ಬೆಂಗಳೂರು: ಡಿ ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ದೊಡ್ಡ ರಾಜಕೀಯ ಶಾಕ್ ಎದುರಾಗಿದೆ. ಸಚಿವ ಸ್ಥಾನದಲ್ಲಿದ್ದ ರಾಮಲಿಂಗಾರೆಡ್ಡಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ.
ಸಚಿವ ಸಂಪುಟದಲ್ಲಿ ತಮಗೆ ನಿರೀಕ್ಷಿಸಿದ್ದ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ರೆಡ್ಡಿ ತಿಳಿಸಿದ್ದಾರೆ. ಬದಲಾಗಿ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದರಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ > ಶಿವಮೊಗ್ಗ, ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ, ಖಾಲಿ ಇರುವ ಹುದ್ದೆಗಳೇಷ್ಟು?
ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಿಂದೆ ಎರಡು ಬಾರಿ ನನ್ನನ್ನು ಕರೆದು ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುತ್ತೇವೆ ಎಂದು ಮಾತು ಕೊಟ್ಟಿದ್ದರು. ಈಗ ಆ ಮಾತು ತಪ್ಪಲಾಗಿದೆ. ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ,” ಎಂದು ಹೇಳಿದ್ದಾರೆ.
ಇದನ್ನೂ ಓದಿ > ಮೀನು ಮಾರುಕಟ್ಟೆ ರಸ್ತೆಯಲ್ಲಿ ಜನರಿಗೆ ಕಿರಿಕಿರಿ, ಯುವಕನ ಬಂಧನ!
ಹಾಗೇ, “ನನ್ನ ನಿರ್ಧಾರ ಅಂತಿಮ. ಯಾರ ಮನವೊಲಿಕೆಗೂ ಬಗ್ಗುವುದಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿರುವುದಾಗಿ ತಿಳಿಸಿದರು.
1973ರಿಂದಲೇ ರಾಜಕೀಯ ಜೀವನ ಆರಂಭಿಸಿರುವ ರೆಡ್ಡಿ, ಹಲವು ಬಾರಿ ಸಚಿವರಾಗಿದ್ದೇನೆ. ಯಾವುದೇ ಖಾತೆಗಾಗಿ ನಾನು ಲಾಬಿ ಮಾಡಿಲ್ಲ. ಆದರೆ ಕೊಟ್ಟ ಮಾತು ಉಳಿಸದಿರುವುದು ಬೇಸರ ತಂದಿದೆ ಎಂದು ಹೇಳಿದರು.
ರಾಜಕೀಯ ಪರಿಣಾಮ:
ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಉಂಟಾದ ಈ ಬೆಳವಣಿಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆರಂಭದಲ್ಲೇ ದೊಡ್ಡ ಸವಾಲಾಗಿ ಪರಿಣಮಿಸಿದೆ.














