• About Us
  • Advertise
  • Privacy & Policy
  • Contact Us
Saturday, October 31, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್.ಎನ್.ಸಿ.ಇ: ಎಂಬಿಎ–ಎಂಸಿಎ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತಂತ್ರಜ್ಞಾನದಿಂದಲೇ ಇಂದು ಆರ್ಥಿಕ ಮೌಲ್ಯ ಸೃಷ್ಟಿ | ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 31, 2026
in ಶಿವಮೊಗ್ಗ
ಜೆ.ಎನ್.ಎನ್.ಸಿ.ಇ: ಎಂಬಿಎ–ಎಂಸಿಎ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ
Share on FacebookShare on TwitterShare on WhatsApp
ಶಿವಮೊಗ್ಗ: ಇಂದು ತಂತ್ರಜ್ಞಾನವೇ ಆರ್ಥಿಕ ಮೌಲ್ಯ ಸೃಷ್ಟಿಯ ಪ್ರಮುಖ ಸಾಧನವಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅವಕಾಶಗಳು ಮತ್ತು ಸವಾಲುಗಳು ಸಮಾನವಾಗಿ ಬೆಳೆಯುತ್ತಿದ್ದು, ಬದಲಾಗುತ್ತಿರುವ ವ್ಯವಸ್ಥೆಗೆ ಹೊಂದಿಕೊಳ್ಳುವ ಕಲಿಕಾ ಸಾಮರ್ಥ್ಯ ಪಡೆದ ಪದವೀಧರರ ಅಗತ್ಯ ಸಮಾಜಕ್ಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.
ನಗರದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಪ್ರಥಮ ವರ್ಷದ ಎಂಬಿಎ ಮತ್ತು ಎಂಸಿಎ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಕಾಲದಲ್ಲಿ ಸಾಂಪ್ರದಾಯಿಕ ಗುಮಾಸ್ತ ಹುದ್ದೆಗಳ ಸ್ವರೂಪ ಬದಲಾಗಿದ್ದು, ವ್ಯವಸ್ಥೆಯ ಕಾರ್ಯನಿರ್ವಹಣೆ ಹಾಗೂ ಫಲಿತಾಂಶಗಳನ್ನು ವಿಶ್ಲೇಷಿಸಿ, ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಹೊಂದಿರುವ ಪದವೀಧರರಿಗೆ ಹೆಚ್ಚಿನ ಬೇಡಿಕೆಯಿದೆ. ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಊಹಿಸುವ ವ್ಯವಸ್ಥೆಯಾಗಿದ್ದು, ಅದರಿಂದ ತಪ್ಪುಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ.
ಹೀಗಾಗಿ ಎಐ ನೀಡುವ ಫಲಿತಾಂಶಗಳಲ್ಲಿನ ದೋಷಗಳನ್ನು ಗುರುತಿಸಿ, ಸರಿಪಡಿಸುವ ಪರಿಣತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ತಂತ್ರಜ್ಞಾನ ಅಳವಡಿಸಿಕೊಳ್ಳುವಾಗ ಅದರ ಬಳಕೆಯಿಂದ ಸಂಭವಿಸಬಹುದಾದ ತಪ್ಪುಗಳ ಪರಿಣಾಮ ಮತ್ತು ವೆಚ್ಚವನ್ನೂ ಅರ್ಥಮಾಡಿಕೊಳ್ಳಬೇಕು ಎಂದರು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಾಟ್ಸಪ್‌ ಗ್ರೂಪ್‌ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿ 
ಒಂದು ಕೆಲಸವನ್ನು ಸರಿಯಾಗಿ ಆರಂಭಿಸಿದರೆ ಅರ್ಧ ಕೆಲಸ ಪೂರ್ಣಗೊಂಡಂತೆ. ಅದರಂತೆ ಆಸಕ್ತಿಯ ಕೋರ್ಸ್ ಆಯ್ಕೆ ಮಾಡಿಕೊಂಡು, ಸ್ನಾತಕೋತ್ತರ ಅಧ್ಯಯನದ ಮುಂದಿನ ಹಂತಕ್ಕೆ ಪ್ರವೇಶಿಸಿರುವ ವಿದ್ಯಾರ್ಥಿಗಳು, ತಮ್ಮ ಕಲಿಕೆಯ ಜವಾಬ್ದಾರಿಯನ್ನು ತಾವೇ ನಿರ್ವಹಿಸಬೇಕು. ಸ್ನಾತಕೋತ್ತರ ಶಿಕ್ಷಣದಲ್ಲಿ ಪ್ರತಿಯೊಂದು ಹಂತದಲ್ಲೂ ಮಾರ್ಗದರ್ಶನ ನಿರೀಕ್ಷಿಸುವುದಕ್ಕಿಂತ, ಏನು ಕಲಿಯಬೇಕು, ಹೇಗೆ ಕಲಿಯಬೇಕು ಮತ್ತು ಎಲ್ಲಿ ಕಲಿಯಬೇಕು ಎಂಬುದನ್ನು ಸ್ವತಃ ನಿರ್ಧರಿಸುವ ಸ್ವಯಂ ಕಲಿಕೆಯ ಮನೋಭಾವ ಬೆಳೆಸಿಕೊಳ್ಳಬೇಕು.
ಇಂದಿನ ಶಿಕ್ಷಣ ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಸಂಸ್ಥೆಗಳು ಕಲಿಕೆಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುತ್ತವೆ. ತರಗತಿಯ ಒಳಗಿನ ಪಾಠಗಳ ಜತೆಗೆ ಪ್ರಾಯೋಗಿಕ ಅನುಭವ ಮತ್ತು ತರಗತಿಯ ಹೊರಗಿನ ಕಲಿಕೆಗೂ ಆದ್ಯತೆ ನೀಡಬೇಕು. ‘ಕಲಿಯುವುದನ್ನು ಹೇಗೆ ಕಲಿಯಬೇಕು’ ಎಂಬುದೇ ಇಂದಿನ ಶಿಕ್ಷಣದ ಮೂಲ ಆಶಯವಾಗಿದೆ ಎಂದು ತಿಳಿಸಿದರು.
ಎನ್ಇಎಸ್ ನಿರ್ದೇಶಕರಾದ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ ಮಾತನಾಡಿ, ಯುವ ಸಮೂಹದಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ. ಭಾರತದ ಪ್ರತಿಯೊಂದು ಆಚರಣೆಗಳೂ ವೈಜ್ಞಾನಿಕ ತಳಹದಿಯಲ್ಲಿ ರೂಪುಗೊಂಡಿವೆ. ಅವುಗಳ ಮಹತ್ವವನ್ನು ಅರಿತು ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಯುವ ಸಮೂಹದ ಮೇಲಿದೆ ಎಂದರು.
ಇದನ್ನೂ ಓದಿ > >ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!
ಎಂಬಿಎ ವಿಭಾಗದ ಮುಖ್ಯಸ್ಥ ಡಾ. ಶ್ರೀಕಾಂತ್ ಮತ್ತು ಎಂಸಿಎ ವಿಭಾಗದ ಮುಖ್ಯಸ್ಥ ಡಾ. ಹೇಮಂತ್ ಕುಮಾರ್ ತಮ್ಮ ವಿಭಾಗಗಳ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಕೌಶಲ್ಯಾಧಾರಿತ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಎನ್ಇಎಸ್ ನಿರ್ದೇಶಕರಾದ ಎಚ್.ಸಿ. ಶಿವಕುಮಾರ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಡಾ. ಬಿ.ವಿ. ಶ್ರೀನಿವಾಸಮೂರ್ತಿ ಸ್ವಾಗತಿಸಿ, ಪ್ರಶಾಂತ್ ಅಂಕಲಕೋಟಿ ವಂದಿಸಿ, ಡಾ. ಕವಿತಾ ಕ್ರಾಸ್ಟ ಕಾರ್ಯಕ್ರಮ ನಿರೂಪಿಸಿದರು.
Tags: JNNCEJNNCE: Orientation Program for MBA–MCA Studentskannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಶಿರಾಳಕೊಪ್ಪ–ಆನವಟ್ಟಿ ರಸ್ತೆಯಲ್ಲಿ ಭೀಕರ ಅಪಘಾತ, 22 ವರ್ಷದ ಯುವಕ ಸಾವು!

