• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ

ವಿದ್ಯಾಸಂಸ್ಥೆಯ ಮೌಲ್ಯ ಹೆಚ್ಚಿಸುವ ವಿದ್ಯಾರ್ಥಿಗಳ ಸಾಧನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 30, 2026
in ಶಿವಮೊಗ್ಗ
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ
Share on FacebookShare on TwitterShare on WhatsApp

ಶಿವಮೊಗ್ಗ: ವಿದ್ಯಾರ್ಥಿಗಳ ಸಾಧನೆ ಎನ್ನುವುದು ವಿದ್ಯಾಸಂಸ್ಥೆಯ ಘನತೆ, ಶಿಸ್ತು ಮತ್ತು ಮೌಲ್ಯಗಳನ್ನು ಸಮಾಜದ ಮುಂದೆ ಪ್ರತಿಬಿಂಬಿಸುವ ಶಕ್ತಿಯಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಸಂಜೆ ಏರ್ಪಡಿಸಿದ್ದ ವಿವಿಧ ಇಂಜಿನಿಯರಿಂಗ್, ಎಂಬಿಎ, ಎಂಸಿಎ ವಿಭಾಗಗಳಲ್ಲಿ, ವಿಟಿಯು ಪರೀಕ್ಷೆ ಹಾಗೂ ಎನ್‌ಪಿಟಿಇಎಲ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಪರಿಶ್ರಮ, ಸಾಧನೆ ಮತ್ತು ವ್ಯಕ್ತಿತ್ವದ ಮೂಲಕ ಶಿಕ್ಷಣ ಸಂಸ್ಥೆಯ ಮೌಲ್ಯವನ್ನು ಹಾಗೂ ಸಮಾಜದ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುತ್ತಾರೆ. ಪುರುಷನು ತನ್ನ ಸ್ವಪ್ರಯತ್ನದಿಂದ ದೊಡ್ಡವನಾಗಬಹುದು; ಆದರೆ ಹೆಣ್ಣು ಹುಟ್ಟಿದ ಕ್ಷಣದಿಂದಲೇ ಮಹಾನ್ ವ್ಯಕ್ತಿತ್ವವಾಗಿರುತ್ತಾಳೆ. ಈ ಮೂಲಕ ಹೆಣ್ಣಿನ ತ್ಯಾಗ, ಮಮತೆ ಮತ್ತು ಜೀವನ ನಿರ್ಮಾಣದ ಪಾತ್ರ ಅತ್ಯಂತ ದೊಡ್ಡದು.

ಬುದ್ಧಿಮತ್ತೆ ಮಾತ್ರ ಜೀವನದ ಪೂರ್ಣತೆಯನ್ನು ನೀಡುವುದಿಲ್ಲ. ಅದರೊಂದಿಗೆ ಮೌಲ್ಯಾಧಾರಿತ ಜೀವನ, ಸಂಸ್ಕಾರ ಮತ್ತು ವಿವೇಕ ಬೆಳೆಸಿಕೊಳ್ಳುವುದು ಅಗತ್ಯ. ಹಣ, ಅಧಿಕಾರ ಅಥವಾ ಖ್ಯಾತಿಗಿಂತ ಮೌಲ್ಯಗಳಿಗೆ ಹೆಚ್ಚಿನ ಮಹತ್ವ ನೀಡಬೇಕು.

ಇದನ್ನೂ ಓದಿ > ಸಿ.ಬಿ.ಆರ್ ಕಾನೂನು ಕಾಲೇಜಿನಲ್ಲಿ ನೂತನ ನ್ಯಾಯಾಧೀಶರಾದ ಹಿರಿಯ ವಿದ್ಯಾರ್ಥಿಗಳಿಗೆ ಅಭಿನಂದನೆ

ಇದನ್ನೂ ಓದಿ > ವಾಕಿಂಗ್ ಮಾಡ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ, ಮೂಳೆ ಕಟ್!

ಇದನ್ನೂ ಓದಿ > ಹಾಡೋನಹಳ್ಳಿಯಲ್ಲಿ 80 ಲೋಡ್ ಮರಳು ಪತ್ತೆ!

ಮಣ್ಣಿನ ಮಡಿಕೆಯನ್ನು ರೂಪಿಸುವ ಕುಂಬಾರನಿಗೆ ಅದರ ಬೆಲೆ ಗೊತ್ತಿರುವಂತೆ, ಕುಟುಂಬದ ಮೌಲ್ಯವನ್ನು ಸೃಷ್ಟಿಸುವವನಿಗೇ ಅದರ ನಿಜವಾದ ಅರ್ಥ ತಿಳಿಯುತ್ತದೆ. ಇಂದಿನ ಯುವ ಸಮೂಹವು ಕೇವಲ ಜನರ ಮೆಚ್ಚುಗೆಗಾಗಿ ಬದುಕುವುದಕ್ಕಿಂತ, ತಮ್ಮ ತನವನ್ನು, ಸಂಸ್ಕಾರವನ್ನು ಮತ್ತು ವ್ಯಕ್ತಿತ್ವವನ್ನು ಉಳಿಸಿಕೊಳ್ಳುವತ್ತ ಕೇಂದ್ರಿಕರಿಸಲಿ.
ಬೆಟ್ಟದಷ್ಟು ಬುದ್ಧಿಗಿಂತ, ಮುಷ್ಟಿಯಷ್ಟು ವಿವೇಕವೇ ಶ್ರೇಷ್ಟ ಎಂದು ಸಂದೇಶ ನೀಡಿದರು.

