• About Us
  • Advertise
  • Privacy & Policy
  • Contact Us
Friday, September 11, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಮಿಸ್ಟಿರಿಯೊ 6.0’ ಉದ್ಘಾಟನೆ, ಆ್ಯಪ್ ಸ್ಪರ್ಶಕ್ಕೆ ಪ್ರಜ್ವಲಿಸಿದ ದೀಪ

ಕಲಿಕೆ-ನವೀನತೆ ಯಶಸ್ವಿ ಇಂಜಿನಿಯರ್‌ನ ಗುರುತು: ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 16, 2026
in ಶಿವಮೊಗ್ಗ
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಮಿಸ್ಟಿರಿಯೊ 6.0’ ಉದ್ಘಾಟನೆ, ಆ್ಯಪ್ ಸ್ಪರ್ಶಕ್ಕೆ ಪ್ರಜ್ವಲಿಸಿದ  ದೀಪ
Share on FacebookShare on TwitterShare on WhatsApp
ಶಿವಮೊಗ್ಗ: ಕಲಿಕೆ, ನವೀನತೆ ಮತ್ತು ಸೃಜನಶೀಲತೆಯೆ ಯಶಸ್ವಿ ಇಂಜಿನಿಯರ್‌ನ ನಿಜವಾದ ಗುರುತು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಶನಿವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಮಿಸ್ಟಿರಿಯೊ 6.0’ ರಾಜ್ಯಮಟ್ಟದ ತಾಂತ್ರಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಲೆಕ್ಟ್ರಾನಿಕ್ಸ್ ಎಂದರೆ ಕೇವಲ ಸರ್ಕ್ಯೂಟ್‌ಗಳು, ಮೈಕ್ರೊಪ್ರೊಸೆಸರ್‌ಗಳು ಅಥವಾ ಯಂತ್ರಗಳ ಅಧ್ಯಯನವಲ್ಲ. ಅದು ಕಾಣದ ಬುದ್ಧಿವಂತಿಕೆಯನ್ನು ಅರಿಯುವ ಪ್ರಯಾಣ. ಒಂದು ಸಣ್ಣ ಮೈಕ್ರೋಪ್ರೊಸೆಸರ್ ಕ್ಷಣಾರ್ಧದಲ್ಲಿ ಕೋಟ್ಯಾಂತರ ಕಾರ್ಯಗಳನ್ನು ನಿರ್ವಹಿಸುತ್ತದೆ. ನಮ್ಮ ಕಣ್ಣಿಗೆ ಕಾಣದ ಆ ಎಲೆಕ್ಟ್ರಾನಿಕ್ ಚಕ್ರವೇ ಇಂದಿನ ಜಗತ್ತನ್ನು ಚಲಾಯಿಸುತ್ತಿದೆ.
ವಿದ್ಯಾರ್ಥಿಗಳು ಒಂದು ತಾಂತ್ರಿಕ ಸಮಸ್ಯೆಯನ್ನು ಪರಿಹರಿಸುವಾಗ, ಕೇವಲ ಯಂತ್ರದೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂಬ ಸೀಮಿತಕ್ಕಿಂತ, ಅದರ ಹಿಂದೆ ಅಡಗಿರುವ ವಿಜ್ಞಾನ, ತಾಂತ್ರಿಕತೆಯನ್ನು ಅರ್ಥೈಸಿಕೊಳ್ಳುವ ಕುತೂಹಲ ಬೆಳೆಸಿಕೊಳ್ಳಿ.
ಇದನ್ನೂ ಓದಿ > ಶಿವಮೊಗ್ಗದಲ್ಲಿ ಬೆಳ್ಳಂಬೆಳ್ಳಗೆ ಜೆಸಿಬಿ ಘರ್ಜನೆ, ಹೂವಿನ ಮಾರುಕಟ್ಟೆ ತೆರವು
