ಶಿವಮೊಗ್ಗ: ಫೆ.11 ಮತ್ತು 12 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗ ತಾಲ್ಲೂಕು ಮಂಡ್ಲಿ 110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-1 (ಕಲ್ಲೂರು ಮಂಡ್ಲಿ) ಮಾರ್ಗದ ವ್ಯಾಪ್ತಿಯಲ್ಲಿ 11 ಕೆವಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅನುಪಿನಕಟ್ಟೆ, ಪುರದಾಳು, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಹನುಮಂತಾಪುರ, ಬೆಳ್ಳೂರು, ಶೆಟ್ಟಿಹಳ್ಳಿ, ಚಿತ್ರಶೆಟ್ಟಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com













