ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ.11 ಬೆಳಗ್ಗೆ 10ಕ್ಕೆ ಪ್ರತಾಪ್ ಆರ್ಕಿಡ್, 2ನೇ ಮಹಡಿ, ದುರ್ಗಿಗುಡಿ ಜೈಲ್ ಸರ್ಕಲ್, ಡಿಸಿಬಿ ಬ್ಯಾಂಕ್ ಹತ್ತಿರ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ > ಮೇ 15ರಂದು “ವಿಶ್ವಬಂಧು” ನೂತನ ಗೋಶಾಲೆ ಆರಂಭ, ಮಾಜಿ DCM ಕೆ.ಎಸ್.ಈಶ್ವರಪ್ಪ
ಈ ನೇರ ಸಂದರ್ಶನದಲ್ಲಿ ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಕಂಪನಿ ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಪಿಯುಸಿ ಮತ್ತು ಯಾವುದೇ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಇದನ್ನೂ ಓದಿ > ಸೊರಬದಲ್ಲಿ ಮದುವೆ ದಿಬ್ಬಣದ ಬಸ್ ಪಲ್ಟಿ, ತಪ್ಪಿದ ಬಾರಿ ಅನಾಹುತ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.