Next Post

ಕೊಮ್ಮನಾಳು ಬಳಿ ಟ್ರಾಕ್ಟರ್ ಅವಘಡ, ಕೂಲಿ ಕಾರ್ಮಿಕ ಆಸ್ಪತ್ರೆಗೆ ದಾಖಲು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕೊಮ್ಮನಾಳು ಬಳಿ ಟ್ರಾಕ್ಟರ್ ಅವಘಡ, ಕೂಲಿ ಕಾರ್ಮಿಕ ಆಸ್ಪತ್ರೆಗೆ ದಾಖಲು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕೊಮ್ಮನಾಳು ಬಳಿ ಟ್ರಾಕ್ಟರ್ ಅವಘಡ, ಕೂಲಿ ಕಾರ್ಮಿಕ ಆಸ್ಪತ್ರೆಗೆ ದಾಖಲು!

October 31, 2026
ಜೆ.ಎನ್.ಎನ್.ಸಿ.ಇ: ಎಂಬಿಎ–ಎಂಸಿಎ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ಜೆ.ಎನ್.ಎನ್.ಸಿ.ಇ: ಎಂಬಿಎ–ಎಂಸಿಎ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

October 31, 2026
ಶಿರಾಳಕೊಪ್ಪ–ಆನವಟ್ಟಿ ರಸ್ತೆಯಲ್ಲಿ ಭೀಕರ ಅಪಘಾತ, 22 ವರ್ಷದ ಯುವಕ ಸಾವು!

ಶಿರಾಳಕೊಪ್ಪ–ಆನವಟ್ಟಿ ರಸ್ತೆಯಲ್ಲಿ ಭೀಕರ ಅಪಘಾತ, 22 ವರ್ಷದ ಯುವಕ ಸಾವು!

October 30, 2026
ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!

ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!

October 30, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕೊಮ್ಮನಾಳು ಬಳಿ ಟ್ರಾಕ್ಟರ್ ಅವಘಡ, ಕೂಲಿ ಕಾರ್ಮಿಕ ಆಸ್ಪತ್ರೆಗೆ ದಾಖಲು!

October 31, 2026
ಜೆ.ಎನ್.ಎನ್.ಸಿ.ಇ: ಎಂಬಿಎ–ಎಂಸಿಎ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ಜೆ.ಎನ್.ಎನ್.ಸಿ.ಇ: ಎಂಬಿಎ–ಎಂಸಿಎ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

October 31, 2026

Copyright © 2026 Yuva Dhwani. Designed by KIPL