ಶಿವಮೊಗ್ಗ: ಇತ್ತೀಚೆಗೆ ಜಿಲ್ಲೆಯಲ್ಲಿ ಬಿರುಗಾಳಿ ಮತ್ತು ಮಳೆಗೆ ಹೊಳೆಹೊನ್ನೂರು ವ್ಯಾಪ್ತಿಯ ಗ್ರಾಮಗಳು ಮತ್ತು ಇತರೆಡೆ ಅಡಿಕೆ ಬೆಳೆಗಳು ಹಾನಿಗೀಡಾಗಿದ್ದು, ರೈತರು ಕಂಗಾಲಾಗಿದ್ದಾರೆ. ರೈತರಿಗೆ ಪರಿಹಾರ ನೀಡಲು ಮುಖ್ಯಮಂತ್ರಿಗಳ ಬಳಿ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ಅಲ್ಲಮ ಪ್ರಭು ಮೈದಾನ(ಫ್ರೀಡಂ ಪಾರ್ಕ್) ಕ್ಕೆ ಭೇಟಿ ನೀಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲಿಸಿದ ನಂತರ ಅವರು ಮಾತನಾಡಿದರು.
ಇದನ್ನೂ ಓದಿ > ರಸ್ತೆ ವಿಸ್ತರಣೆ, ಜೆಸಿಬಿ ಬಳಸಿ ಗೂಡಂಗಡಿಗಳ ತೆರವು ಕಾರ್ಯಾಚರಣೆ!
ಇದನ್ನೂ ಓದಿ > ಅಕ್ರಮ ಪ್ರಾಣಿ ಸಾಗಣೆ, ವಧೆ ತಡೆಗೆ ಸಮಿತಿ ರಚನೆ, ಜಿಲ್ಲಾಧಿಕಾರಿ
ಎಸ್ ಐ ಆರ್ : ಮತದಾನ ನಮ್ಮೆಲ್ಲರ ಮೂಲಭೂತ ಹಕ್ಕು. ಎಸ್ ಐ ಆರ್ ಪ್ರಕ್ರಿಯೆಯನ್ನು ಅಧಿಕಾರಿಗಳು ಜವಾಬ್ದಾರಿಯಿಂದ ನಿರ್ವಹಿಸಬೇಕು. ಹಾಗೂ ಮತದಾರರು ಸಹ ತಮ್ಮ ಹಕ್ಕಾದ ಮತದಾನಕ್ಕೆ ಸಂಬಂಧಿಸಿದ ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಎಚ್ಚರಿಕೆಯಿಂದ ಪಾಲ್ಗೊಳ್ಳಬೇಕೆಂದು ತಿಳಿಸಿದರು.















