• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ!, ವಿದ್ಯಾರ್ಥಿ ವಿರೋಧಿ ನೀತಿಗೆ NSUI ಆಕ್ರೋಶ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 29, 2026
in ಶಿವಮೊಗ್ಗ
ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ!, ವಿದ್ಯಾರ್ಥಿ ವಿರೋಧಿ ನೀತಿಗೆ NSUI  ಆಕ್ರೋಶ
Share on FacebookShare on TwitterShare on WhatsApp

ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದರು ಸಹ ಕುವೆಂಪು ವಿಶ್ವವಿದ್ಯಾಲಯದಲ್ಲಿ ನಿರಂತರವಾಗಿ ನಡೆಯುತ್ತಿರುವ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಖಂಡಿಸಿ ಇಂದು ಬೆಳಗ್ಗೆ ಎನ್.ಎಸ್.ಯು.ಐ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದಿದ್ದು, ಕುಲಪತಿಗಳಾದ ಶರತ್ ಅನಂತಮೂರ್ತಿ ಅವರ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು, ಕಚೇರಿಯ ನಾಮಫಲಕಗಳಿಗೆ ಮಸಿ ಬಳಿದು, ಪೀಠೋಪಕರಣ, ಪಾಟ್‌ಗಳನ್ನು ಹೊಡೆದು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಶ್ವವಿದ್ಯಾಲಯದ ನಡೆಯನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಖಂಡಿಸಿತು.

ಇದನ್ನೂ ಓದಿ >  ಶಿವಮೊಗ್ಗ, ಪಿಯುಸಿ ಟಾಪರ‍್ಸ್‌ಗೆ ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ

ಕಳೆದ ಐದು ತಿಂಗಳ ಹಿಂದೆ ನಡೆದ 1, 3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಿರುವುದು ಮತ್ತು ಕಳೆದ ಮೂರು ವರ್ಷಗಳಿಂದ ಪದವಿ ಅಂಕಪಟ್ಟಿಗಳನ್ನು ವಿತರಿಸದಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಅಂಕಪಟ್ಟಿ ಇಲ್ಲದೆ ಪದವೀಧರರು ಉನ್ನತ ವ್ಯಾಸಂಗಕ್ಕೆ ಹಾಗೂ ಉದ್ಯೋಗಕ್ಕೆ ಸೇರಲು ಪರದಾಡುವಂತಾಗಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕುಲಪತಿಗಳು ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಗಂಭೀರವಾಗಿ ಆರೋಪಿಸಿದರು.

ಇದನ್ನೂ ಓದಿ >  ಶಿವಮೊಗ್ಗ, ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆ ಗೆಡಿಸಿದೆ. ಈ ಅವ್ಯವಸ್ಥೆಯನ್ನು ಸರಿಪಡಿಸಲು ವಿಫಲರಾಗಿರುವ ಕುಲಪತಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಧ್ಯಕ್ಷ ರವಿ ಕಟಿಕೆರೆ, ನಗರಾಧ್ಯಕ್ಷ ರವಿ, ನಗರ ಉಪಾಧ್ಯಕ್ಷ ಆದಿತ್ಯ, ಸುಭಾನ್, ಪ್ರಧಾನ ಕಾರ್ಯದರ್ಶಿಗಳಾದ ಚಂದ್ರೋಜಿ ರಾವ್, ವರುಣ್ ವಿ ಪಂಡಿತ್ ಸೇರಿದಂತೆ ನೂರಾರು ಕಾರ್ಯಕರ್ತರು ಈ ಹೋರಾಟದಲ್ಲಿ ಪಾಲ್ಗೊಂಡಿದರು.

Tags: kannada newskannada news liveKuvempu University Chancellor's office vandalized! NSUI outraged by anti-student policymalnad newsNSUINSUI protestಶಿವಮೊಗ್ಗ
Previous Post

ಶಿವಮೊಗ್ಗ, ಪಿಯುಸಿ ಟಾಪರ‍್ಸ್‌ಗೆ ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ

Next Post

ಮೇ.01ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ಮೇ.01ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL