ಶಿವಮೊಗ್ಗ: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಮಂಡಳಿಯು 2026-27ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿವರೆಗೆ ಹಾಗೂ ವೈದ್ಯಕೀಯ ಅಥವಾ ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ > ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು! ಆಗಿದ್ದೇನು?
ಕಾರ್ಮಿಕರ ಮಾಸಿಕ ವೇತನವು ₹35,000/- ಕ್ಕಿಂತ ಹೆಚ್ಚಿರಬಾರದು. ಒಂದು ಕುಟುಂಬದಲ್ಲಿ ಗರಿಷ್ಠ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ಲಭ್ಯವಿರುತ್ತದೆ.
ವಿದ್ಯಾರ್ಥಿಯು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗದವರಾಗಿದ್ದರೆ ಕನಿಷ್ಠ ಶೇ. 50 ರಷ್ಟು ಮತ್ತು ಪ.ಜಾ/ಪ.ಪಂ ವರ್ಗದವರಾಗಿದ್ದರೆ ಕನಿಷ್ಠ ಶೇ. 45 ರಷ್ಟು ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು.
ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್‌ಸೈಟ್ www.klwbapps.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಅರ್ಜಿ ಸಲ್ಲಿಸಲು ದಿನಾಂಕ: 31-12-2026 ಕಡೆಯ ದಿನವಾಗಿರುತ್ತದೆ.
ಇದನ್ನೂ ಓದಿ > ಶಿವಮೊಗ್ಗ ಕೋರ್ಟ್‌ಗೆ ಇ-ಮೇಲ್ ಬಾಂಬ್ ಬೆದರಿಕೆ!, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ತಪಾಸಣೆ
ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು “ಕಾರ್ಮಿಕ ಅಧಿಕಾರಿಗಳವರ ಕಚೇರಿ ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಕಚೇರಿಗೆ ಅಥವಾ ದೂ.ಸಂಖ್ಯೆ 080-23475188 8277291175 / 8277120505 9141585402 ನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ ಪಿ ತಿಳಿಸಿದ್ದಾರೆ.













