• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಫಾರ್ಮಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಮತ್ತು ಅಂಗದಾನ ಅಭಿಯಾನ

ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ, ನ್ಯಾ. ಎಂ.ಎಸ್.ಸಂತೋಷ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 10, 2026
in ಶಿವಮೊಗ್ಗ
ಫಾರ್ಮಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಮತ್ತು ಅಂಗದಾನ ಅಭಿಯಾನ
Share on FacebookShare on TwitterShare on WhatsApp
ಶಿವಮೊಗ್ಗ: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಯುವಕರು ಅರಿವು ಹೊಂದಿ, ವ್ಯಸನದ ವಿರುದ್ಧ ದೃಢ ನಿಲುವು ತಾಳಿದಾಗ ಮಾತ್ರ ನಶೆಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್.ಸಂತೋಷ್ ಹೇಳಿದರು.
ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ನಶಾ ಮುಕ್ತ ಭಾರತ ಮತ್ತು ಅಂಗದಾನ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾನು ಒಬ್ಬಂಟಿಯಾಗಿದ್ದಾಗ ಎಷ್ಟು ಶಿಸ್ತಿನಿಂದ ವರ್ತಿಸುತ್ತೇನೆ ಎಂಬುದೇ ನನ್ನ ವ್ಯಕ್ತಿತ್ವದ ನಿಜವಾದ ಮಾನದಂಡ. ವ್ಯಕ್ತಿಯ ಜೀವನವು ಅವನ ಚರಿತ್ರೆ ಮತ್ತು ನಡವಳಿಕೆ ಮೇಲೆ ಅವಲಂಬಿತವಾಗಿರುತ್ತದೆ.
ಹಿಂದೆ ಇಡೀ ಸಮಾಜವೇ ಮಕ್ಕಳ ಬೆಳವಣಿಗೆಯ ಮೇಲೆ ಕಣ್ಣಿಟ್ಟಿತ್ತು. ಆದರೆ ಇಂದು ಸಮಾಜದ ರಚನೆ ಮತ್ತು ಮಕ್ಕಳ ಮನಸ್ಥಿತಿ ಎರಡೂ ಬದಲಾಗಿವೆ. ಒಳ್ಳೆಯ ಮಾತುಗಳನ್ನು ಸ್ವೀಕರಿಸುವ ಸೌಜನ್ಯತೆ ಕಡಿಮೆಯಾಗುತ್ತಿದೆ. ಹಿರಿಯರನ್ನು ಗೌರವಿಸುವ ಸಂಸ್ಕಾರ ಕಣ್ಮರೆಯಾಗುತ್ತಿದೆ.
ಇದನ್ನೂ ಓದಿ > ಭದ್ರಾವತಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!
ಡ್ರಗ್ಸ್‌ಗಳು ವ್ಯಕ್ತಿಯಲ್ಲಿ ಕ್ರೌರ್ಯ ಮತ್ತು ಅಮಾನವೀಯ ಪ್ರವೃತ್ತಿಗಳನ್ನು ಹೆಚ್ಚಿಸುತ್ತವೆ. ನಶೆಯ ಅಮಲಿನಲ್ಲಿ ನಡೆಯುವ ಅಪರಾಧಗಳಿಗೆ ಕಾನೂನು ಯಾವುದೇ ಕನಿಕರ ತೋರುವುದಿಲ್ಲ; ಅಂತಹವರನ್ನು ಮೊದಲು ಅಪರಾಧಿಗಳಾಗಿ ಪರಿಗಣಿಸಿ, ನಂತರ ಅಗತ್ಯವಿದ್ದಲ್ಲಿ ರೋಗಿಗಳಾಗಿ ನೋಡಲಾಗುತ್ತದೆ ಎಂದು ಎಚ್ಚರಿಸಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಯುವಜನತೆ ಇಂದು ಸರಿಯಾದ ಮಾರ್ಗದರ್ಶನ ಮತ್ತು ವಿವೇಚನೆಯ ಕೊರತೆಯಿಂದ ದಾರಿತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿ, ಮೌಲ್ಯಗಳು ಮತ್ತು ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಗಳ ಕಡೆಗೆ ಹೆಚ್ಚು ಗಮನ ಹರಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಅಪಾರ ಸಾಮರ್ಥ್ಯ ಅಡಗಿದ್ದು, ಸಮಾಜದ ಅಭಿವೃದ್ಧಿಗಾಗಿ ಸಾಮರ್ಥ್ಯವನ್ನು ಸಮರ್ಪಿಸಿಕೊಳ್ಳಬೇಕಾಗಿದೆ.