ಎನ್ಇಎಸ್ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಮಾತನಾಡಿ, ವಿದ್ಯಾರ್ಥಿಗಳು ಪದವಿ ಪಡೆದು ಶಿಕ್ಷಣ ಸಂಸ್ಥೆಯಿಂದ ಹೊರಡುವ ಸಂದರ್ಭದಲ್ಲಿ ಕೇವಲ ಅಂಕಗಳಿಕೆಯ ಬಗ್ಗೆ ಮಾತ್ರವಲ್ಲದೆ, ತಾವು ಗಳಿಸಿರುವ ನಿಜವಾದ ಜ್ಞಾನ, ಕೌಶಲ್ಯ ಹಾಗೂ ಜೀವನ ಮೌಲ್ಯಗಳ ಬಗ್ಗೆಯೂ ಆತ್ಮವಿಮರ್ಶೆ ಮಾಡಿಕೊಳ್ಳುವುದು ಅಗತ್ಯವಿದೆ.

ಈ ನಿಟ್ಟಿನಲ್ಲಿ ಪ್ರಯೋಗಶೀಲ ಕಲಿಕೆ ವಿದ್ಯಾರ್ಥಿಗಳ ಜ್ಞಾನ ವಿಕಸನಕ್ಕೆ ಪೂರಕವಾದ ಪರಿಣಾಮಕಾರಿ ವೇದಿಕೆಯಾಗಿದ್ದು, ಕಲಿತ ವಿಷಯಗಳನ್ನು ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳಲು ಹಾಗೂ ಹೊಸ ಆವಿಷ್ಕಾರಗಳತ್ತ ಹೆಜ್ಜೆ ಇಡಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ನಾವೀನ್ಯಪೂರ್ಣ ಯೋಜನೆಗಳನ್ನು ರೂಪಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ತಮ್ಮ ವಿಷಯಾಧಾರಿತ ಜ್ಞಾನವನ್ನು ಪರೀಕ್ಷಿಸಿಕೊಳ್ಳಬಹುದು ಎಂದು ಹೇಳಿದರು.

ಎನ್‌ಪಿಟಿಇಎಲ್ ಸಾಧಕರಿಗೆ ವಿಶೇಷ ಬಹುಮಾನ

ಭಾರತ ಸರ್ಕಾರದ‌ ಅತ್ಯುನ್ನತ ಇ-ಕಲಿಕಾ ವೇದಿಕೆಯಾದ ಎನ್‌ಪಿಟಿಇಎಲ್ (National Programme on Technology Enhanced Learning) 2026 ನೇ ಸಾಲಿನ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದಿದ್ದಾರೆ.
ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಅನುರಾಧ.ಕೆ.ಎಂ ಜಾವಾ ಪ್ರೋಗ್ರಾಮ್ಮಿಂಗ್ ವಿಷಯದಲ್ಲಿ (ಶೇ.100%) ಅಂಕ ಪಡೆದಿದ್ದು, ರಾಷ್ಟ್ರಮಟ್ಟದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದ ಸ್ವಾತಿ.ಜಿ (ಶೇ.99%), ಇನ್ಫಾರ್ಮೇಶನ್ ಸೈನ್ಸ್ ವಿಭಾಗದ ಶುಭ್ರತಾ ಹೆಗ್ಡೆ (ಶೇ.98%), ಸಿರಿ.ಎನ್.ಎಸ್ (ಶೇ.98%) ಅಂಕ ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ಎನ್ಇಎಸ್ ಆಡಳಿತ ಮಂಡಳಿಯಿಂದ ವಿಶೇಷ ನಗದು ಬಹುಮಾನ ಘೋಷಿಸಲಾಯಿತು. ಎನ್‌ಪಿಟಿಇಎಲ್ ಮೂಲಕ ಆನ್‌ಲೈನ್ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮೋಚಿತ ಜ್ಞಾನ, ಪ್ರಮಾಣಪತ್ರದ ಜೊತೆಗೆ, ಉದ್ಯೋಗಾವಕಾಶಗಳ ವೃದ್ಧಿ ಹಾಗೂ ನಿರಂತರ ಕಲಿಕೆಯ ಅವಕಾಶ ದೊರೆಯುವುದು ಗಮನಾರ್ಹ.

ಕಾರ್ಯಕ್ರಮದಲ್ಲಿ ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿದರು. ನಿರ್ದೇಶಕರಾದ ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಕಾರ್ಯಕ್ರಮ ಸಂಯೋಜಕರಾದ ಡಾ.ಎಸ್.ಆರ್.ಅಶ್ವಿನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: Congratulations to the talented students at JNNCE CollegeJNNCE Collegekannada newskannada news livelatest newsmalnad newsshimogashivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಮೇ. 31ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ, ಎಲ್ಲೇಲ್ಲಿ?

Next Post

ಶಿವಮೊಗ್ಗ, 25 ಕಡೆ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, 25 ಕಡೆ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!

ಶಿವಮೊಗ್ಗ, 25 ಕಡೆ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL