• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಹೊಳೆಹೊನ್ನೂರು ಗಾಂಧಿ ಸರ್ಕಲ್ ಬಳಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ, ಹೊಳೆಹೊನ್ನೂರಿಗೆ ಕೆಪಿಎಸ್ ಶಾಲೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 14, 2026
in ಶಿವಮೊಗ್ಗ
ಹೊಳೆಹೊನ್ನೂರು ಗಾಂಧಿ ಸರ್ಕಲ್ ಬಳಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ, ಹೊಳೆಹೊನ್ನೂರಿಗೆ ಕೆಪಿಎಸ್ ಶಾಲೆ
Share on FacebookShare on TwitterShare on WhatsApp

ಶಿವಮೊಗ್ಗ: ಕಾರ್ಮಿಕ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಅತ್ಯಂತ ಅನುಕೂಲವಾಗಿರುವ ಇಂದಿರಾ ಕ್ಯಾಂಟಿನ್‌ನ್ನು ಸದ್ಬಳಕೆ ಮಾಡಿಕೊಂಡು ಸಹಕರಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಹೊಳೆಹೊನ್ನೂರು ಪಟ್ಟಣ ಪಂಚಾಯತ್ ವತಿಯಿಂದ ಪಟ್ಟಣದ ಗಾಂಧಿ ಸರ್ಕಲ್ ಬಳಿ ನೂತನವಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್‌ನ್ನು ಶನಿವಾರದಂದು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಗೆ ಒಟ್ಟು 16 ಇಂದಿರಾ ಕ್ಯಾಂಟೀನ್ ಮಂಜೂರಾಗಿದ್ದು, ಹೊಳೆಹೊನ್ನೂರು ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಈ ಕ್ಯಾಂಟಿನ್ 12 ನೇಯದ್ದಾಗಿದೆ. ಇಂದಿರಾ ಕ್ಯಾಂಟಿನ್‌ನಿAದಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸಹಕಾರ ಆಗಲಿದೆ. ಮಾಜಿ ಪ್ರಧಾನಿಯವರಾದ ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯದಲ್ಲಿ ಮೊದಲನೆಯದ್ದೇ ಆಹಾರ ಭದ್ರತೆಯಾಗಿತ್ತು. ನಮ್ಮ ಮುಖ್ಯಮಂತ್ರಿಯವರು ಸಹ ಯಾವುದೇ ವ್ಯಕ್ತಿ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ 2013 ರಲ್ಲಿ ಮೊದಲಿಗೆ ಆದ್ಯತೆ ನೀಡಿದ್ದು ಅನ್ನಭಾಗ್ಯ ಯೋಜನೆಗೆ.
ಇಂದಿರಾ ಕ್ಯಾಂಟಿನ್‌ನಲ್ಲಿ ಪ್ರತಿ ದಿನ ವಿವಿಧ ಬಗೆಯ ತಿಂಡಿ ಮತ್ತು ಊಟ ಲಭ್ಯವಿದ್ದು, ತಿಂಡಿಗೆ ರೂ.5 ಮತ್ತು ಊಟಕ್ಕೆ ರೂ.10 ಇರುತ್ತದೆ. ಸಾರ್ವಜನಿಕರು ಕ್ಯಾಂಟಿನ್‌ಗೆ ಬರಬೇಕು, ಈ ಆಹಾರದ ಗುಣಮಟ್ಟದ ಪರೀಕ್ಷೆ ಮಾಡಿ, ಕ್ಯಾಂಟೀನ್ ನೊಂದಿಗೆ ಸಹಕರಿಸಬೇಕೆಂದರು.
ಶಾಲೆಗಳಲ್ಲಿ 57 ಲಕ್ಷ ಮಕ್ಕಳಿಗೆ ಬಿಸಿಯೂಟ, ಮೊಟ್ಟೆ, ಹಾಲನ್ನು ನೀಡಲಾಗುತ್ತಿದೆ. ನಾನು ಸಹ ಶಾಲೆಗಳಿಗೆ ಭೇಟಿ ನೀಡಿದ ವೇಳೆ ಬಿಸಿಯೂಟ ಸೇವನೆ ಮಾಡುತ್ತೇನೆ. ಅಧಿಕಾರಿಗಳು ಸಹ ಭೇಟಿ ನೀಡಿದ ವೇಳೆ ಬಿಸಿಯೂಟ ಸೇವಿಸಿ, ಗುಣಮಟ್ಟವನ್ನು ಪರೀಕ್ಷಿಸಬೇಕು ಎಂದರು.

ಹೊಳೆಹೊನ್ನೂರಿಗೆ ಕೆಪಿಎಸ್ ಶಾಲೆ

ಹೊಳೆಹೊನ್ನೂರು ಸರ್ಕಾರಿ ಪ್ರೌಢಶಾಲೆಯನ್ನು ಕೆಪಿಎಸ್ ಶಾಲೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದ್ದು ಇಲ್ಲಿ ಎಲ್‌ಕೆಜಿಯಿಂದ 12 ನೇ ತರಗತಿವರೆಗೆವರೆಗೆ ಉಚಿತವಾಗಿ ಒಂದೇ ಸೂರಿನಡಿ ಶಿಕ್ಷಣ ಮತ್ತು ಉಚಿತ ಸಾರಿಗೆ ವ್ಯವಸ್ಥೆ, ಕಂಪ್ಯೂಟರ್, ಕೌಶಲ್ಯಾಭಿವೃದ್ದಿ, ಕಲೆ ಇತರೆ ಪೂರಕ ಶಿಕ್ಷಣವನ್ನು ಇಲ್ಲಿ ನೀಡಲಾಗುವುದು. ರೂ. 3500 ಕೋಟಿ ವೆಚ್ಚದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಗುದ್ದಲಿಪೂಜೆಯನ್ನು ಏಪ್ರಿಲ್ ಅಂತ್ಯದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಶಿವಮೊಗ್ಗದಲ್ಲಿಯೇ ನೆರವೇರಿಸುವರು ಎಂದು ತಿಳಿಸಿದರು.

ಇದನ್ನೂ ಓದಿ  ಶಿವಮೊಗ್ಗ ಸಾಹಿತ್ಯ ಸಮ್ಮೇಳನ ಗೋಷ್ಟಿ, ಮಲೆನಾಡಿನ ಒಡಲ ಬೆಂಕಿಯಿಂದ ಜೀವ ಜಲ ಖಾಲಿ!, ಪ್ರಕೃತಿ ಉಳಿಸಲು ನಾವೇನು ಮಾಡಬೇಕು?

ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ಮಾತನಾಡಿ, ಕಾರ್ಮಿಕ ವರ್ಗ, ಬಡ ವರ್ಗದವರಿಗೆ ಇಂದಿರಾ ಕ್ಯಾಂಟೀನ್ ಬಹು ಉಪಯುಕ್ತವಾಗಿದೆ. ಇಲ್ಲಿ ಆಹಾರದ ಗುಣಮಟ್ಟ ನಿರ್ವಹಣೆ ಚೆನ್ನಾಗಿ ಮಾಡಿಕೊಂಡು ಹೋದರೆ ಇಂದಿರಾ ಕ್ಯಾಂಟೀನ್ ಯೋಜನೆ ಸಾರ್ಥಕವಾಗುತ್ತದೆ.
ಆಹಾರ ಭದ್ರತೆಗಾಗಿ ಹೋರಾಡಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹೆಸರನ್ನು ಈ ಕ್ಯಾಂಟಿನ್‌ಗೆ ಇಟ್ಟಿರುವುದು ಅತ್ಯಂತ ಸೂಕ್ತವಾಗಿದ್ದು ಎಲ್ಲರೂ ಕ್ಯಾಂಟೀನ್‌ನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿದರು.
ಇದೇ ವೇಳೆ ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದಿAದ ವೈದ್ಯರನ್ನು ಬೇರೆಡೆ ವರ್ಗಾವಣೆ ಮಾಡಬಾರದು ಎಂದು ಸಾರ್ವಜನಿಕರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೆ ಮನವಿ ಮಾಡಿದರು.

