ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದ ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮದಲ್ಲಿ ಖಾಲಿಯಿರುವ ಶಿಕಾರಿಪುರ ಜಿಲ್ಳಾ ಮಟ್ಟದ ಆಸ್ಪತ್ರೆಯಲ್ಲಿ ಕನ್ಸಲ್ಟೆಂಟ್ ಮೆಡಿಸಿನ್-2 ಹುದ್ದೆಗಳು ಮತ್ತು ಹೊಸನಗರ ತಾಲೂಕು ಮಟ್ಟದ ಆಸ್ಪತ್ರೆಯಲ್ಲಿ ಪ್ರಯೋಗಶಾಲಾ ತಂತ್ರಜ್ಞರ -1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇರನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನಕ್ಕೆ ಕರೆ ನೀಡಲಾಗಿದೆ.
ಆಸಕ್ತರು ಫೆ. 20 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 5.00ರವರೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ತಮ್ಮ ದಾಖಲೆಗಳ ಮೂಲಪ್ರತಿ ಮತ್ತು ಛಾಯಾಪ್ರತಿಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕನ್ಸಲ್ಟೆಂಟ್ ಹುದ್ದೆಗೆ ಎಂ.ಬಿ.ಬಿ.ಎಸ್., ಎಂ.ಡಿ ಆಗಿದ್ದು, 3 ವರ್ಷಗಳ ಸ್ಪೆಷಲಿಸ್ಟ್ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ಎಸ್.ಎಸ್.ಎಲ್.ಸಿ. + ಪಿ.ಯು.ಸಿ. ಹಾಗೂ ಪ್ರಯೋಗಶಾಲಾ ತಂತ್ರಜ್ಞರ ತರಬೇತಿ ಹೊಂದಿದ್ದು, 2 ವರ್ಷ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿರುವ ಅನುಭವವಿರಬೇಕು.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com













