ಶಿವಮೊಗ್ಗ : ತೋಟದಲ್ಲಿ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಬುಳ್ಳಾಪುರದಲ್ಲಿ ಸಂಭವಿಸಿದೆ.
ಬುಳ್ಳಾಪುರ ಗ್ರಾಮದ ನಿವಾಸಿ ಬಸವರಾಜಪ್ಪ ಗೌಡ (55) ಮೃತಪಟ್ಟ ದುರ್ದೈವಿ. ಇವರು ತಮ್ಮ ತೋಟದಲ್ಲಿ ಫೈಬರ್ ದೋಟಿ (ಕೋಲು) ಬಳಸಿ ತೆಂಗಿನಕಾಯಿ ಕೀಳುತ್ತಿದ್ದರು. ಈ ಸಂದರ್ಭದಲ್ಲಿ ತೋಟದ ಮೇಲಿಂದ ಹಾದುಹೋಗಿದ್ದ ಹೈಟೆನ್ಷನ್ ವಿದ್ಯುತ್ ಲೈನ್‌ಗೆ ಫೈಬರ್ ದೋಟಿ ಆಕಸ್ಮಿಕವಾಗಿ ಸ್ಪರ್ಶಿಸಿದೆ.
ಇದನ್ನೂ ಓದಿ > ಶಿವಮೊಗ್ಗ ಗ್ರಾಮಾಂತರ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ
ವಿದ್ಯುತ್ ತೀವ್ರತೆಗೆ ಬಸವರಾಜಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಹೊಳೆಹೊನ್ನೂರು ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ > ನಕಲಿ ಚಿನ್ನವಿಟ್ಟು 28 ಲಕ್ಷಕ್ಕೂ ಅಧಿಕ ವಂಚನೆ, ವ್ಯಕ್ತಿಯ ಬಂಧನ
ತೋಟಗಳಲ್ಲಿ ಕೆಲಸ ಮಾಡುವಾಗ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.















