• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home Uncategorized

ಕೊಲ್ಲೂರು ದೇಗುಲದ ಭಕ್ತೆಯ ಚಿನ್ನ ಕಳ್ಳತನ, ಭದ್ರಾವತಿಯ 3 ಮಹಿಳೆಯರ ಬಂಧನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 7, 2026
in Uncategorized
ಕೊಲ್ಲೂರು ದೇಗುಲದ ಭಕ್ತೆಯ ಚಿನ್ನ ಕಳ್ಳತನ, ಭದ್ರಾವತಿಯ 3 ಮಹಿಳೆಯರ ಬಂಧನ
Share on FacebookShare on TwitterShare on WhatsApp

ಕೊಲ್ಲೂರು: ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸರು ಚುರುಕಾಗಿ ತನಿಖೆ ನಡೆಸಿ ಕೇವಲ 24 ಗಂಟೆಗಳಲ್ಲಿ ಭೇದಿಸಿರುವ ಘಟನೆ ಗಮನಾರ್ಹವಾಗಿದೆ. #Kollur temple

ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ 80 ಸಾವಿರ ರೂಪಾಯಿ ನಗದು ಕಳವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಮೂಲದ ಮೂವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ, ಜೋಗದಲ್ಲಿ ಜಲ ವೈಭವ!, ಪ್ರವಾಸಿಗರು ಫಿದಾ

ಬಂಧಿತ ಆರೋಪಿಗಳನ್ನು ನೇತ್ರಾವತಿ (33), ಶಾರದ (50) ಹಾಗೂ ದುರ್ಗಮ್ಮ (44) ಎಂದು ಗುರುತಿಸಲಾಗಿದೆ.

ಜುಲೈ 5ರಂದು ನಿಮಿಶಾ ಮತ್ತು ಅವರ ಪತಿ ಪ್ರಜೋಶ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬೆಳಿಗ್ಗೆ ಸುಮಾರು 8.20ರ ವೇಳೆಗೆ ದರ್ಶನ ಮುಗಿಸಿ ದೇವಸ್ಥಾನದ ಹೊರಾಂಗಣಕ್ಕೆ ಬಂದಾಗ, ನಿಮಿಶಾ ಅವರ ಕಂದು ಬಣ್ಣದ ವ್ಯಾನಿಟಿ ಬ್ಯಾಗ್‌ನ ಜಿಪ್ ತೆರೆದಿರುವುದು ಗಮನಕ್ಕೆ ಬಂದಿದೆ. ಅನುಮಾನಗೊಂಡ ಅವರು ಬ್ಯಾಗ್ ಪರಿಶೀಲಿಸಿದಾಗ ಅದರೊಳಗಿದ್ದ 80 ಸಾವಿರ ರೂಪಾಯಿ ನಗದು ಹೊಂದಿದ್ದ ಪರ್ಸ್ ಕಾಣೆಯಾಗಿರುವುದು ಪತ್ತೆಯಾಗಿದೆ. ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ದೂರು ಸ್ವೀಕರಿಸಿದ ಕೊಲ್ಲೂರು ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿ, ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಿದರು.

ಇದನ್ನೂ ಓದಿ >ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಗೆ ಐಜಿಪಿ ಭೇಟಿ 

ಎಸ್‌ಐ ವಿನಯ್ ಎಂ. ಕೊರ್ಲಹಳ್ಳಿ ನೇತೃತ್ವದ ತಂಡ ದೇವಸ್ಥಾನ ಪರಿಸರದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಅಲ್ಲಿದ್ದ ಭಕ್ತರು ತೆಗೆದಿದ್ದ ಫೋಟೋಗಳನ್ನೂ ಸಂಗ್ರಹಿಸಿ ತಾಂತ್ರಿಕ ಮಾಹಿತಿಗಳನ್ನು ಒಗ್ಗೂಡಿಸಿತು.

ತನಿಖೆಯ ಭಾಗವಾಗಿ ಸಂಗ್ರಹಿಸಿದ ಮಾಹಿತಿಗಳ ಆಧಾರದಲ್ಲಿ ಅನುಮಾನಾಸ್ಪದ ಚಲನವಲನಗಳನ್ನು ಗುರುತಿಸಿ, ಕೇವಲ 24 ಗಂಟೆಗಳೊಳಗೆ ಮೂವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಯಿತು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೊಲೀಸರ ತನಿಖೆಯಲ್ಲಿ ಬಂಧಿತ ಮಹಿಳೆಯರ ಕ್ರಿಮಿನಲ್ ಹಿನ್ನೆಲೆಯೂ ಬಹಿರಂಗವಾಗಿದೆ. ಆರೋಪಿ ದುರ್ಗಮ್ಮ ವಿರುದ್ಧ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆ ಹಾಗೂ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಕಳವು ಪ್ರಕರಣ ದಾಖಲಾಗಿವೆ.

ಮತ್ತೊಬ್ಬ ಆರೋಪಿ ಶಾರದಳ ವಿರುದ್ಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎರಡು ಮತ್ತು ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ಮೂರು ಕಳವು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಈ ಕಾರ್ಯಾಚರಣೆಯಲ್ಲಿ ತನಿಖಾಧಿಕಾರಿ ಪಿಎಸ್‌ಐ ಭೀಮಶಂಕರ್, ಹೆಡ್ ಕಾನ್ಸ್‌ಟೇಬಲ್ ರತ್ನಾಕರ, ಪೊಲೀಸ್ ಕಾನ್ಸ್‌ಟೇಬಲ್ ಸಂತೋಷ್, ಕುಂದಾಪುರ ಠಾಣೆಯ ಸಿಬ್ಬಂದಿ ಘನಶ್ಯಾಮ್, ಪದ್ಮಾವತಿ ಹಾಗೂ ಬೈಂದೂರು ಠಾಣೆಯ ಚಂದ್ರಶೇಖರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ > ಪದ್ಮ ಪ್ರಶಸ್ತಿ-2027ರ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ

ಉಡುಪಿ ಪೊಲೀಸರ ಚುರುಕಿನ ಕಾರ್ಯಾಚರಣೆಯಿಂದ ದೇವಸ್ಥಾನ ಪರಿಸರದಲ್ಲಿ ನಡೆದ ಕಳವು ಪ್ರಕರಣಕ್ಕೆ ಶೀಘ್ರದಲ್ಲೇ ತೆರೆಬಿದ್ದಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

image description
Tags: #Kollur temple3 women from Bhadravati arrestedGold stolen from a devotee of Kollur templekannada news livelatest newsmalnad newsshimogashivamoggaಶಿವಮೊಗ್ಗ
Previous Post

ಶಿವಮೊಗ್ಗ, ಜೋಗದಲ್ಲಿ ಜಲ ವೈಭವ!, ಪ್ರವಾಸಿಗರು ಫಿದಾ

Next Post

ನಾಳೆ ಸಾಗರ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ರಜೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ನಾಳೆ ಸಾಗರ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ರಜೆ

ನಾಳೆ ಸಾಗರ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ರಜೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL