಗಳಲ್ಲಿ ಶ್ರೀ ಮಠ ಅಪಾರ ಕೊಡುಗೆಯನ್ನು ನೀಡಿದೆ.ನಮ್ಮ ಹೆಮ್ಮೆಯ ಶಿವಮೊಗ್ಗದ ಹಿರಿಮೆ – ಗರಿಮೆಗೆ ಸಹಕಾರ ನೀಡುತ್ತಾ ಬಂದಿರುವ ಪೂಜ್ಯ ಶ್ರೀಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಕಾಳಜಿ ಬಗ್ಗೆ ಖಂಡಿತವಾಗಿಯೂ ನಾವು ತಲೆಬಾಗಿ ನಮಸ್ಕರಿಸಲೇಬೇಕು.
ಚುಂಚಾದ್ರಿ ಕಪ್ ವಾಲಿಬಾಲ್ ಮೊದಲು ಶಿವಮೊಗ್ಗ ನಗರಕ್ಕೆ ಮಾತ್ರ ಸೀಮಿತವಾಗಿತ್ತು.ಈಗ ಸುಮಾರು ವರ್ಷಗಳಿಂದ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಆಯೋಜನೆ ಮಾಡುತ್ತಾ ಬಂದಿದ್ದು, ಜಿಲ್ಲೆಯ ನಗರ ಪ್ರದೇಶಗಳಲ್ಲದೇ,ಹಳ್ಳಿ ಹಳ್ಳಿಗಳಲ್ಲಿಯೂ ಇವತ್ತು ವಾಲಿಬಾಲ್ ಕ್ರೀಡೆ, ವರ್ಷದಿಂದ ವರ್ಷಕ್ಕೆ ಭಾಗವಹಿಸುವವರ ಸಂಖ್ಯೆ ದುಪ್ಪಟ್ಟಾಗಿದೆ.ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಅನೇಕ ಪ್ರತಿಭಾವಂತ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಜಿಲ್ಲಾ ವಾಲಿಬಾಲ್ ಸಂಸ್ಥೆಯ ಪರವಾಗಿ ಪೂಜ್ಯ ಸ್ವಾಮೀಜಿಯವರ ಆಶೀರ್ವಾದ ಬೆಡುತ್ತಾ,ಪೂಜ್ಯರ ದೂರದೃಷ್ಟಿ,ವಾಲಿಬಾಲ್ ಕ್ರೀಡೆಗೆ ಅವರ ಅಪಾರವಾದ ಕೊಡುಗೆ, ಪ್ರೋತ್ಸಾಹದಿಂದ ವಾಲಿಬಾಲ್ ಕ್ರೀಡೆ ನಮ್ಮ ಜಿಲ್ಲೆಯಲ್ಲಿ ಹೆಮ್ಮರವಾಗಿ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿ.
– ಭಾಸ್ಕರ್ ಜಿ.ಕಾಮತ್, ಅಧ್ಯಕ್ಷರು., ಜಿಲ್ಲಾ ವಾಲಿಬಾಲ್ ಸಂಸ್ಥೆಶಿವಮೊಗ್ಗ
ವಿದ್ಯಾ ಸಂಸ್ಥೆಯಿಂದ ಕ್ರೀಡೆಯಲ್ಲಿ ಉತ್ತಮ ತರಬೇತಿಯನ್ನು ನೀಡಿ ಕ್ರೀಡಾಪಟುಗಳು ರಾಷ್ಟ್ರ ಹಾಗೂ ಅಂತರಾಷ್ಟ್ರ ಮಟ್ಟದಲ್ಲಿ ಮೆರೆಯುವಂತೆ ಮಾಡಿದೆ.
ಮಕ್ಕಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಅನೇಕ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ವಾಲಿಬಾಲ್ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ ) ಮತ್ತು ಜಿಲ್ಲಾ ವಾಲಿಬಾಲ್ ಸಂಸ್ಥೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಮಟ್ಟದ ಆಹ್ವಾನಿತ ಪ್ರೌಢಶಾಲಾ ಬಾಲಕ ಮತ್ತು ಬಾಲಕೀಯರಿಗಾಗಿ 23ವರ್ಷಗಳಿಂದ ಪೂಜ್ಯರ ನೇತೃತ್ವದಲ್ಲಿ ಯಶಸ್ವಿಯಾಗಿ ಆಯೋಜನೆ ಮಾಡುತ್ತಾ ಬಂದಿರುವುದು ಹೆಮ್ಮೆಯ ಸಂಗತಿ.
