ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ಭದ್ರಾವತಿ ತೀರ್ಥಹಳ್ಳಿ ಹೊಸನಗರ ಸಾಗರ ತಾಲೂಕುಗಳ ವ್ಯಾಪ್ತಿಯ 25ಕ್ಕೂ ಹೆಚ್ಚು ಅಕ್ರಮ ಮರಳು ಅಡ್ಡಗಳ ಮೇಲೆ ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ 12ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ಅಕ್ರಮ ಮರಳು ಗಣಿಗಾರಿಕೆ ಪತ್ತೆ ಹಚ್ಚಿದೆ.
ದಾಳಿಯ ವೇಳೆ ಜೆಸಿಬಿ ಟ್ಯಾಕ್ಟರ್ ಲಾರಿ ಸೇರಿದಂತೆ 50ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದು ನೂರಾರು ಮೆಟ್ರಿಕ್ ಟನ್ ಮರಳನ್ನು ಜಪ್ತಿ ಮಾಡಲಾಗಿದೆ. ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡ ಇಲ್ಲಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಕಚೇರಿಯ ಮೇಲೂ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಹಾಗೂ ಹಾವೇರಿ ಜಿಲ್ಲೆಯ ಲೋಕಾಯುಕ್ತ ಪೊಲೀಸರ ತಂಡಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಎರಡು ದಿನಗಳ ಹಿಂದೆಯಷ್ಟೇ ಗ್ರಾಮಾಂತರ ಶಿವಮೊಗ್ಗದ ಹೊಳಲೂರು ಮತ್ತು ಇತರೆಡೆ ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ್ ನೇತೃತ್ವದಲ್ಲಿ ವಿವಿದೆಢೆ ಅಕ್ರಮವಾಗಿ ಸಂಗ್ರಹಿಸಿದ್ದ ಎಂಬತ್ತಕ್ಕೂ ಹೆಚ್ಚು ಲೋಡ್ ಮರಳನ್ನು ವಶಪಡಿಸಿಕೊಳ್ಳಲಾಯಿತು.
-
ಇದನ್ನೂ ಓದಿ > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ
-
ಇದನ್ನೂ ಓದಿ > ವಾಕಿಂಗ್ ಮಾಡ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ, ಮೂಳೆ ಕಟ್!
-
ಇದನ್ನೂ ಓದಿ > ಹಾಡೋನಹಳ್ಳಿಯಲ್ಲಿ 80 ಲೋಡ್ ಮರಳು ಪತ್ತೆ!














