ಶಿವಮೊಗ್ಗ: ಪತ್ನಿಗೆ ವರದಕ್ಷಿಣೆ ಕಿರುಕುಳದ ಪ್ರಕರಣದಲ್ಲಿ ಪತಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ 2ನೇ ಜೆಎಂಎಫ್ ಸಿ ನ್ಯಾಯಾಲಯ ತೀರ್ಪು ನೀಡಿದೆ.
ಶಿವಮೊಗ್ಗದ ಹೊರವಲಯ ಹುಣಸೋಡು ನಿವಾಸಿಯಾದ ಶ್ರೀನಿವಾಸ್ ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೈಲು ಶಿಕ್ಷೆಯ ಜೊತೆಗೆ 10 ಸಾವಿರ ರೂ. ದಂಡ ನ್ಯಾಯಾಲಯ ವಿಧಿಸಿದೆ.
ಇದನ್ನೂ ಓದಿ > ಭದ್ರಾವತಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!
ಇದನ್ನೂ ಓದಿ > ಶಾಲಾ, ಕಾಲೇಜು ವಾಹನಗಳ ದಿಢೀರ್ ತಪಾಸಣೆ, ನಾಲ್ವರು ಚಾಲಕರ ವಿರುದ್ಧ ಕೇಸ್!
ನ್ಯಾಯಾಧೀಶರಾದ ಸಿದ್ದರಾಜು ಎನ್ ಕೆ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಜಿ ಕೆ ಕಿರಣ್ ಕುಮಾರ್ ಅವರು ವಾದ ಮಂಡಿಸಿದ್ದರು.
ಹೆಚ್ಚಿನ ವರದಕ್ಷಿಣೆ ತರುವಂತೆ ಅಪರಾಧಿ ಶ್ರೀನಿವಾಸ್, ಪತ್ನಿಗೆ 2023 ರಲ್ಲಿ ಕಿರುಕುಳ ನೀಡಿದ್ದ. ಈ ಸಂಬಂಧ ಪತ್ನಿಯು ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ದಾಖಲಿಸಿದ್ದರು.