1996 ರಿಂದ ಸಿ. ಎಸ್. ಐ. ಕಪ್ ವಾಲಿಬಾಲ್ ಪಂದ್ಯಾವಳಿಯನ್ನು ಆರಂಭಿಸಲಾಯಿತು.ನಂತರ
ಪೂಜ್ಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಈ ಪಂದ್ಯಾವಳಿಗೆ 2000 ಇಸ್ವಿಯಲ್ಲಿ “ಚುಂಚಾದ್ರಿ ಕಪ್ “ಎಂಬ ನೂತನ ಅಭೀದಾನ ಮಾಡಲಾಯಿತು.

ಅಂದು ಪ್ರಾರಂಭವಾದ ಚುಂಚಾ ದ್ರಿ ಕಪ್ ವಾಲಿಬಾಲ್ ಕ್ರೀಡಾಕೂಟ ಇಂದು ಯಶಸ್ವಿಯಾಗಿ 24ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ,
ಈ ಕ್ರೀಡಾಕೂಟದ ದಿವ್ಯ ಸಾನ್ನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದು, ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ ವಹಿಸುವರು.
ಈ ಪಂದ್ಯಾವಳಿಯಲ್ಲಿ ಪ್ರತಿ ವರ್ಷ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲಾ ಬಾಲಕರ ಸುಮಾರು 65 ತಂಡಗಳು, ಬಾಲಕಿಯರ 35 ತಂಡಗಳು ಭಾಗವಹಿಸಿ ಅದ್ಭುತ ಪ್ರದರ್ಶನ ನೀಡುತ್ತಿವೆ.
ಈ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಬಾಲಕ, ಬಾಲಕಿಯರಿಗೆ “ಬೆಸ್ಟ್ ಅಟ್ಯಾಕರ್,ಬೆಸ್ಟ್ ಬೂಸ್ಟರ್, ಬೆಸ್ಟ್ ಆಲ್ ರೌಂಡರ್, ಬೆಸ್ಟ್ ಲೀಬ್ರೋ, ಬೆಸ್ಟ್ ಸೆಂಟರ್ ಬ್ಲಾಕರ್ “ಈ ಪ್ರಶಸ್ತಿಗಳನ್ನು ನೀಡಿ ಕ್ರೀಡಾಪಟುಗಳನ್ನು ಹುರಿದುಂಬಿಸಲಾಗುತ್ತಿದೆ, ವಿಜೇತ ತಂಡಗಳಿಗೆ ಆಕರ್ಷಕ ಪಾರಿತೋಷಕದೊಂದಿಗೆ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತಿದೆ.
ಈ ಬಾರಿ ಬಾಲಕಿಯರ ವಿಭಾಗದಲ್ಲಿ 35ಕ್ಕಿಂತ ಹೆಚ್ಚು ತಂಡಗಳು ಭಾಗವಹಿಸುತ್ತಿರುವುದರಿಂದ ಈ ಬಾರಿಯೂ ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆದ ಬಾಲಕಿಯರ ತಂಡಕ್ಕೆ ನಗದು ಬಹುಮಾನ ಕೊಡುತ್ತಿರುವುದು ಮತ್ತೊಂದು ವಿಶೇಷ.
