• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಎ.ಟಿ.ಎನ್.ಸಿ.ಸಿ ಕಾಲೇಜಿನಲ್ಲಿ ಕಸಾಪದಿಂದ ದತ್ತಿ ಉಪನ್ಯಾಸ, ಶಿಶುನಾಳ ಶರೀಫರ ಗೀತೆಗಳ ಗಾಯನ ಕಾರ್ಯಕ್ರಮ

ವೈಚಾರಿಕ‌ ದೀವಿಗೆ ಬೆಳಗುವ ಕುವೆಂಪು ಸಾಹಿತ್ಯ | ರಾಷ್ಟ್ರೀಯ ಶಿಕ್ಷಣ ಸಮಿತಿ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 14, 2026
in ಶಿವಮೊಗ್ಗ
ಎ.ಟಿ.ಎನ್.ಸಿ.ಸಿ ಕಾಲೇಜಿನಲ್ಲಿ ಕಸಾಪದಿಂದ ದತ್ತಿ ಉಪನ್ಯಾಸ, ಶಿಶುನಾಳ ಶರೀಫರ ಗೀತೆಗಳ ಗಾಯನ ಕಾರ್ಯಕ್ರಮ
Share on FacebookShare on TwitterShare on WhatsApp

ಶಿವಮೊಗ್ಗ: ವೈಚಾರಿಕ‌ ದೀವಿಗೆಯನ್ನು ಜನ ಸಾಮಾನ್ಯರ ಮನದಲ್ಲಿ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಸಹಯೋಗದಲ್ಲಿ ಸೋಮವಾರ ದೇವಂಗಿ ಆರ್. ರತ್ನಾಕರ್ ಅವರ ಸ್ಮಾರಕ ದತ್ತಿ ಅಂಗವಾಗಿ, ದತ್ತಿ ದಾನಿಗಳಾದ ಅಮರೇಂದ್ರ ಕಿರೀಟಿ ಅವರ ಆಶಯದಂತೆ ರಾಷ್ಟ್ರಕವಿ ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ವಿಶೇಷ ಉಪನ್ಯಾಸ ಹಾಗೂ ಆಯೇಶಭಿಯಾನೆ ಖಾಸಿಂಬಿ ಕೋಂ ಸಯದ್ ರಸೂಲ್ ಸಾಬ್ ಅಬ್ಬಲಗೆರೆ ಸ್ಮಾರಕ ದತ್ತಿ ಅಂಗವಾಗಿ, ದತ್ತಿ ದಾನಿಗಳಾದ ಅಬ್ಬಾಸ್ ಅಬ್ಬಲಗೆರೆ ಅವರ ಆಶಯದಂತೆ ಶಿಶುನಾಳ ಶರೀಫರ ಗೀತೆಗಳ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಾಚೀನ ಕಾಲದಿಂದಲೂ ವಿಚಾರಗಳನ್ನು ಅಭಿವ್ಯಕ್ತಪಡಿಸುವ ಹಲವು ವಿಧಾನಗಳಲ್ಲಿ ದತ್ತಿ ಉಪನ್ಯಾಸಗಳು ಒಂದು. ವೈಚಾರಿಕ ನೆಲೆಯನ್ನು ಪಸರಿಸಲು ದತ್ತಿ ಕಾರ್ಯಕ್ರಮಗಳು ಪೂರಕವಾಗಿದೆ. ಹಿಂಜರಿಕೆಯಿಂದ ಯುವ ಸಮೂಹ ಹೊರಬರಬೇಕಿದೆ. ಇಂದಿನ ಜಾಗತಿಕ ಪರಿಸ್ಥಿತಿಯಲ್ಲಿ, ಯುದ್ಧಪೀಡಿತ ಪ್ರದೇಶದ ಯುವ ಸಮೂಹದ ತಲ್ಲಣಗಳು ಏನಾಗಿರಬಹುದು ಎಂಬುದು ವಿಮರ್ಶಿಸಬೇಕಿದೆ. ವೈಚಾರಿಕ ಪ್ರಜ್ಞೆ ಅಂತಹ ವಿಮರ್ಶಾತ್ಮಕ ಜ್ಞಾನವನ್ನು ನೀಡಲಿದೆ ಎಂದು ಹೇಳಿದರು.

ಇದನ್ನೂ ಓದಿ > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ನಡೆದ ಎಐಸಿಟಿಇ ಬೂಟ್ ಕ್ಯಾಂಪ್’ ಹೇಗಿತ್ತು?, ಪ್ರಸ್ತುತಗೊಂಡ 50 ಕ್ಕೂ ಹೆಚ್ಚು ಯೋಜನೆಗಳು

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ.ಮಂಜುನಾಥ ಮಾತನಾಡಿ, ಕನ್ನಡ ಭಾಷೆಯ ಜನರನ್ನು ಒಟ್ಟುಗೂಡಿಸುವ ಹಂಬಲವನ್ನು ಸಾರ್ಥಕಗೊಳಿಸುವ ಉದ್ದೇಶದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಸಾಪವನ್ನು ಸ್ಥಾಪಿಸಿದರು. ಹೊಸತಲೆಮಾರಿಗೆ ಸಾಹಿತ್ಯದ ಚಿಂತನೆಗಳ ಮೂಲಕ ಕ್ರೀಯಾಶೀಲತೆಯ ಬಿತ್ತುವ ಕಾರ್ಯವನ್ನು ದತ್ತಿಯ ಮೂಲಕ ಮಾಡುತ್ತಿದ್ದೇವೆ. ಭಾಷೆಯ ಬಗ್ಗೆ ಉದಾಸೀನ ಬೇಡ ಎಂದು ಹೇಳಿದರು.

ಇದನ್ನೂ ಓದಿ > ಎನ್ಇಎಸ್, ಕೋಣಂದೂರು ಪಿಯು ಕಾಲೇಜಿಗೆ 100% ಫಲಿತಾಂಶ

ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ಕುರಿತು ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಪ್ರಕಾಶ್ ಮರ್ಗನಳ್ಳಿ ಮಾತನಾಡಿ, ಇಂದಿನ ತಲೆಮಾರು ಜನಸಮೂಹದ ಜೊತೆಗೆ ಸಂವಹನ ನಡೆಸಲು ನಿರಾಸಕ್ತರಾಗಿದ್ದಾರೆ. ಪರಂಪರೆಯ ಜ್ಞಾನವಿಲ್ಲದೆ, ಕೇವಲ ವರ್ತಮಾನದಲ್ಲಿ ಬದುಕಲು ಸಾಧ್ಯವಿಲ್ಲ. ಕುವೆಂಪು ಅವರನ್ನು ಹೊಗಳುವ ಬದಲು, ಅವರು ಪ್ರತಿಪಾದಿಸಿದ ಸಂಗತಿಗಳನ್ನು ಅರ್ಥೈಸಿಕೊಳ್ಳಬೇಕು. ವಾಟ್ಸ್ಆ್ಯಪ್ ವಿವಿಯ ಸಂಗತಿಗಳು ಸತ್ಯವಾಗಿ ಬದಲಾಗುತ್ತಿರುವ ಈ ಹೊತ್ತಿನಲ್ಲಿ, ಕುವೆಂಪು ಅವರ ವಿಚಾರಕ್ರಾಂತಿಗೆ ಆಹ್ವಾನ ಸದಾ ವಾಸ್ತವತೆಗೆ ಬಂದು ನಿಲ್ಲುತ್ತದೆ.

ಪರಕೀಯರಿಂದ ಮುಕ್ತಿ ಪಡೆಯುವುದು ಒಂದೇ ಭಾರತದ ಸ್ವಾತಂತ್ರ್ಯ ಚಳುವಳಿಯ ಆಶಯವಾಗಿರಲಿಲ್ಲ. ಬದಲಿಗೆ ಅತ್ಯುತ್ತಮ ಸಧೃಡ ಸಮಾಜ ನಿರ್ಮಾಣ ಮಾಡುವ ಕನಸು ಹೋರಾಟಗಾರರದಾಗಿತ್ತು. ಹಣ ಎಂದಿಗೂ ರಾಜಕೀಯ ವ್ಯವಸ್ಥೆಯನ್ನು ಆಳಬಾರದು ಎಂದು ಹೇಳುತ್ತಾ, ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ ಎಂದು ಯುವ ಸಮೂಹಕ್ಕೆ ಕರೆ ನೀಡಿದವರು ಕುವೆಂಪು ಎಂದು ಹೇಳಿದರು.

ಸಂತ ಶಿಶುನಾಳ ಶರೀಫರ ಗೀತೆಗಳನ್ನು ಗಾಯಕಿ ನಳಿನಾಕ್ಷಿ ಹಾಡಿದರು. ಉಪನ್ಯಾಸಕರಾದ ಪ್ರವೀಣ್ ಬಿ.ಎನ್., ಗಾಯತ್ರಿ ಟಿ., ಚೈತ್ರಾ ಕೆ, ಕಸಾಪ ಪದಾಧಿಕಾರಿಗಳಾದ ಡಿ.ಗಣೇಶ್, ಅನುರಾಧ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅನನ್ಯ ನಿರೂಪಿಸಿದರು. ಉಪನ್ಯಾಸಕಿ ಶ್ರೀಲಲಿತ ಅಧ್ಯಕ್ಷತೆ ವಹಿಸಿದ್ದರು.

Tags: A.T.N.C.C. Collegekannada newskannada news liveKasapa's charitable lecture at A.T.N.C.C. Collegelatest newsmalnad newssinging program of Shishunala Sharif's songsರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಅಣ್ಣಾನಗರ ಚಾನಲ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ

Next Post

ಶಿವಮೊಗ್ಗ, ತ್ಯಾವರೆಕೊಪ್ಪ ಸಿಂಹ ಧಾಮದಲ್ಲಿ ನೀರಾನೆ ಹಂಸಿಣಿ ಸಾವು…!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ತ್ಯಾವರೆಕೊಪ್ಪ ಸಿಂಹ ಧಾಮದಲ್ಲಿ ನೀರಾನೆ ಹಂಸಿಣಿ ಸಾವು…!

ಶಿವಮೊಗ್ಗ, ತ್ಯಾವರೆಕೊಪ್ಪ ಸಿಂಹ ಧಾಮದಲ್ಲಿ ನೀರಾನೆ ಹಂಸಿಣಿ ಸಾವು...!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL