ಶಿವಮೊಗ್ಗ: ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯದ ರಿಜಿಸ್ಟಾರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿ ನಿಯೋಜಿಸಲಾಗಿದೆ.
ಇದನ್ನೂ ಓದಿ > ಶಿವಮೊಗ್ಗ ನಗರದಲ್ಲಿ ಸರಣಿ ಅಪಘಾತಕ್ಕೆ ಕಾರಣ ಯಾರು?
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಐಎಎಸ್ ಅಧಿಕಾರಿ ಹೇಮಂತ್ ಕುಮಾರ್ ಅವರನ್ನು ಕುವೆಂಪು ವಿವಿ ರಿಜಿಸ್ಟಾರ್ ಆಗಿ ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಕುವೆಂಪು ವಿಶ್ವವಿದ್ಯಾನಿಲಯದ ರಿಜಿಸ್ಟಾರ್ ಆಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ವತಿಯಿಂದಲೇ ನೇಮಕಗೊಂಡಿದ್ದ ಮಂಜುನಾಥ್ ಅವರಿಗೆ ಹುದ್ಧೆ ತೋರಿಸದೆ ವರ್ಗಾವಣೆ ಮಾಡಲಾಗಿದೆ.















