ಶಿವಮೊಗ್ಗ: ನಗರದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಮೊಮ್ಮಗ ಸ್ವಂತ ಅಜ್ಜಿಯ ತಲೆ ಮೇಲೆ ಸೈಜ್ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಸಂಜೆ ನಡೆದಿದೆ.
ಇದನ್ನೂ ಓದಿ > 250 ಕ್ಕೂ ಹೆಚ್ಚು ಗಾಯಕರಿಂದ ಒಮ್ಮೆಲೆ ನಾಡಗೀತೆ, ಹೇಗಿತ್ತು ಸಾಹಿತ್ಯ ಹುಣ್ಣಿಮೆ ಸಂಭ್ರಮ?
ಅಜ್ಜಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಎಸ್‌ಪಿ ನಿಖಿಲ್ ಬಿ ಸೇರಿದಂತೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ > ಬೈಕ್‌ಗಳ ಮುಖಾಮುಖಿ ಢಿಕ್ಕಿ, ಮುಖ್ಯ ಶಿಕ್ಷಕ ಸಾವು
ಆರೋಪಿತ ಮೊಮ್ಮಗ ಗಾಂಜಾ ವ್ಯಸನಿಯಾಗಿದ್ದ. ಈ ಬಗ್ಗೆ ಅಜ್ಜಿಯು ಪೊಲೀಸರಿಗೆ ದೂರು ನೀಡಲು ತೆರಳುತ್ತಿದ್ದರು. ಇದರಿಂದ ಆಕ್ರೋಶಗೊಂಡ ಮೊಮ್ಮಗನು ರಸ್ತೆಯಲ್ಲಿಯೇ ಅಜ್ಜಿಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಘಟನೆಯ ಕುರಿತಂತೆ ಇನ್ನಷ್ಟೆ ಹೆಚ್ಚಿನ ವಿವರಗಳು ತಿಳಿದು ಬರಬೇಕಾಗಿದೆ.















