ಶಿವಮೊಗ್ಗ : ಹೊಸನಗರ ತಾಲೂಕಿನ ಸಿದ್ದಪ್ಪನಗುಡಿ ಬಳಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.
ಗಾಯಗೊಂಡ ಯುವಕನನ್ನು ಹೊನ್ನಾಳಿ ತಾಲೂಕು ಕುಂದೂರು ಗ್ರಾಮದ ನಿವಾಸಿ ಪ್ರದೀಪ್ ಎಂದು ಗುರುತಿಸಲಾಗಿದೆ. ಅಪಘಾತದ ಭೀಕರತೆಗೆ ಪ್ರದೀಪ್ ಅವರ ತಲೆ ಹಾಗೂ ಕಾಲಿಗೆ ತೀವ್ರ ಸ್ವರೂಪದ ಪೆಟ್ಟಾಗಿದ್ದು, ತಕ್ಷಣವೇ ಸ್ಥಳೀಯರು ಗಾಯಾಳುವನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನೂ ಓದಿ > ಮೇ.01ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಈ ಘಟನೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕ್ರಮ ಕೈಗೊಂಡಿದ್ದಾರೆ.














