ಶಿವಮೊಗ್ಗ: ನಗರ #KEB Circle ನಲ್ಲಿರುವ ಜಲ ಮಂಡಳಿ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟಿ ದ್ವಿಚಕ್ರ ವಾಹನದಲ್ಲಿ ಅಡಗಿದ್ದ ನಾಗರಹಾವನ್ನು ಉರಗ ಸಂರಕ್ಷಕ ಸ್ನೇಕ್ ಕಿರಣ್ ಅವರು ಸಂರಕ್ಷಿಸಿದ ಘಟನೆ ನಡೆದಿದೆ.
ಇದನ್ನೂ ಓದಿ > ಹೊಳೆಹೊನ್ನೂರು, ಕಾರು ಡಿಕ್ಕಿಯಾಗಿ ಪಾದಚಾರಿ ಸಾವು, ಪಲ್ಟಿಯಾಗಿ ಬಿದ್ದ ಕಾರು
ಕಚೇರಿ ಸಿಬ್ಬಂದಿಯೋರ್ವರಿಗೆ ಸೇರಿದ್ದ ದ್ವಿ ಚಕ್ರ ವಾಹನ, ಮಂಗಳವಾರ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟಿಯಲ್ಲಿ ಸದರಿ ಹಾವು ಹೋಗುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ ಕಚೇರಿ ಸಿಬ್ಬಂದಿಗಳು ಉರಗ ಸಂರಕ್ಷಕ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ > ಶಿವಮೊಗ್ಗ ರೈಲ್ವೆ ಸ್ಟೇಷನ್ ಬಳಿ ಹೊತ್ತಿ ಉರಿದ ಗೂಡ್ಸ್ ಲಾರಿ!
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸ್ನೇಕ್ ಕಿರಣ್ ರವರು, ಸ್ಕೂಟಿಯ ಫುಟ್ ಬೋರ್ಡ್ ಕೆಳಭಾಗದಲ್ಲಿ ಅಡಗಿದ್ದ ಸುಮಾರು 2 ಅಡಿ ಉದ್ದದ ನಾಗರಹಾವನ್ನು ಸುರಕ್ಷಿತವಾಗಿ ಸಂರಕ್ಷಿಸಿದ್ದಾರೆ.














