ಶಿವಮೊಗ್ಗ: ರಾಗಿಗುಡ್ಡದ ಚಾನಲ್ ಏರಿ ರಸ್ತೆಯ ಲೇಔಟ್‌ವೊಂದರ ಸಮೀಪ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಇದನ್ನೂ ಓದಿ > ವೃದ್ಧೆಯ ಕೊಲೆ, ಸುತ್ತುಕೋಟೆ ವ್ಯಕ್ತಿಗೆ ಜೀವಾವಧಿ ಶಿಕ್ಷೆ!
ಅಜರುದ್ದೀನ್ ಯಾನೆ ಅಜರ್ (26) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ1.50 ಲಕ್ಷ ರೂ. ಮೌಲ್ಯದ 15 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಹಾಗೂ 1600 ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಉಚಿತ ತರಬೇತಿ, ಎಲ್ಲಿ?
ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸ್ ಇನ್ಸ್‌ಸ್ಪೆಕ್ಟರ್ ರಾಘವೇಂದ್ರ ಖಾಂಡಿಕೆ ಅವರು, ತಮ್ಮ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ವಿರುದ್ದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.















