ಭದ್ರಾವತಿ : ತಾಲೂಕಿನ ಕಲ್ಲಾಪುರ ಸಮೀಪದ ಕೋಡಿಹೊಸೂರು ಗ್ರಾಮದಲ್ಲಿ ಎಸ್‌ಐಆರ್ (Special Intensive Revision) ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಬೂತ್ ಮಟ್ಟದ ಅಧಿಕಾರಿ (BLO) ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕಲ್ಲಾಪುರ ಗ್ರಾಮದ ನಿವಾಸಿ, ಅಂಗನವಾಡಿ ಶಿಕ್ಷಕಿ ಮಂಜುಳಾ (50) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!
ಮಾಹಿತಿ ಪ್ರಕಾರ, ಕೋಡಿಹೊಸೂರು ಗ್ರಾಮದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದ ವೇಳೆ ಮಂಜುಳಾ ಅವರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಅರಬಿಳಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಭದ್ರಾವತಿ ತಾಲೂಕು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ > ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!
ಪ್ರಾಥಮಿಕ ಮಾಹಿತಿಯಂತೆ ಹೃದಯಾಘಾತದಿಂದ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಅಧಿಕೃತ ವೈದ್ಯಕೀಯ ವರದಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಘಟನೆ ತಿಳಿಯುತ್ತಿದ್ದಂತೆಯೇ ತಹಶೀಲ್ದಾರ್, ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಮ್) ನಡೆಸಲು ಸೂಚಿಸಲಾಗಿದೆ.
ಇದನ್ನೂ ಓದಿ > ಪಡಿತರ ಚೀಟಿದಾರರಿಗೆ ಮಾಹಿತಿ, ಕ್ಯಾಸ್ಟ್ ಮ್ಯಾಪಿಂಗ್‌ಗೆ ಸೂಚನೆ















