ತೀರ್ಥಹಳ್ಳಿ: ಆಗುಂಬೆ ಸಮೀಪದ ಕೌರಿಹಕ್ಲು ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೆಡಿಕಲ್ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ವಾಟ್ಸಪ್ ಗ್ರೂಪ್ : ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಾಟ್ಸಪ್ ಗ್ರೂಪ್‌ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಮೃತರನ್ನು ರಾಯಚೂರು ಜಿಲ್ಲೆಯ ಚೇತನ್ (28) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಒಟ್ಟು 5 ಮೆಡಿಕಲ್ ವಿದ್ಯಾರ್ಥಿಗಳು ಆಗುಂಬೆ ಪ್ರವಾಸಕ್ಕೆ ಬಂದಿದ್ದರು. ಕಾರಿನಲ್ಲಿ ಬರುವಾಗ ನಿದ್ರೆ ಮಂಪರಿನಿಂದಾಗಿ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದು ಅಪ್ಪಳಿಸಿ ಅಪಘಾತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ
ಅಪಘಾತದ ತೀವ್ರತೆಗೆ ಚೇತನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ > >ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!
ವಿಷಯ ತಿಳಿಯುತ್ತಿದ್ದಂತೆ ಆಗುಂಬೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳ ಸಂಪೂರ್ಣ ವಿವರ ಹಾಗೂ ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.
ಇದನ್ನೂ ಓದಿ > > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಅಖಾಡಕ್ಕಿಳಿದ ರೋಬೊಗಳು, ರೋಬೊಗಳ ಕಾಳಗದಲ್ಲಿ ಯಾರಿಗೆ ಗೆಲುವು?













