ಸೊರಬ: ತಾಲ್ಲೂಕಿನ ಸಾಗರ ರಸ್ತೆಯ ಮಳಲಗದ್ದೆ-ಅವಲಗೋಡು ಮಾರ್ಗ ಮಧ್ಯೆ ಚಲಿಸುತ್ತಿದ್ದ ಕಾರಿನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಇದನ್ನೂ ಓದಿ ಸರಣಿ ಕಳ್ಳತನ, ಶಿವಮೊಗ್ಗದ ಸೂಳೆಬೈಲ್ ಮಹಿಳೆಯ ಬಂಧನ
ಪಟ್ಟಣದ ದೊಡ್ಡಪೇಟೆಯ ಸಚಿನ್ ಎಂಬುವರಿಗೆ ಸೇರಿದ ಪೋರ್ಡ್ ಕಾರಿನಲ್ಲಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಾರು ಸುಟ್ಟು ಕರಕಲಾಗಿದೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ ಅಷ್ಟರಲ್ಲಿ ಕಾರು ಸಂಪೂರ್ಣ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿತ್ತು. ಅದೃಷ್ವವಶಾಥ್ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ಇದನ್ನೂ ಓದಿ ಶಿವಮೊಗ್ಗ, ಸತ್ತ ಬೆಕ್ಕನ್ನು ಲೈಟ್ ಕಂಬಕ್ಕೆ ತಲೆಕೆಳಗಾಗಿ ನೇತು ಹಾಕಿದ ಕಿಡಿಗೇಡಿ
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com