ಡಾರ್ಕ್ ಕೋಡಿಂಗ್ ನಂತಹ ಸವಾಲುಗಳು, ಮನಸ್ಸಿನ ಸ್ಪಷ್ಟತೆ, ತಾರ್ಕಿಕ ಚಿಂತನೆ ಮತ್ತು ಕೋಡಿಂಗ್ ಭಾಷೆಯ ಮೇಲಿನ ಹಿಡಿತದ ಮೇಲೆ ಅವಲಂಬಿತವಾಗಿರುತ್ತದೆ. ಒಂದು ಸೆಮಿಕೋಲನ್ ತಪ್ಪಿದರೂ ಸಂಪೂರ್ಣ ವ್ಯವಸ್ಥೆಯೆ ಸ್ಥಗಿತಗೊಳ್ಳಬಹುದು. ಅಷ್ಟು ಸೂಕ್ಷ್ಮವಾದ ಕ್ಷೇತ್ರ ಇದು. ಅದರೆ ಅದೇ ನಿಜವಾದ ತಾಂತ್ರಿಕ ಸಾಮರ್ಥ್ಯದ ಪರೀಕ್ಷೆ. ನಾಲ್ಕನೇ ಅಥವಾ ಐದನೇ ಸೆಮಿಸ್ಟರ್‌ಗೆ ಬಂದಾಗ ವಿದ್ಯಾರ್ಥಿಗಳಲ್ಲಿ ಇಂತಹ ಪರಿಣಿತಿ ಬೆಳೆಯಬೇಕು ಎಂದು ಹೇಳಿದರು.
ಎಲ್ಫಾನ್ಜ್ ಟೆಕ್ನಾಲಜಿ ಆಡಳಿತ ಮುಖ್ಯಸ್ಥರಾದ ಸುನಿಲ್ ಕುಮಾರ್.ಕೆ.ಎಸ್ ಮಾತನಾಡಿ, ಇಂದಿನ ಉದ್ಯೋಗ ನೀಡುವ ಸಂಸ್ಥೆಗಳು ಕೇವಲ ಅಂಕಪಟ್ಟಿಯನ್ನು ನೋಡುವುದಿಲ್ಲ. ನಮ್ಮೊಳಗಿರುವ ಹೊಸ ಪರಿಹಾರಗಳನ್ನು ಆವಿಷ್ಕರಿಸುವ ಮನಸ್ಸು, ನವೀನ ಆಲೋಚನೆಗಳನ್ನು ರೂಪಿಸುವ ಪ್ರತಿಭೆ ಮತ್ತು ತಂತ್ರಜ್ಞಾನವನ್ನು ಸಮಾಜದ ಒಳಿತಿಗಾಗಿ ಹೇಗೆ ಬಳಸುತ್ತೇವೆ ಎಂಬ ದೃಷ್ಟಿಕೋನವನ್ನು ಗಮನಿಸಲಾಗುತ್ತದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿ, ಇಂದಿನ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಕೌಶಲ್ಯ ಮತ್ತು ನವೀನತೆಯತ್ತ ಚಿತ್ತ ಹರಿಸುತ್ತಿದೆ. ಕಾಲೇಜು ಎಂದರೆ ಕೇವಲ ತರಗತಿ ಕೊಠಡಿಗಳಲ್ಲ, ಭವಿಷ್ಯದ ಆವಿಷ್ಕಾರಗಳನ್ನು ಹುಟ್ಟುಹಾಕುವ ಆವಿಷ್ಕಾರಿ ಕೇಂದ್ರಗಳಾಗಬೇಕು ಎಂಬ ಅಪೇಕ್ಷೆ ಹೆಚ್ಚುತ್ತಿದೆ. ಅದಕ್ಕೆ ಪೂರಕವೆಂಬಂತೆ ವಿದ್ಯಾರ್ಥಿಗಳು ಅಣಿಗೊಳ್ಳಬೇಕಿದೆ ಎಂದು ಹೇಳಿದರು.
ಆ್ಯಪ್ ಸ್ಪರ್ಶಕ್ಕೆ ಪ್ರಜ್ವಲಿಸಿದ ಉದ್ಘಾಟನಾ ದೀಪ 
ಎಲೆಕ್ಟ್ರಾನಿಕ್ಸ್ ಸರ್ಕ್ಯೂಟ್‌ ಆಧಾರಿತವಾಗಿ ವಿನ್ಯಾಸಗೊಳಿಸಿದ್ದ ದೀಪಸ್ತಂಭವನ್ನು ಅತಿಥಿಗಳು ಮೊಬೈಲ್ ಆ್ಯಪ್ ಮೂಲಕ ಬಟನ್ ಒತ್ತಿ, ದೀಪ ಬೆಳಗಿಸಿ ಉದ್ಘಾಟಿಸಿದರು. ಕರ್ಪೂರ ಮತ್ತು ಬತ್ತಿಯ ಸಂಯೋಜನೆಯಲ್ಲಿ ತಂತ್ರಜ್ಞಾನದ ಮೂಲಕ ಪ್ರಜ್ವಲಿಸಿದ ದೀಪವು ನೆರೆದಿದ್ದವರನ್ನು ಆಕರ್ಷಿಸಿತು. ಆರ್ಡಿನೊ ಹಾಗೂ ರಿಲೆ ತಂತ್ರಜ್ಞಾನವನ್ನು ಬಳಸಿ ನಿರ್ಮಿಸಲಾದ ಈ ನವೀನ ದೀಪಸ್ತಂಭವನ್ನು ವಿದ್ಯಾರ್ಥಿಗಳು ಬ್ಲೂಟುತ್ ಸಂವಹನ ವ್ಯವಸ್ಥೆಯೊಂದಿಗೆ ಸಂಯೋಜಿಸಿದ್ದರು.
ಸಂಶೋಧನ ಡೀನ್ ಡಾ.ಎಸ್.ವಿ.ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕರಾದ ಡಾ.ಪ್ರೇಮಾ.ಕೆ.ಎನ್, ರೂಪಾ.ಬಿ.ಎಸ್, ಸ್ಮೀತಾ.ಎಸ್.ಎಂ, ವಿದ್ಯಾರ್ಥಿ ಸಂಯೋಜಕರಾದ ಅನಿರುದ್, ಪ್ರಾರ್ಥನ, ಸ್ಪೂರ್ತಿ, ವಿಕಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ರಾಜ್ಯದ 16 ಇಂಜಿನಿಯರಿಂಗ್ ಕಾಲೇಜಿನ 150 ಕ್ಕೂ ಹೆಚ್ಚು ವಿದ್ಯಾರ್ಥಿ ತಂಡಗಳು ಭಾಗವಹಿಸಿದ್ದರು. ಹಾಬಿ ಪ್ರಾಜೆಕ್ಟ್, ರಿಕ್ರೂಟ್ ಎಕ್ಸ್, ಬಗ್ ಬೌಂಟಿ, ಇಂಡಸ್ಟ್ರಿ 4.0, ಪೇಪರ್ ಪ್ರೆಸೆಂಟೇಶನ್, ಹ್ಯಾಕ್-ಎಕ್ಸ್, ಎಂಜಿನಿಯರಿಂಗ್ ಎ ವೇ ಔಟ್ ನಂತಹ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
Tags: Inauguration of 'Mysterio 6.0' at JNNCE Collegekannada newskannada news livelatest newsmalnad newsshivamoggathe lamp lit up at the touch of the appಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಬೆಳ್ಳಂಬೆಳ್ಳಗೆ ಜೆಸಿಬಿ ಘರ್ಜನೆ, ಹೂವಿನ ಮಾರುಕಟ್ಟೆ ತೆರವು

Next Post

ಕೇಂದ್ರ ಸರ್ಕಾರದಿಂದ ಜನರ ಮೇಲೆ ಬೆಲೆ ಏರಿಕೆಯ ಬರೆ, ಎಸ್.ಕುಮರೇಶ್ ಆಕ್ರೋಶ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕೇಂದ್ರ ಸರ್ಕಾರದಿಂದ ಜನರ ಮೇಲೆ ಬೆಲೆ ಏರಿಕೆಯ ಬರೆ, ಎಸ್.ಕುಮರೇಶ್ ಆಕ್ರೋಶ

ಕೇಂದ್ರ ಸರ್ಕಾರದಿಂದ ಜನರ ಮೇಲೆ ಬೆಲೆ ಏರಿಕೆಯ ಬರೆ, ಎಸ್.ಕುಮರೇಶ್ ಆಕ್ರೋಶ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026
ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

September 11, 2026
ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

September 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026

Copyright © 2026 Yuva Dhwani. Designed by KIPL