ಸಾಗರ: ಶ್ರೀ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ಧಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಗೋಡು ತಿಮ್ಮಪ್ಪ ಅವರು ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ.
ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ಉಪ ವಿಭಾಗೀಯ ಆಸ್ಪತ್ರೆಯ ಜನಪ್ರಿಯ ವೈದ್ಯರಾದ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ.
ದೇವಸ್ಥಾನದಲ್ಲಿ ತೀವ್ರ ಜನಸಂದಣಿಯಿಂದ ಉಸಿರಾಟ ಸಮಸ್ಯೆಯಾಗಿದ್ದೂ ಉತ್ತಮ ವೈದ್ಯಕೀಯ ಚಿಕಿತ್ಸೆಯಿಂದಾಗಿ ಮಾನ್ಯರ ಅರೋಗ್ಯ ಸುಧಾರಣೆಯಾಗಿದ್ದೂ ಅರೋಗ್ಯ ಚೇತರಿಕೆ ಕಂಡು ಬರುತ್ತಿದೆ ಎಂದು ವರದಿಯಾಗಿದೆ.














