ಶಿವಮೊಗ್ಗ: ಕೆಎಸ್’ಆರ್’ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಳಲುರು ಬಳಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಕೀರ್ತಿ ನಾಯ್ಕ್(46) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಸುಮಾರು 9:30ರ ಸಮಯದಲ್ಲಿ ಶಿವಮೊಗ್ಗದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಸರ್ಕಾರಿ ಬಸ್ಗೆ ಹೊಳಲೂರು ಮತ್ತು ಸೂಗೂರು ಮಧ್ಯೆ ಎದುರಿನಿಂದ ಬಂದ ಟಿವಿಎಸ್ ವಿಕ್ಟರ್ ಬೈಕ್ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com