ಡಿಯುಡಿಸಿ ಯೋಜನಾ ನಿರ್ದೇಶಕರಾದ ರಂಗಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಮೊದಲ ಹಂತದಲ್ಲಿ ಜಿಲ್ಲೆಗೆ 7 ಕ್ಯಾಂಟೀನ್ ಮಂಜೂರಾಗಿ, ಅವು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡುತ್ತಿವೆ.
2022-23 ನೇ ಸಾಲಿಗೆ 9 ಕ್ಯಾಂಟೀನ್ ಮಂಜೂರಾಗಿದ್ದು, ಹೊಳೆಹೊನ್ನೂರಲ್ಲಿ ಇಂದು ಉದ್ಘಾಟಿಸುತ್ತಿರುವುದು 12 ನೇ ಕ್ಯಾಂಟಿನ್ ಆಗಿದೆ. ಪ್ರತಿ ದಿನ ಬೆಳಿಗ್ಗೆ 2 ತರಹದ ತಿಂಡಿ ಸಿದ್ದವಿರುತ್ತದೆ. ಬೆಳಗಿನ ತಿಂಡಿಗೆ ರೂ. 5 ಮತ್ತು ಮಧ್ಯಾಹ್ನ, ರಾತ್ರಿ ಊಟಕ್ಕೆ ತಲಾ ರೂ. 10 ದರ ನಿಗದಿಪಡಿಸಲಾಗಿದೆ ಎಂದರು.

ಇದನ್ನೂ ಓದಿ  ಭದ್ರಾವತಿ ನಗರಸಭೆ, 1.46 ಕೋಟಿ ಉಳಿತಾಯ ಬಜೆಟ್ ಮಂಡನೆ, ಹೊಸ ಯೋಜನೆಗಳೇನು?

ಕಾರ್ಯಕ್ರಮದಲ್ಲಿ ಹಾಪ್ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಕೆಶಿನಾಕೃತೋ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ದೇವಿಕುಮಾರ್, ಇತರೆ ಮುಖಂಡರು, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ನಾಗರೀಕರು, ಪಾಲ್ಗೊಂಡಿದ್ದರು.

Tags: HolehonnurInauguration of Indira Canteen near Gandhi Circlekannada newskannada news liveKPS Schoollatest newsmalnad newsಶಿವಮೊಗ್ಗ
Previous Post

ಭದ್ರಾವತಿ ನಗರಸಭೆ, 1.46 ಕೋಟಿ ಉಳಿತಾಯ ಬಜೆಟ್ ಮಂಡನೆ, ಹೊಸ ಯೋಜನೆಗಳೇನು?

Next Post

ವಿನೋಬನಗರ ಪೊಲೀಸ್ ಠಾಣೆಯಿಂದ ಸಾರ್ವಜನಿಕರ ಅಹವಾಲು ಸಭೆ, ಪೊಲೀಸ್ ಸಿಬ್ಬಂದಿ ಆಕಾಶ್ ನೀಡಿದ ಸಲಹೆಗಳೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ವಿನೋಬನಗರ ಪೊಲೀಸ್ ಠಾಣೆಯಿಂದ ಸಾರ್ವಜನಿಕರ ಅಹವಾಲು ಸಭೆ, ಪೊಲೀಸ್ ಸಿಬ್ಬಂದಿ ಆಕಾಶ್ ನೀಡಿದ ಸಲಹೆಗಳೇನು?

ವಿನೋಬನಗರ ಪೊಲೀಸ್ ಠಾಣೆಯಿಂದ ಸಾರ್ವಜನಿಕರ ಅಹವಾಲು ಸಭೆ, ಪೊಲೀಸ್ ಸಿಬ್ಬಂದಿ ಆಕಾಶ್ ನೀಡಿದ ಸಲಹೆಗಳೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL