ಶಿವಮೊಗ್ಗ : ಫೆ.2ರಂದು 16 ವರ್ಷದ ಸಂಕೇತ್ ಎಂಬ ಶಾಲಾ ವಿದ್ಯಾರ್ಥಿಯ ಹತ್ಯೆಯಾಗಿರುವುದು ಅತ್ಯಂತ ಖಂಡನೀಯವಾಗಿದ್ದು, ಜಾತಿ ಹಾಗೂ ಧರ್ಮವನ್ನು ನೋಡದೆ ತಪ್ಪಿತಸ್ಥರಿಗೆ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿವಮೊಗ್ಗ ಘಟಕದಿಂದ ಎಂಆರ್ಎಸ್ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಹಿಂಸಾತ್ಮಕ ಕೃತ್ಯ ನಡೆಯಲು ವಿದ್ಯಾರ್ಥಿಗಳಿಗೆ ಸುಲಭವಾಗಿ ಸರಬರಾಜು ಆಗುತ್ತಿರುವ ಡ್ರಗ್ಸ್ ಹಾಗೂ ಗಾಂಜಾ ಪದಾರ್ಥಗಳೇ ಕಾರಣ ಆಗಿದ್ದು, ವಿದ್ಯಾರ್ಥಿಗಳು ಸಮಾಜದಲ್ಲಿ ಕುಕೃತ್ಯ ಎಸಗಲು ಕಾರಣವಾಗುತ್ತಿದೆ. ರಾಜ್ಯದ ಗೃಹ ಇಲಾಖೆ ಹಾಗೂ ಪೊಲೀಸ್ ಇಲಾಖೆ ರಾಜ್ಯದಲ್ಲಿ ಡ್ರಗ್ಸ್ ಜಾಲವನ್ನು ಭೇದಿಸಲು ವಿಫಲವಾಗಿದ್ದು, ಪೊಲೀಸ್ ಇಲಾಖೆಯು ಡ್ರಗ್ಸ್ ಹಾಗೂ ಗಾಂಜಾ ಜಾಲವನ್ನು ಭೇದಿಸಲು ಪ್ರಥಮ ಆದ್ಯತೆ ನೀಡಿ, ಸೂಕ್ತ ಕಾರ್ಯಾಚರಣೆ ಮಾಡಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗ ನಗರದಲ್ಲಿ ಈ ಹತ್ಯೆಯ ನಂತರ ಪೋಷಕರು ಹಾಗೂ ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿ ಇದ್ದಾರೆ. ತಮ್ಮ ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಣಕ್ಕೆ ಬೇಕಾದ ಪೂರಕ ವಾತಾವರಣೆ ಇಲ್ಲದಂತಾಗಿದೆ. ಪೊಲೀಸ್ ಇಲಾಖೆಯು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಡ್ರಗ್ಸ್ಜಾಲ ಭೇದಿಸುವುದಕ್ಕೆ ಸೂಕ್ತ ಕಾರ್ಯಾಚರಣೆ ಮಾಡಿ, ವಿದ್ಯಾರ್ಥಿಗಳಿಗೆ ಬೇಕಾಗಿರುವ ವಾತಾವರಣವನ್ನು ಮರುಸ್ಥಾಪಿಸಬೇಕು ಹಾಗೂ ಮುಂಬರುವ ದಿನಗಳಲ್ಲಿ ಈ ರೀತಿಯ ಘಟನೆ ನಡೆಯದಂತೆ ಕಟ್ಟೆಚ್ಚರವಹಿಸಬೇಕೆಂದು ಮನವಿಯಲ್ಲಿ ಎಬಿವಿಪಿ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಎಬಿವಿಪಿ ಪದಾಧಿಕಾರಿಗಳಾದ ಆದಿತ್ಯಶೆಟ್ಟಿ, ನಂದನ್, ರವಿ ಇರೋಜ, ವಿನಯ್, ಅಭಿಷೇಕ್ ಸೇರಿದಂತೆ ಹಲವರಿದ್ದರು.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 74831













