ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಹೆಚ್ಚಳ ವಿಚಾರದಲ್ಲಿ ಸಂಪುಟ ತೆಗೆದುಕೊಂಡಿರುವ ನಿರ್ಧಾರ ಗ್ರಾಹಕರ ಜೇಬಿಗೆ ಇನ್ನಷ್ಟು ಹೊರೆಯಾದಂತಾಗಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಾಟ್ಸಪ್ ಗ್ರೂಪ್ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 8 ರೂಪಾಯಿ ಹೆಚ್ಚಿಸಲು ನಿರ್ಧರಿಸಲಾಗಿದೆ.
ಹೆಚ್ಚಿಗೆ ಮಾಡಲಾಗುವ 8 ರೂಪಾಯಿಯಲ್ಲಿ 7 ರೂಪಾಯಿ ಹಾಲು ಉತ್ಪಾದಕರಿಗೆ ಮತ್ತು 1 ರೂಪಾಯಿ ಕೆಎಂಎಫ್ ಗೆ ನೀಡಲಾಗುವುದು ಮತ್ತು ಪರಿಷ್ಕೃತ ದರ ನವೆಂಬರ್ 1 ರಿಂದಲೇ ಜಾರಿಯಾಗಲಿದೆ ಎಂದು ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ.
ಇದನ್ನೂ ಓದಿ > > ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?
ಈ ಮೊದಲು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ತಾತ್ವಿಕ ಅನುಮೋದನೆ ನೀಡಲಾಗಿತ್ತು. ಆದರೆ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಕಾರಣಕ್ಕೆ ದರ ಏರಿಕೆಯನ್ನು ತಡೆ ಹಿಡಿಯಲಾಗಿತ್ತು. ಈಗ ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.
ಇದನ್ನೂ ಓದಿ > >ಶಿವಮೊಗ್ಗ, 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1,01,000 ರೂ. ದಂಡ!