ಇದನ್ನೂ ಓದಿ > ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ
ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಸಾಮಾಜಿಕ ನಡವಳಿಕೆ, ಶಿಸ್ತುಬದ್ಧ ಜೀವನ ಹಾಗೂ ಭವಿಷ್ಯವನ್ನು ಹಾಳು ಮಾಡುತ್ತದೆ. ಕುತೂಹಲದಿಂದ ಆರಂಭವಾಗುವ ಮಾದಕ ವಸ್ತುಗಳ ಬಳಕೆ ಕ್ರಮೇಣ ವ್ಯಸನವಾಗಿ ರೂಪುಗೊಳ್ಳುತ್ತದೆ. ಒಮ್ಮೆ ವ್ಯಸನಕ್ಕೆ ಒಳಗಾದರೆ, ಸಾಮಾನ್ಯವಾಗಿ ವರ್ತಿಸಲು ಸಹ ಮಾದಕ ವಸ್ತುಗಳ ಅವಲಂಬನೆ ಅನಿವಾರ್ಯವಾಗುವ ದುರಂತ ಪರಿಸ್ಥಿತಿ ನಿರ್ಮಾಣವಾಗಲಿದೆ.
ಯುವ ಸಮೂಹ ಪೋಷಕರು, ಶಿಕ್ಷಕರು ಹಾಗೂ ಸಮಾಜ ತಮ್ಮ ಮೇಲೆ ಇಟ್ಟಿರುವ ನಂಬಿಕೆ, ನಿರೀಕ್ಷೆ ಮತ್ತು ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ವಿಶೇಷವಾಗಿ ಫಾರ್ಮಸಿ ವಿದ್ಯಾರ್ಥಿಗಳು ತಮ್ಮ ಕ್ಯಾಂಪಸ್ ಮಾತ್ರವಲ್ಲದೆ ಇತರೆ ಶಿಕ್ಷಣ ಸಂಸ್ಥೆಗಳು ಮತ್ತು ಸಮಾಜದಲ್ಲಿಯೂ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಿ, ನಶೆಮುಕ್ತ ವಾತಾವರಣ ನಿರ್ಮಾಣಕ್ಕೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಎನ್‌ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಸೈಬರ್ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಮಂಜುನಾಥ, ಎನ್ ಯು ಆಸ್ಪತ್ರೆ ನೆಫ್ರಾಲಜಿಸ್ಟ್ ಡಾ.ಪ್ರವೀಣ್ ಮಳವಾಡೆ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ರೀಹರ್ಷಾ.ಎಸ್.ಎನ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಲಿಖಿತ ನಿರೂಪಿಸಿ, ವಿದ್ಯಾರ್ಥಿನಿ ದಿಶಾ ಪ್ರಾರ್ಥಿಸಿದರು.
Tags: Drug-free India and organ donation campaign at the Pharmacy Collegekannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್!

Next Post

ಅಣ್ಣನಿಂದಲೇ ತಮ್ಮನ ಹತ್ಯೆ, ಕಾರಣವೇನು? ಸ್ಥಳಕ್ಕೆ ಎಸ್’ಪಿ ನಿಖಿಲ್ ಭೇಟಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಅಣ್ಣನಿಂದಲೇ ತಮ್ಮನ ಹತ್ಯೆ, ಕಾರಣವೇನು? ಸ್ಥಳಕ್ಕೆ ಎಸ್’ಪಿ ನಿಖಿಲ್ ಭೇಟಿ

ಅಣ್ಣನಿಂದಲೇ ತಮ್ಮನ ಹತ್ಯೆ, ಕಾರಣವೇನು? ಸ್ಥಳಕ್ಕೆ ಎಸ್'ಪಿ ನಿಖಿಲ್ ಭೇಟಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL