• About Us
  • Advertise
  • Privacy & Policy
  • Contact Us
Monday, October 26, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ದಸರಾ ಅಂಬಾರಿ ಮೆರವಣಿಗೆ ಅವಘಡ, ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 24, 2026
in ಶಿವಮೊಗ್ಗ
ದಸರಾ ಅಂಬಾರಿ ಮೆರವಣಿಗೆ ಅವಘಡ, ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ
Share on FacebookShare on TwitterShare on WhatsApp

ಶಿವಮೊಗ್ಗ: ದಸರಾ ಮಹೋತ್ಸವದ ಅಂತಿಮ ದಿನವಾದ ಅಕ್ಟೋಬರ್ 21 ರಂದು ಮಧ್ಯಾಹ್ನ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯ ಅಂಬಾರಿ ಮೆರವಣಿಗೆಯಲ್ಲಿ ಆಕಸ್ಮಿಕವಾಗಿ ನಡೆದ ಅವಘಡದ ಕುರಿತು, ಸರ್ಕಾರವು ಸಂಪೂರ್ಣ ವರದಿ ಪಡೆದು ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು.

ಮಹಾನಗರಪಾಲಿಕೆ ಪರಿಷತಗ ಸಭಾಂಗಣದಲ್ಲು ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಉತ್ಸವವು ಅತ್ಯಂತ ಸಂಭ್ರಮ ಹಾಗೂ ಅದ್ದೂರಿಯಾಗೇ ನಡೆದಿದೆ. ಆದರೆ ಅಂತಿಮ ದಿನವಾದ ಅಕ್ಟೋಬರ್ 21ರಂದು ಅಂಬಾರಿ ಹೊತ್ತ ‘ಸೋಮಣ್ಣ’ ಆನೆಯು ಗಾಬರಿಗೊಂಡು ಓಡಿದ ಕಾರಣ ಅಂಬಾರಿ ಬಿದ್ದು ಅವಘಡ ಸಂಭವಿಸಿದೆ ಎಂದು ವಿವರಿಸಿದರು.

ಯಾವುದೇ ಪ್ರಾಣಹಾನಿಯಿಲ್ಲ -ಎಚ್ಚೆತ್ತುಕೊಳ್ಳುವ ಸಂದರ್ಭ

ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಮಾನವ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಇದು ನಮಗೆ ಗಂಭೀರವಾಗಿ ಎಚ್ಚೆತ್ತುಕೊಳ್ಳುವ ಸಂದರ್ಭವನ್ನು ಸೃಷ್ಟಿಸಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ > >ಕಾರು, ಕ್ಯಾಂಟರ್‌ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು!

ಕಳೆದ ಕೆಲವು ವರ್ಷಗಳಿಂದ ಅರಣ್ಯದಿಂದ ಆನೆಗಳನ್ನು ಕರೆತಂದು ತರಬೇತಿ ನೀಡಿ ಅಂಬಾರಿಗೆ ಬಳಸಿಕೊಳ್ಳಲಾಗುತ್ತಿದೆ. ಈ ಬಾರಿಯೂ ಯಶಸ್ವಿಯಾಗಿ ತರಬೇತಿ ನೀಡಲಾಗಿತ್ತು. ಸರ್ಕಾರದ ಅಧಿಕೃತ ಅನುಮತಿ ಪಡೆದು, ಅರಣ್ಯ ಇಲಾಖೆಯ ನಿಯಮಾನುಸಾರ ಆನೆಗಳ ಆಯ್ಕೆ ಮತ್ತು ತರಬೇತಿ ನೀಡಲಾಗಿದೆ.

ಒಮ್ಮತದ ನಿರ್ಧಾರ

ಅಧಿಕಾರಿಗಳ ಸಂಪೂರ್ಣ ಒಮ್ಮತ, ಮಾಹಿತಿ ಹಾಗೂ ಆತ್ಮವಿಶ್ವಾಸದಿಂದಲೇ ‘ಸೋಮಣ್ಣ’ ಆನೆಯೇ ಅಂಬಾರಿ ಹೊರಬೇಕು ಎಂದು ಮೊದಲೇ ನಿರ್ಧರಿಸಲಾಗಿತ್ತೇ ಹೊರತು ಕೊನೆಯ ಕ್ಷಣದ ನಿರ್ಧಾರವಲ್ಲ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ತರಬೇತಿ ನೀಡಲಾಗಿತ್ತು. ಸೋಮಣ್ಣ ಆನೆಗೆ ಅಂಬಾರಿ ಹೊರುವ ಸಾಮರ್ಥ್ಯವಿದೆ ಎಂಬ ಕಾರಣಕ್ಕೇ ಈ ತೀರ್ಮಾನ ಕೈಗೊಳ್ಳಲಾಗಿತ್ತು.

ಅಂಬಾರಿ ಸಾಗಿಸುವ ಪ್ರಕ್ರಿಯೆಯಲ್ಲಿ ಡಿಸಿಎಫ್, ಡಿಸಿ, ಎಸ್‌ಪಿ, ಸಿಇಓ, ಎಡಿಸಿ, ಶಾಸಕರು ಹಾಗೂ ಪಾಲಿಕೆ ಆಯುಕ್ತರು ಸೇರಿದಂತೆ ಎಲ್ಲಾ ಹಿರಿಯ ಅಧಿಕಾರಿಗಳು ಮತ್ತು ಸಮಿತಿಯವರು ಸಕ್ರಿಯವಾಗಿ ಭಾಗವಹಿಸಿ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಉತ್ತಮ ತಂಡದ ಕೆಲಸ ಇಲ್ಲಿ ನಡೆದಿದೆ. ಮುಖ್ಯಮಂತ್ರಿಗಳು ಸಹ ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಅವಘಡದ ವೇಳೆ ದೇವಿಯ ವಿಗ್ರಹ ಹಾಗೂ ಆಭರಣಗಳಿಗೆ ಯಾವುದೇ ನಷ್ಟ ಸಂಭವಿಸಿಲ್ಲ. ಇತರೆ ಸಣ್ಣಪುಟ್ಟ ನಷ್ಟಗಳಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು.

ಇದನ್ನೂ ಓದಿ > >ಚೆಸ್ ಪಂದ್ಯಾವಳಿ, S.R.N.M. ಕಾಲೇಜಿಗೆ ಪ್ರಥಮ ಸ್ಥಾನ

ಮುಂದಿನ ಎಚ್ಚರಿಕೆ:

ಲಭ್ಯವಿರುವ ಎಲ್ಲ ಸಾಕ್ಷ್ಯಾಧಾರಗಳಿಂದ ಆನೆ ಗಾಬರಿಯಾಗಿ ಈ ಅವಘಡ ಸಂಭವಿಸಿದೆ ಎಂಬುದು ತಿಳಿದುಬಂದಿದೆ. ಇನ್ನು ಮುಂದೆ ಅಂಬಾರಿ ಹೊರುವ ವಿಚಾರದಲ್ಲಿ ಮತ್ತಷ್ಟು ವೈಜ್ಞಾನಿಕವಾಗಿ ತೀರ್ಮಾನ ಕೈಗೊಳ್ಳಬೇಕು ಹಾಗೂ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂಬ ಸಂದೇಶವನ್ನು ಈ ಘಟನೆ ನಮಗೆ ನೀಡಿದೆ ಎಂದು ಸಚಿವರು ತಿಳಿಸಿದರು. ಸರ್ಕಾರಕ್ಕೆ ಈ ಕುರಿತು ನೆನ್ನೆ ವರದಿಯನ್ನು ಸಲ್ಲಿಸಲಾಗಿದೆ ಎಂದರು.

ಈ ಸಭೆಯಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಚೇತನ್, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾ ಮಟ್ಟದ ಅಧ್ಯಕ್ಷ ಚಂದ್ರಭೂಪಾಲ್, ಎಸ್‌ಪಿ ನಿಖಿಲ್ ಬಿ., ಜಿ.ಪಂ. ಸಿಇಓ ರಿಷಿ ಆನಂದ್, ಸಿಸಿಎಫ್ ಹನುಮಂತಪ್ಪ, ಎಡಿಸಿ ಅಭಿಷೇಕ್ ವಿ., ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಹಾಗೂ ಇತರೆ ಮುಖಂಡರು ಮತ್ತು ಹಿರಿಯ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ > >ಶಿವಮೊಗ್ಗ ದಸರಾ ಆನೆ ಅವಘಡದ ಬೆನ್ನಲ್ಲೇ ಅರಣ್ಯ ಇಲಾಖೆ ಅಲರ್ಟ್‌: ಜಂಬೂಸವಾರಿಗೆ ಹೊಸ ರೂಲ್ಸ್‌!

Tags: Dasara Ambari processionIncident Dasara Ambari shivamogaIncident during Dasara Ambari procession; Minister Madhu Bangarappa issues clarificationkannada newskannada news livelatest newsmalnad newsMinister Madhu BangarappaMLA S.N. ChannabasappashimogashivamoggaSP Nikhil Bಶಿವಮೊಗ್ಗ
Previous Post

ಚೆಸ್ ಪಂದ್ಯಾವಳಿ, S.R.N.M. ಕಾಲೇಜಿಗೆ ಪ್ರಥಮ ಸ್ಥಾನ

Next Post

ರೈತರ ಸಂಕಷ್ಟಕ್ಕೆ ಸ್ಪಂದಿಸುವವರಿಲ್ಲವೇ?, ಖಾಲಿ ಹುದ್ದೆ ಭರ್ತಿಗೆ ಒತ್ತಾಯ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ರೈತರ ಸಂಕಷ್ಟಕ್ಕೆ ಸ್ಪಂದಿಸುವವರಿಲ್ಲವೇ?, ಖಾಲಿ ಹುದ್ದೆ ಭರ್ತಿಗೆ ಒತ್ತಾಯ!

ರೈತರ ಸಂಕಷ್ಟಕ್ಕೆ ಸ್ಪಂದಿಸುವವರಿಲ್ಲವೇ?, ಖಾಲಿ ಹುದ್ದೆ ಭರ್ತಿಗೆ ಒತ್ತಾಯ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ವಿಷ ಸೇವಿಸಿದ್ದ ಗೃಹಿಣಿ ಆಸ್ಪತ್ರೆಯಲ್ಲಿ ಸಾವು, ಕಾರಣವೇನು?

October 26, 2026
ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026

Copyright © 2026 Yuva Dhwani. Designed by KIPL