ಈ ಪಂದ್ಯಾವಳಿಯು ಆರಂಭವಾದಾಗಿನಿಂದ ಪ್ರತಿವರ್ಷವೂ ಶಿವಮೊಗ್ಗ ಜಿಲ್ಲೆಯ 20 ರಿಂದ 25 ವಾಲಿಬಾಲ್ ಕ್ರೀಡಾಪಟು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಭಾರತ ತಂಡವನ್ನು ಪ್ರತಿನಿಧಿಸಿ ಶಿವಮೊಗ್ಗ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಶ್ರೀಮಠದಿಂದ ಆಯೋಜಿಸುತ್ತಾ ಬಂದಿರುವ ಚುಂಚಾದ್ರಿ ಕಪ್ ನಿಂದ ಉತ್ತೇಜಿತರಾಗಿ ಶಿವಮೊಗ್ಗದ ಪ್ರತಿಭಾನ್ವಿತ ಕ್ರೀಡಾಪಟುಗಳು ರಾಷ್ಟ್ರ,ಅಂತರಾಷ್ಟ್ರ ಮಟ್ಟದಲ್ಲಿ ಮಲೆನಾಡಿನ ಪ್ರತಿಭಾನ್ವಿತ ಪ್ರತಿಭೆಗಳು ಕ್ರೀಡಾ ಕ್ಷೇತ್ರದ ವಿವಿಧ ಕ್ರೀಡೆಗಳಲ್ಲಿ ರಾಜ್ಯ ಮತ್ತು ಭಾರತ ದೇಶವನ್ನು ಪ್ರತಿನಿಧಿಸಿ ಬೆಳ್ಳಿ ಮತ್ತು ಬಂಗಾರದ ಪದಕಗಳನ್ನು ಜಿಲ್ಲೆಯ ಮಡಿಲಿಗೆ ತಂದು ಕೊಟ್ಟಿರುತ್ತಾರೆ. ಭಾರತ ಸರ್ಕಾರವು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕ್ರೀಡಾ ಸಾಧಕರಿಗೆ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸಲು ಹುದ್ದೆಗಳನ್ನು ಕೊಟ್ಟಿರುವುದು ಮತ್ತೊಂದು ಹೆಮ್ಮೆಯ ವಿಚಾರ.

ಶಿವಮೊಗ್ಗ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಮಹಾಪೋಷಕರು ಹಾಗೂ ಕ್ರೀಡಾ ಪ್ರೇಮಿಗಳಾದ ಪೂಜ್ಯ ಶ್ರೀಶ್ರೀ ಪ್ರಸನ್ನನಾಥ ಸ್ವಾಮಿಜಿಯವರು ಪ್ರತಿ ವರ್ಷ ಈ ಪಂದ್ಯಾವಳಿಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇವರೊಂದಿಗೆ ಜಿಲ್ಲಾ ವಾಲಿಬಾಲ್ ಸಂಸ್ಥೆಯು ಸಹ ಕೈ ಜೋಡಿಸಿದೆ.
ಈ ವರ್ಷ ಪಂದ್ಯಾವಳಿಯು ದಿನಾಂಕ:13-08-2026 ರಿಂದ 14-08-2026 ರ ವರೆಗೆ ನಡೆಯಲಿದ್ದು, ಆಟಗಾರರ ಅನುಕೂಲಕ್ಕಾಗಿ ಈಗಾಗಲೇ 8 ಅಂಕಣಗಳನ್ನು ಸಿದ್ಧಪಡಿಸಲಾಗಿದೆ, ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಹೊರಾಂಗಣ ಮತ್ತು ಒಳಾಂಗಣದಲ್ಲಿ ಬಾಲಕರಿಗೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯು ನಡೆಸಲಾಗುವುದು.ಈ ವರ್ಷ ಮೊದಲಬಾರಿಗೆ ಶರಾವತಿ ನಗರದಲ್ಲಿ ಬಾಲಕಿಯರಿಗೆ 3 ಅಂಕಣದಲ್ಲಿ ನಡೆಸಲಾಗುವದು.ರಾಷ್ಟ್ರ ಮತ್ತು ರಾಜ್ಯಮಟ್ಟದ ನುರಿತ ವಾಲಿಬಾಲ್ ತೀರ್ಪುಗಾರರು ಆಗಮಿಸಲಿದ್ದಾರೆ.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಬರುವ ಎಲ್ಲಾ ಕ್ರೀಡಾಪಟುಗಳಿಗೂ ವಸತಿ ಹಾಗೂ ಊಟದ ವ್ಯವಸ್ಥೆಯನ್ನೂ, ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷನೂ ಸಹ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದ್ದು, ಜಿಲ್ಲೆಯ 17 ವರ್ಷದ ವಯೋಮಿತಿಯೊಳಗಿನ ಕ್ರೀಡಾಪಟುಗಳನ್ನೊಳಗೊಂಡ ಪ್ರೌಢಶಾಲಾ ತಂಡಗಳು ಭಾಗವಹಿಸುತ್ತಿವೆ.
ನಗದು ಬಹುಮಾನ
ಬಾಲಕರ ವಿಭಾಗ: ಪ್ರಥಮ ಸ್ಥಾನ – 5000 ರೂ, ದ್ವಿತೀಯ ಸ್ಥಾನ 4000 ರೂ, ತೃತೀಯ ಸ್ಥಾನ 3000 ರೂ ಮತ್ತು ನಾಲ್ಕನೇ ಸ್ಥಾನ 2000 ರೂ ನಗದು ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.
ಬಾಲಕಿಯರ ವಿಭಾಗ: ಪ್ರಥಮ ಸ್ಥಾನ ಪಡೆದ ತಂಡಕ್ಕೆ 5000 ರೂ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 4000 ರೂ , ತೃತೀಯ ಸ್ಥಾನ 3000 ರೂ ಮತ್ತು ನಾಲ್ಕನೇ ಸ್ಥಾನ 2000 ರೂ ನಗದು ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.
ರಸ್ತೆ ಓಟದ ಸ್ಪರ್ಧೆ
ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮತ್ತು ಚುಂಚಾದ್ರಿ ಸ್ಪೋರ್ಟ್ಸ್ ಕ್ಲಬ್ ನ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರಿಗೆ ಆ.14 ರಂದು ನೆಹರು ಕ್ರೀಡಾಂಗಣದಿಂದ ರಸ್ತೆ ಓಟದ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಬೆಳಿಗ್ಗೆ ಸ್ಥಳದಲ್ಲಿಯೇ ನೊಂದಣಿ ಮಾಡಿಕೊಳ್ಳಬಹುದು. ಅಂದು 6 ಗಂಟೆಗೆ ನೆಹರೂ ಕ್ರೀಡಾಂಗಣದಿಂದ ಪ್ರಾರಂಭವಾಗುವ ಓಟದ ಸ್ಪರ್ಧೆ ಶರಾವತಿ ನಗರದ ಬಿಜಿಎಸ್ ವಸತಿ ಶಾಲೆಯ ಆವರಣದಲ್ಲಿ ಕೊನೆಗೊಳ್ಳಲಿದೆ. ಭಾಗವಹಿಸಿದ ಎಲ್ಲಾ ಕ್ರೀಡಾ ಪಟುಗಳಿಗೂ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.
ಪ್ರಾಥಮಿಕ ಬಾಲಕಿಯರಿಗೆ 2 ಕಿ. ಮೀ.,ಪ್ರಾಥಮಿಕ ಬಾಲಕರಿಗೆ, ಹಾಗೂ ಪ್ರೌಢಶಾಲಾ ಬಾಲಕಿಯರಿಗೆ 3 ಕಿ.ಮೀ, ಪ್ರೌಢಶಾಲಾ ಬಾಲಕರಿಗೆ 5 ಕಿ.ಮೀಟರ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಓದಿಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು, ಕ್ರೀಡಾ ಜಗತ್ತಿಗೂ ನೀಡಿ, ಇಡೀ ರಾಜ್ಯದಲ್ಲಿ ಮೇರು ಪತಾಕೆಯನ್ನು ಮಾಡಿಸಿದ ಕೀರ್ತಿ ಹೊಂದಿರುವ ಈ ವಿದ್ಯಾ ಸಂಸ್ಥೆಯ ಜವಾಬ್ದಾರಿ ಹೊತ್ತ ಶ್ರೀಗಳ ಅವಿರತ ಪರಿಶ್ರಮ, ಅವರು ಕೂಡಿಟ್ಟ ಆಧ್ಯಾತ್ಮ ತುಡಿತದ ಮನೋ ಭೂಮಿಕೆಯಿಂದ ಸಾವಿರಾರು ಮಕ್ಕಳು ಇಂದು ಅಗ್ರ ಪಂಕ್ತಿಯ ಸಮಾಜಕ್ಕೆ ಕೊಡುಗೆಯಾಗಿದ್ದಾರೆ. ಕಲೆ,ಸಾಹಿತ್ಯ,ಸಂಸ್ಕೃತಿ,ಆಟೋಟಗಳ ಲ್ಲಿ ಪ್ರಸಿದ್ಧಿಯನ್ನು ಪಡೆದಿರುವ, ರಾಜ್ಯದೆಲ್ಲೆಡೆ ಅದರಲ್ಲೂ ಶಿವಮೊಗ್ಗ ಜಿಲ್ಲೆಯಾದ್ಯಂತ ಶಿಕ್ಷಣ ಮತ್ತು ಕ್ರೀಡೆಯಲ್ಲಿ ಅನೇಕ ಪ್ರತಿಭಾನ್ವಿತರನ್ನು ನೀಡಿದಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಅದ್ವಿತೀಯ ಸಾಧನೆಯನ್ನು ಮಾಡಿ, ರಾಜ್ಯದ ಇತಿಹಾಸದಲ್ಲಿ ತನ್ನದೇ ಆದ ಒಂದು ಮೈಲಿಗಲ್ಲನ್ನು ಮೂಡಿಸಿದೆ.
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದ ಕ್ರೀಡಾಕೂಟದ ಸಂಘಟನೆಯನ್ನು ಹಿಂದಿನಿಂದಲೂ ಕ್ರೀಡೆ, ಸಾಹಿತ್ಯ, ಕಲಾ ಜಗತ್ತಿಗೆ ಪೂಜ್ಯರು ಪ್ರೋತ್ಸಾಹ ನೀಡುತ್ತಾ ಬಂದಿರುವುದು ಅವಿಸ್ಮರಣೀಯ.
ಕ್ರೀಡೆ ನಡೆಸುವ ಉದ್ದೇಶ, : ಶಿವಮೊಗ್ಗ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಬೆಳಕಿಗೆ ತರುವುದು. ಈಗ ಸುಮಾರು ಬಾಲಕ, ಬಾಲಕಿಯರು ವಾಲಿಬಾಲ್ ಕ್ರೀಡೆಯಲ್ಲಿ ಭಾಗವಹಿಸಿ ದೇಶಕ್ಕೆ ಅನೇಕ ಪ್ರಶಸ್ತಿಗಳನ್ನು ತಂದುಕೊಟ್ಟಿರುವುದೇ ಇದಕ್ಕೆ ಸಾಕ್ಷಿ. ಈಗಲೂ ಅನೇಕ ಪ್ರತಿಭಾವಂತ ಕ್ರೀಡಾಪಟುಗಳು ಚುಂಚಾದ್ರಿ ಕಪ್ ವಾಲಿಬಾಲ್ ನಿಂದ ಉತ್ತೇಜಿತರಾಗಿ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ, ದೇಶದ ವಿವಿಧ ಕಂಪನಿಗಳಲ್ಲಿ ಸೇವೆ ಸಲ್ಲಿಸುವಂತಹ ಅವಕಾಶ ಪಡೆದುಕೊಂಡಿದ್ದಾರೆ.
ವಿಶೇಷ ವರದಿ : ರಾ. ಹ. ತಿಮ್ಮೇನಹಳ್ಳಿ, ಶಿವಮೊಗ್ಗ

ಶ್ರೀಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯು ಮಕ್ಕಳ ವಿದ್ಯಾಭ್ಯಾಸದ ಜೊತೆಗೆ,ಕ್ರೀಡೆ, ಸಾಂಸ್ಕೃತಿಕ,ಧಾರ್ಮಿಕ ಕ್ಷೇತ್ರಗಳಲ್ಲಿ ಶ್ರೀ ಮಠ ಅಪಾರ ಕೊಡುಗೆಯನ್ನು ನೀಡಿದೆ.ನಮ್ಮ ಹೆಮ್ಮೆಯ ಶಿವಮೊಗ್ಗದ ಹಿರಿಮೆ – ಗರಿಮೆಗೆ ಸಹಕಾರ ನೀಡುತ್ತಾ ಬಂದಿರುವ ಪೂಜ್ಯ ಶ್ರೀಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಕಾಳಜಿ ಬಗ್ಗೆ ಖಂಡಿತವಾಗಿಯೂ ನಾವು ತಲೆಬಾಗಿ ನಮಸ್ಕರಿಸಲೇಬೇಕು.












