• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕುಂಸಿ ರಾಷ್ಟ್ರೀಯ ಪ್ರೌಢಶಾಲೆಗೆ 3 ಬಾರಿ ಶೇ.100% ಫಲಿತಾಂಶ, ಅಧ್ಯಾಪಕ ವೃಂದಕ್ಕೆ ಅಭಿನಂದನೆ

ಇತಿಹಾಸವನ್ನು ನೆನಪಿಟ್ಟಾಗಲೇ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ | ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 23, 2026
in ಶಿವಮೊಗ್ಗ
ಕುಂಸಿ ರಾಷ್ಟ್ರೀಯ ಪ್ರೌಢಶಾಲೆಗೆ 3 ಬಾರಿ ಶೇ.100% ಫಲಿತಾಂಶ, ಅಧ್ಯಾಪಕ ವೃಂದಕ್ಕೆ ಅಭಿನಂದನೆ
Share on FacebookShare on TwitterShare on WhatsApp

ಶಿವಮೊಗ್ಗ: ನಮಗೆ ಇತಿಹಾಸದ ಕಲ್ಪನೆ ಬೇಕು‌. ಇತಿಹಾಸವನ್ನು ಅಧ್ಯಯನದ‌ ಮೂಲಕ ನೆನೆಪಿಟ್ಟುಕೊಂಡಾಗ ಮಾತ್ರ ಭವಿಷ್ಯದ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಗುರುವಾರ ಕುಂಸಿಯ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಸಾಧಿಸಿದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ > >  ಆರ್ಥಿಕ ವಲಯದ ನಂಬಿಕೆಗೆ ಮತ್ತೊಂದು ಹೆಸರೇ ಬ್ಯಾಂಕ್ ಆಫ್ ಬರೋಡ

ನಮ್ಮ ಹಿರಿಯರ ಅನುಭವಗಳು ನಾವು ಕಲಿತ ಶಿಕ್ಷಣಕ್ಕಿಂತಲೂ ಶ್ರೇಷ್ಠ ಮಾರ್ಗದರ್ಶನ ನೀಡುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಅನುಭವದಿಂದ ಕಲಿಯುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಸ್ನೇಹ, ಅಧ್ಯಯನ, ಸೃಜನಶೀಲತೆ ಸೇರಿದಂತೆ ಎಲ್ಲಾ ವಿಚಾರಗಳಲ್ಲಿ ಅನುಭವಿಸಿ ಕಲಿಯುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು.

ಕುಂಸಿ ಶಾಲೆ ಈಗಾಗಲೇ ಮೂರು ಬಾರಿ ಶೇ.100% ಫಲಿತಾಂಶ ಪಡೆದು ತಮ್ಮ ಶೈಕ್ಷಣಿಕ ಸಾಧನೆಯನ್ನು ದಾಖಲಿಸಿದೆ. ಎನ್ಇಎಸ್ ಸಂಸ್ಥೆ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ.100% ಫಲಿತಾಂಶ ಪಡೆದ ವಿದ್ಯಾಸಂಸ್ಥೆಗಳ ಶಿಕ್ಷಕರಿಗೆ ಅಭಿನಂದಿಸುವ ಕಾರ್ಯವನ್ನು ಆಡಳಿತ ಮಂಡಳಿಯಿಂದ ಮಾಡಲಾಗುತ್ತಿದೆ. ಇಂತಹ ಸಾಧನೆಯ ಶಿಖರಕ್ಕೆ ಏರಿದ ವಿದ್ಯಾಸಂಸ್ಥೆಗಳು, ಅದೇ ಎತ್ತರವನ್ನು ನಿರ್ವಹಿಸಿಕೊಳ್ಳಬೇಕಾದ ಜವಾಬ್ದಾರಿ ಶಿಕ್ಷಕ ಸಮೂಹದ ಮೇಲಿದೆ.

-ಜಿ.ಎಸ್.ನಾರಾಯಣ ರಾವ್, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ರು

ನಾಯಕನನ್ನು ಅನುಸರಿಸುವುದು ನಾಯಕತ್ವವಲ್ಲ; ಹೊಸ ನಾಯಕತ್ವವನ್ನು ರೂಪಿಸುವುದೇ ನಿಜವಾದ ನಾಯಕತ್ವ. ಅದರಂತೆ ವಿದ್ಯಾರ್ಥಿ ಸಂಘಗಳು ನಾಯಕತ್ವ, ಸಂಘಟನಾ ಕೌಶಲ್ಯ ಹಾಗೂ ಬದುಕಿನ ಮೌಲ್ಯಗಳನ್ನು ಕಲಿಸುವ ಉತ್ತಮ ವೇದಿಕೆಗಳಾಗಿವೆ. ಪುಸ್ತಕಕ್ಕಿಂತ ಮಸ್ತಕದ ವಿದ್ಯಾಭ್ಯಾಸವಾಗಬೇಕಿದೆ ಎಂದು ಹೇಳಿದರು.

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಗ್ರಾಮೀಣ ಅನುದಾನಿತ ಶಾಲೆಯಿಂದ ಶೇ.100% ಫಲಿತಾಂಶ ಸಾಧಿಸುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಜ್ಞಾನವನ್ನು ಸಂಪಾದಿಸುವುದು ಶಿಕ್ಷಣದ ಮೊದಲ ಹಂತ. ಆದರೆ ಪಡೆದ ಜ್ಞಾನವನ್ನು ಸಮಾಜದ ಒಳಿತಿಗಾಗಿ ಹೇಗೆ ಬಳಸಬೇಕು ಎಂಬ ಅರಿವು ಮತ್ತು ಸಹಬಾಳ್ವೆಯ ಮೌಲ್ಯಗಳನ್ನು ಬೆಳೆಸುವುದೇ ಶಿಕ್ಷಣದ ಮೂಲ ತಳಹದಿಯಾಗಿದೆ.

ಇದನ್ನೂ ಓದಿ > > ಸ್ತ್ರೀ ಸಂವೇದನೆ ಅಂತರಾಳದಲ್ಲಿ ಮಹತ್ವ ಪಡೆಯಬೇಕಿದೆ 

ವಿದ್ಯಾರ್ಥಿಗಳು ಕಲಿಯುತ್ತಿರುವ ಪ್ರತಿಯೊಂದು ವಿಷಯವನ್ನೂ “ಯಾಕೆ ಕಲಿಯಬೇಕು?” ಎಂಬ ವಿಮರ್ಶಾತ್ಮಕ ಕುತೂಹಲದಿಂದ ಅಧ್ಯಯನ ಮಾಡಬೇಕು. ಶೇ.100ರಷ್ಟು ಫಲಿತಾಂಶವು ಒಂದು ಬಾರಿ ದಾಖಲಿಸುವ ಸಾಧನೆಯಾಗಿರದೆ, ಗುಣಮಟ್ಟದ ಶಿಕ್ಷಣದ ನಿರಂತರ ಪರಿಪಾಠವಾಗಬೇಕು ಎಂದು ಹೇಳಿದರು.

ಇದನ್ನೂ ಓದಿ > > ಹೊಳೆಹೊನ್ನೂರು, ಡ್ರೋಣ್ ಬಳಸಿ ಪೊಲೀಸ್ ದಾಳಿ, 5 ಜನರ ಬಂಧನ

ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಮಾತನಾಡಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ನಾಗರಾಜ ಅಧ್ಯಕ್ಷತೆ ವಹಿಸಿದ್ದರು. ಸಹ ಶಿಕ್ಷಕಿ ಪದ್ಮಿನಿ ಫಲಿತಾಂಶದ ವಿಶ್ಲೇಷಣೆ ನೀಡಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಾರ್ತಿಕ್.ಆರ್ ಉಪಸ್ಥಿತರಿದ್ದರು. ಶಿಕ್ಷಕರಾದ ಡಿ.ವಿ.ವಾಗೀಶ್ ಸ್ವಾಗತಿಸಿ, ಟಿ.ಸಿ.ಗಗನ ನಿರೂಪಿಸಿದರು.

Tags: congratulations to the facultykannada newskannada news liveKunsi National High School achieves 100% results 3 timesmalnad newsshivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಆರ್ಥಿಕ ವಲಯದ ನಂಬಿಕೆಗೆ ಮತ್ತೊಂದು ಹೆಸರೇ ಬ್ಯಾಂಕ್ ಆಫ್ ಬರೋಡ

Next Post

ಲಿಂಕ್ ಕ್ಲಿಕ್ ಮಾಡಿ 2.97 ಲಕ್ಷ ಕಳೆದ ಕೊಂಡ ವ್ಯಕ್ತಿ, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಲಿಂಕ್ ಕ್ಲಿಕ್ ಮಾಡಿ 2.97 ಲಕ್ಷ ಕಳೆದ ಕೊಂಡ ವ್ಯಕ್ತಿ, ಆಗಿದ್ದೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL