ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ದಿನಾಂಕ 10-09-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ > > ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!
ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ‘ಡೆಲಿವರಿ ಪ್ರೈ. ಲಿ.’ ಹಾಗೂ ‘ಶ್ರೀ ರಾಮ್ ಲೈಫ್ ಇನ್ಶೂರೆನ್ಸ್’ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.
ಶೈಕ್ಷಣಿಕ ಅರ್ಹತೆ: ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.ಉಚಿತ ಪ್ರವೇಶವಿದ್ದು,
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.
ಇದನ್ನೂ ಓದಿ > > ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!
ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606, 9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ













