ಶಿವಮೊಗ್ಗ: ಬಟ್ಟೆಗೆ ಇಸ್ತ್ರಿ ಮಾಡುವ ವೇಳೆ ವಿದ್ಯುತ್ ಶಾಕ್ ನಿಂದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗ ನಗರದ ವಾದಿ ಎ ಹುದಾ ಬಡಾವಣೆಯಲ್ಲಿ ನಡೆದಿದೆ.
ಉಮರ್ ಫಾರೂಕ್ (14) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಈತ 9 ನೇ ತರಗತಿ ಅಭ್ಯಾಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ > > ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?
ಮನೆಯಲ್ಲಿ ಬಟ್ಟೆಗೆ ಇಸ್ತ್ರಿ ಮಾಡುವ ವೇಳೆ, ಆಕಸ್ಮಿಕವಾಗಿ ವಿದ್ಯುತ್ ಶಾಕ್ ಗೆ ಬಾಲಕ ತುತ್ತಾಗಿದ್ದಾನೆ. ಈತನನ್ನು ಕುಟುಂಬದವರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ > >ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ
ಘಟನಾ ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲಿಸಿದ್ದಾರೆ.














