ಶಿವಮೊಗ್ಗ: ಸಚಿವ ನಾಗೇಂದ್ರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ತಳ್ಳಿ ಕಚೇರಿ ಆವರಣಕ್ಕೆ ನುಗ್ಗಲು ಪ್ರತಿಭಟನಾಕಾರರು ಮುಂದಾದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು. ಪೊಲೀಸರು ಪ್ರತಿಭಟನಾಕಾರರನ್ನು ತಡೆದ ಪರಿಣಾಮ ಸ್ಥಳದಲ್ಲಿ ಕೆಲಕಾಲ ತಳ್ಳಾಟ–ನೂಕಾಟ ನಡೆಯಿತು.
ಇದನ್ನೂ ಓದಿ > > ವಿದ್ಯುತ್ ಪ್ರವಹಿಸಿ ಪೈಂಟರ್ ಸ್ಥಳದಲ್ಲೇ ಸಾವು, ಆಗಿದ್ದೇನು?
ಸಚಿವ ನಾಗೇಂದ್ರ ಅವರ ಭಾವಚಿತ್ರಕ್ಕೆ ನೋಟಿನ ಹಾರ ಹಾಕಿ ಬಿಜೆಪಿ ಕಾರ್ಯಕರ್ತರು ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ > > ಉಡುಪಿಯಿಂದ ಸಾಗರಕ್ಕೆ ಹೊರಟಿದ್ದ ಖಾಸಗಿ ಬಸ್ ಬೆಂಕಿಗಾಹುತಿ!
ಪರಿಸ್ಥಿತಿ ಕೈಮೀರದಂತೆ ಪೊಲೀಸರು ಹಲವು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ > > ಶಿವಮೊಗ್ಗ, ಈದ್ ಮಿಲಾದ್ ಹಬ್ಬದ ವೇಳೆ ಇವುಗಳಿಗೆ ಸಂಪೂರ್ಣ ನಿಷೇಧ!














