• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ಸಂಭ್ರಮದ ಸಿಗಂದೂರು ಜಾತ್ರೆ | ಸೀಗೆ ಕಣಿವೆಯ ದೇವಿಯ ಮೂಲಸ್ಥಳದಲ್ಲಿ ಪೂಜಾ ವಿಧಿವಿಧಾನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 14, 2026
in ಸಾಗರ
ಸಂಭ್ರಮದ ಸಿಗಂದೂರು ಜಾತ್ರೆ | ಸೀಗೆ ಕಣಿವೆಯ ದೇವಿಯ ಮೂಲಸ್ಥಳದಲ್ಲಿ ಪೂಜಾ ವಿಧಿವಿಧಾನ
Share on FacebookShare on TwitterShare on WhatsApp

ಶಿವಮೊಗ್ಗ : ಬೇಡಿದ ವರವ ಕರುಣಿಸುವ ದೇವಿ ಎಂದೇ ಭಕ್ತರಿಂದ ಪೂಜಿಸಲ್ಪಡುವ ಶ್ರೀ ಕ್ಷೇತ್ರ ಸಿಗಂದೂರು ಚೌಡಮ್ಮ ದೇವಿಯ ಸಂಕ್ರಾಂತಿ ಜಾತ್ರ ಮಹೋತ್ಸವ ಬುಧವಾರ ಸಂಭ್ರಮದಿಂದ ಆರಂಭವಾಯಿತು. ಚೌಡಮ್ಮ ದೇವಿಯ ಮೂಲಸ್ಥಾನ ಶರಾವತಿ ಹಿನ್ನೀರಿನಲ್ಲಿ ಮುಳುಗಡೆಯಾಗಿರುವ ಸೀಗೆ ಕಣಿವೆಯಲ್ಲಿ ಬೆಳಗ್ಗೆಯಿಂದ ಚಂಡಿಕಾ ಹೋಮ, ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳು ಜರುಗಿದವು.

ಸೀಗೆ ಕಣಿವೆಯ ಮೂಲ ಸ್ಥಳದಲ್ಲಿ ಹಿನ್ನೀರು ಇಳಿದಿದ್ದು, ಮೂಲ ಸ್ಥಳದಲ್ಲಿ ನಿರ್ಮಾಣ ಮಾಡಿರುವ ಶಿಲಾ ಮಂಟಪದೊಳಗೆ ಮೂಲ ಮೂರ್ತಿಗೆ ಅಭಿಷೇಕ ಪೂಜೆಗಳನ್ನು ನಡೆಸಲಾಯಿತು. ಇದಕ್ಕೂ ಮುನ್ನ ಅನುವಂಶಿಕ ಧರ್ಮದರ್ಶಿ ಡಾ.ಎಸ್.‌ ರಾಮಪ್ಪ ,ಮೀನಾಕ್ಷಮ್ಮ ದಂಪತಿ ಹಾಗೂ ಅವರ ಪುತ್ರರಾದ ರವಿಕುಮಾರ್‌ ದಂಪತಿ ಅವರು ಚಂಡಿಕಾ ಹೋಮದಲ್ಲಿ ಭಾಗಿಯಾಗಿ ನಾಡಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಭಕ್ತರು ಹಾಗೂ ಕರೂರು ಮತ್ತು ಬಾರಂಗಿ ಹೋಬಳಿಯ ಜನರು ಭಾಗಿಯಾಗಿ ಪೂಜಾ ಕಾರ್ಯಕ್ರಮ ವೀಕ್ಷಿಸಿದರು. ಇದಾದ ಬಳಿಕ ಶರಾವತಿ ಹಿನ್ನೀರಲ್ಲಿಯೇ ನಿರ್ಮಾಣ ಮಾಡಿರುವ ಶಿಲಾಮಂಟಪದಲ್ಲಿ ಅಭಿಷೇಕ ಹಾಗೂ ವಿವಿಧ ಧಾರ್ಮಿ ವಿಧಿವಿಧಾನಗಳನ್ನು ಧರ್ಮದರ್ಶಿಗಳ ಕುಟುಂಬದ ಸಮ್ಮುಖದಲ್ಲಿ ಅರ್ಚಕರು ನೆರವೇರಿಸಿದರು. ಶರಾವತಿ ನದಿ ತಟದಲ್ಲಿ ನಡೆದ ಈ ಉತ್ಸವಕ್ಕೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮಹಿಳೆಯರೂ ಸೇರಿದಂತೆ ಸಹಸ್ರಾರು ಜನರು ಸಾಕ್ಷಿಯಾದರು.

ದೇವಿಯ ಮೂಲ ಸ್ಥಾನದಲ್ಲಿ ನಡೆದ ಪೂಜೆಯ ಬಳಿಕ ಜ್ಯೋತಿಯೊಂದಿಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ಸಿಗಂದೂರು ದೇವಸ್ಥಾನಕ್ಕೆ ಕರೆತರಲಾಯಿತು. ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ಜ್ಯೋತಿ ಬೆಳಗುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಪೂಜೆಯ ಸಂದರ್ಭ ಶಿಕಾರಿಪುರ ತಾಲೂಕು ಕಡೇನಂದಿಹಳ್ಳಿ ಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಸಮಾಜ ಸೇವಕ ಎಂ.ಶ್ರೀಕಾಂತ್, ಹೊಳೆಕೊಪ್ಪ ಬೀರಪ್ಪ ದಂಪತಿ, ನಿರಂಜನ್ ಕುಪ್ಪಗಡ್ಡೆ ದಂಪತಿ ಮತ್ತು ಕುಟುಂಬದವರು ಭಾಗವಹಿಸಿದ್ದರು. ಕಲಸೆ ಚಂದ್ರಪ್ಪ, ಅನಿತಾಕುಮಾರಿ, ಹೊಳೆಯಪ್ಪ, ನಾಗರಾಜ್‌ ಕೈಸೋಡಿ, ಜಾಕಿ ಗಣೇಶ್‌ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags: jathresagarashimogashivamoggasigandurusiganduru jathre
Previous Post

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

Next Post

ಯುವ ಚೈತನ್ಯದ ಚಿಲುಮೆ – ಸ್ವಾಮಿ ವಿವೇಕಾನಂದರು 

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಯುವ ಚೈತನ್ಯದ ಚಿಲುಮೆ – ಸ್ವಾಮಿ ವಿವೇಕಾನಂದರು 

ಯುವ ಚೈತನ್ಯದ ಚಿಲುಮೆ - ಸ್ವಾಮಿ ವಿವೇಕಾನಂದರು 

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL