ಶಿವಮೊಗ್ಗ : ತಾಲ್ಲೂಕಿನ ಸುತ್ತುಕೋಟೆಯ ಪೆಟ್ರೋಲ್ ಬಂಕ್ ಮುಂಭಾಗ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವುಕಂಡಿದ್ದಾನೆ. ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿದೆ.
ಮೃತನನ್ನು ಅಬ್ನಾನ್ (23) ಎಂದು ಗುರುತಿಸಲಾಗಿದೆ.
ಕೆಎಸ್‌ಆರ್‌ಟಿಸಿ ಬಸ್ಸು ಶಿಕಾರಿಪುರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು. ಬೈಕಿನಲ್ಲಿದ್ದವರು ಶಿವಮೊಗ್ಗ ಕಡೆಯಿಂದ ಶಿಕಾರಿಪುರದ ಕಡೆಗೆ ತೆರಳುತ್ತಿದ್ದರು. ಸುತ್ತುಕೋಟೆಯ ಪೆಟ್ರೋಲ್ ಬಂಕ್ ಸಮೀಪ ಬೈಕ್ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಅಬ್ನಾನ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇದನ್ನೂ ಓದಿ > 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಡಿವೈಎಸ್‌ಪಿ ಸಂಜೀವ್ ಕುಮಾರ್, ಕುಂಸಿ ಠಾಣೆಯ ಪಿಎಸ್‌ಐ ಪಾರ್ವತಿ ಬಾಯಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ > ಶಿವಮೊಗ್ಗ, ಶಿವಪ್ಪನಾಯಕ ವೃತ್ತದಲ್ಲಿ ಟೈರ್ ಗೆ ಬೆಂಕಿಹಚ್ಚಿ ಆಕ್ರೋಶ














