ಸಾಗರ: ನಾಗರ ಹಾವು ಕಚ್ಚಿ ಗರ್ಭಿಣಿಯೊಬ್ಬರು ಮೃತ ಪಟ್ಟಿದ್ದಾರೆ. ಸಾಗರ ತಾಲೂಕಿನ ಆನಂದಪುರ ಸಮೀ ಪದ ಸುಳುಗೋಡು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಸುಳುಗೋಡಿನ ವೀರಭದ್ರ ಅವರ ಪತ್ನಿ ಸ್ವಾತಿ (26) ಮೃತಳು. ಎರಡು ವರ್ಷಗಳ ಹಿಂದೆಯಷ್ಟೇ ಇವರ ವಿವಾಹವಾಗಿತ್ತು. ಸ್ವಾತಿ ಅವರು ತಮ್ಮ ಮನೆಯ ಹಿತ್ತಲಿನಲ್ಲಿದ್ದಾಗ ಹಾವು ಕಚ್ಚಿದೆ.
ಇದನ್ನೂ ಓದಿ > ಮೇ.07-08 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಕುಟುಂಬದವರು ತಕ್ಷಣವೇ ಅವರನ್ನು ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದರೆ ಮಾರ್ಗ ಮಧ್ಯೆಯೇ ಸ್ವಾತಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.














