• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಯುವಜನರು ಕೈಜೋಡಿಸಲಿ | ಡಾ. ಶುಭಾ ಮರವಂತೆ 

ಎಟಿಎನ್‌ಸಿ ಕಾಲೇಜಿನಲ್ಲಿ ಪಶ್ಚಿಮ ಘಟ್ಟಗಳ ಉಳಿವು’ ವಿಶೇಷ ಕಾರ್ಯಕ್ರಮ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 31, 2026
in ಶಿವಮೊಗ್ಗ
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಯುವಜನರು ಕೈಜೋಡಿಸಲಿ | ಡಾ. ಶುಭಾ ಮರವಂತೆ 
Share on FacebookShare on TwitterShare on WhatsApp
ಶಿವಮೊಗ್ಗ:  ಪಶ್ಚಿಮ ಘಟ್ಟಗಳು ನಮ್ಮ ಜೀವನಾಡಿಯಾಗಿದ್ದು, ಅಲ್ಲಿನ ಜೀವವೈವಿಧ್ಯ ಹಾಗೂ ಪರಿಸರ ಸಮತೋಲನವನ್ನು ಕಾಪಾಡುವ ಮೂಲಕ ಭವಿಷ್ಯದ ಪೀಳಿಗೆಗೆ ಸುರಕ್ಷಿತ, ಸುಸ್ಥಿರ ಮತ್ತು ಆರೋಗ್ಯಕರ ಬದುಕಿನ ವಾತಾವರಣ ನಿರ್ಮಿಸಬೇಕಿದೆ ಎಂದು ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿಶ್ವವಿದ್ಯಾಲಯದ ಅಧಿಕಾರಿಗಳಾದ ಡಾ. ಶುಭಾ ಮರವಂತೆ ತಿಳಿಸಿದರು.
ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಹಾಗೂ ಕಮಲಾ ನೆಹರು ರಾಷ್ಟ್ರೀಯ ಸ್ಮಾರಕ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ಸೋಮವಾರ ಚಂದನಾ ಸಭಾಂಗಣದಲ್ಲಿ ಆಯೋಜಿಸಿದ್ದ ‘ಪಶ್ಚಿಮ ಘಟ್ಟಗಳ ಉಳಿವು’ ವಿಶೇಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ > > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಅಭಿವಿನ್ಯಾಸ’ ಕಾರ್ಯಕ್ರಮ, ವಿದ್ಯಾರ್ಥಿಗಳನ್ನು ಸ್ವಾಗತಿಸಿದ ರೋಬೋ!
ಪಶ್ಚಿಮ ಘಟ್ಟಗಳಲ್ಲಿ ಹುಟ್ಟುವ ನದಿಗಳು ಲಕ್ಷಾಂತರ ಜನರ ಬದುಕಿಗೆ ನೀರನ್ನು ಒದಗಿಸುತ್ತವೆ. ಇಲ್ಲಿನ ಅರಣ್ಯಗಳು ಮಳೆ, ಹವಾಮಾನ, ಮಣ್ಣು ಹಾಗೂ ಜೀವವೈವಿಧ್ಯವನ್ನು ಸಮತೋಲನದಲ್ಲಿಡುವ ನೈಸರ್ಗಿಕ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿವೆ. ಅಪರೂಪದ ಅನೇಕ ಸಸ್ಯ ಹಾಗೂ ಪ್ರಾಣಿ ಪ್ರಭೇದಗಳು ಇಲ್ಲಿನ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವ ಉಳಿಸಿಕೊಂಡಿವೆ. ಒಂದು ಮರವನ್ನು ಕಡಿಯುವುದು ಕೇವಲ ಒಂದು ಮರದ ನಾಶವಲ್ಲ; ಅದರೊಂದಿಗೆ ಪಕ್ಷಿಗಳು, ಕೀಟಗಳು, ಸಣ್ಣ ಜೀವಿಗಳು, ಮಣ್ಣಿನ ಜೀವಸಂಕುಲ ಸೇರಿದಂತೆ ಸಂಪೂರ್ಣ ಪರಿಸರ ವ್ಯವಸ್ಥೆಯ ಮೇಲೆಯೇ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಇದನ್ನೂ ಓದಿ > > ಸೆ.1ರಿಂದ ನಂಜಪ್ಪ ಲೈಫ್ ಕೇರ್‌ನಲ್ಲಿ ಮಂಡಿನೋವು ಉಚಿತ ತಪಾಸಣೆ ಶಿಬಿರ, ಶೇ 20 ರಷ್ಟು ವಿಶೇಷ ರಿಯಾಯಿತಿ!

ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿಗಳಾದ ಡಾ. ಪಿ. ನಾರಾಯಣ್ ಮಾತನಾಡಿ, ಪಶ್ಚಿಮ ಘಟ್ಟಗಳ ಸಂರಕ್ಷಣೆ ಕೇವಲ ಒಂದು ದಿನದ ಸಂವಾದಕ್ಕೆ ಸೀಮಿತವಾಗಬಾರದು. ನಿರಂತರವಾಗಿ ಪರಿಸರ ಸಂರಕ್ಷಣೆಯ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಯುವಜನರಲ್ಲಿ ಜಾಗೃತಿ ಮೂಡಿಸಬೇಕು.

ಅಭಿವೃದ್ಧಿಯ ಹೆಸರಿನಲ್ಲಿ ಅರಣ್ಯ ನಾಶ, ಅಕ್ರಮ ಗಣಿಗಾರಿಕೆ, ಅತಿಯಾದ ರಸ್ತೆ ನಿರ್ಮಾಣ, ಪ್ರವಾಸೋದ್ಯಮದ ಒತ್ತಡ, ಅರಣ್ಯ ಪ್ರದೇಶಗಳ ಒತ್ತುವರಿ ಹಾಗೂ ಅಸಮರ್ಪಕ ನಿರ್ಮಾಣ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇವು ಮುಂದುವರಿದರೆ ನೀರಿನ ಕೊರತೆ, ಮಣ್ಣಿನ ಸವಕಳಿ, ಭೂಕುಸಿತ, ಪ್ರವಾಹ, ಬರ, ತಾಪಮಾನ ಏರಿಕೆ ಹಾಗೂ ಜೀವವೈವಿಧ್ಯದ ನಾಶದಂತಹ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ಹೊಸನಗರ ತಾಲ್ಲೂಕಿನ ಸಾರ ಸಂಸ್ಥೆಯ (SARA Centre) ಪ್ರಮುಖ ಸಂಚಾಲಕರಾದ ಧನುಷ್ ಕುಮಾರ್ ಮಾತನಾಡಿ, ಪಶ್ಚಿಮ ಘಟ್ಟಗಳ ಸಂರಕ್ಷಣೆ ಅಭಿವೃದ್ಧಿಗೆ ವಿರೋಧವಲ್ಲ. ಪ್ರಕೃತಿಯನ್ನು ನಾಶಪಡಿಸದೆ ಅಭಿವೃದ್ಧಿ ಸಾಧಿಸುವುದೇ ನಿಜವಾದ ಅಭಿವೃದ್ಧಿ. ರಸ್ತೆ, ಪ್ರವಾಸೋದ್ಯಮ, ಉದ್ಯೋಗ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿ ಅಗತ್ಯವಾದರೂ ಪರಿಸರದ ಸಾಮರ್ಥ್ಯವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಬೇಕು ಎಂದರು.

ಸಾರ ಸಂಸ್ಥೆಯ ಮತ್ತೋರ್ವ ಸಂಚಾಲಕರಾದ  ಅಜಯ್ ಕುಮಾರ್ ಶರ್ಮ ಮಾತನಾಡಿ, ಪಶ್ಚಿಮ ಘಟ್ಟಗಳನ್ನು ಕೇವಲ ನಮ್ಮ ಆಸ್ತಿಯೆಂದು ಪರಿಗಣಿಸದೆ, ಮುಂದಿನ ಪೀಳಿಗೆಯಿಂದ ನಾವು ಪಡೆದಿರುವ ಅಮೂಲ್ಯ ಜವಾಬ್ದಾರಿ ಎಂದು ಭಾವಿಸಬೇಕು. ನಮ್ಮ ಅಭಿವೃದ್ಧಿ ಪ್ರಕೃತಿಯ ವಿರುದ್ಧವಾಗಿರದೆ, ಪ್ರಕೃತಿಯೊಂದಿಗೆ ಕೈಜೋಡಿಸಿದ ಅಭಿವೃದ್ಧಿಯಾಗಬೇಕು ಎಂದು ಹೇಳಿದರು.

ಪಶ್ಚಿಮ ಘಟ್ಟಗಳ ಸಂರಕ್ಷಣೆಯಲ್ಲಿ ಸರ್ಕಾರದ ಪಾತ್ರ ಎಷ್ಟು ಮುಖ್ಯವೋ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಅಷ್ಟೇ ಮುಖ್ಯ. ವಿದ್ಯಾರ್ಥಿಗಳು, ಯುವಕರು, ರೈತರು, ಪ್ರವಾಸಿಗರು, ಸ್ಥಳೀಯ ಸಮುದಾಯಗಳು, ಸಂಘ-ಸಂಸ್ಥೆಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಕಾರ್ಯನಿರ್ವಹಿಸಬೇಕು. ಕಾಡಿನಲ್ಲಿ ಕಸ ಎಸೆಯದಿರುವುದು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು, ಮರಗಳನ್ನು ಬೆಳೆಸುವುದು, ಜಲಮೂಲಗಳನ್ನು ರಕ್ಷಿಸುವುದು ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಯಲು ಸಹಕರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ > > ಸದ್ಯದಲ್ಲೇ ರಾಜ್ಯದಲ್ಲಿ ಬಿಜೆಪಿ ರಿಪೇರಿ ಆಗುತ್ತೆ, ರಾಜಕಾರಣಿಗಳು ಸನ್ಯಾಸಿಗಳಲ್ಲ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

ಕಾಲೇಜಿನ ಪ್ರಾಂಶುಪಾಲರಾದ ಮಮತಾ ಪಿ.ಆರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿಶೇಷ ಅಧಿಕಾರಿಗಳಾದ ಡಾ. ಆರ್.ಎಂ. ಜಗದೀಶ್, ಎನ್‌ಎಸ್‌ಎಸ್ ಘಟಕದ ಅಧಿಕಾರಿಗಳಾದ ಪ್ರವೀಣ್ ಬಿ.ಎನ್., ಗಾಯತ್ರಿ, ಘನಶ್ಯಾಮ್ ಹಾಗೂ ನಾಗೇಶ್, ರೆಡ್ ಕ್ರಾಸ್ ಘಟಕದ ಅಧಿಕಾರಿಗಳಾದ ಮಮತಾ ಪಿ.ಎನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Tags: Let the youth join hands to protect the Western Ghats | Dr. Shubha Maravanthe
Previous Post

ಶಿವಮೊಗ್ಗ, ತೋಟದಲ್ಲಿ14.5 ಅಡಿ ಉದ್ದದ ಬೃಹತ್ ಹೆಬ್ಬಾವು ಪ್ರತ್ಯಕ್ಷ !

Next Post

ಶಿವಮೊಗ್ಗ, ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ, ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL