ಶಿವಮೊಗ್ಗ: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸಿ.ಜಿ. ಮಧುಸೂದನ್ ಅವರಿಗೆ ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಅವರು ಸನ್ಮಾನಿಸಿ, ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.
ಇದನ್ನೂ ಓದಿ > > ಶಿವಮೊಗ್ಗದಲ್ಲಿ ಗೋಸೇವಾ ಸಂಭ್ರಮ, ಸಾವಯವ ಗೊಬ್ಬರ, ಗೋ ಉತ್ಪನ್ನಗಳ ಪ್ರದರ್ಶನ
ಮಧುಸೂದನ್ ಅವರ ನಾಯಕತ್ವದಲ್ಲಿ ಶಿವಮೊಗ್ಗ-ಭದ್ರಾವತಿ ಅವಳಿ ನಗರಗಳು ಸುಸಂಘಟಿತ ನಗರಾಭಿವೃದ್ಧಿ, ಅತ್ಯಾಧುನಿಕ ಮೂಲಸೌಕರ್ಯ ಹಾಗೂ ಸಮಗ್ರ ಪ್ರಗತಿಯ ಮೂಲಕ ಹೊಸ ಎತ್ತರವನ್ನು ತಲುಪಲಿ ಎಂದು ಹಾರೈಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎಷ್ಟು ಬಲವಾಗಿ ಸಂಘಟಿಸಿ ಬೆಳೆಸುತ್ತೀರೋ, ಅಷ್ಟು ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ. ರಾಹುಲ್ ಗಾಂಧಿ ಅವರು ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಯುವಕರು ಹೆಚ್ಚಿನ ಶಕ್ತಿ ತುಂಬಬೇಕು. ಯುವಕರಿಗೆ ಅಧಿಕಾರ ಮತ್ತು ಜವಾಬ್ದಾರಿಗಳನ್ನು ನೀಡಬೇಕು ಎಂಬುದು ರಾಹುಲ್ ಗಾಂಧಿ ಅವರ ಆಶಯವಾಗಿದೆ. ಈ ಆಶಯಕ್ಕೆ ತಕ್ಕಂತೆ ಯುವ ನಾಯಕರು ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ, ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದರು.
ಇದನ್ನೂ ಓದಿ > > ಜೆರಾಕ್ಸ್ ಅಂಗಡಿಗೆ ಬೆಂಕಿ, 3 ಲಕ್ಷ ರೂ. ಮೌಲ್ಯದ ವಸ್ತುಗಳು ಭಸ್ಮ!
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು, ಮಾಜಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್, ಕರ್ನಾಟಕ ಜವಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ, ನಗರ ಅಧ್ಯಕ್ಷ ಚರಣ್ ಶೆಟ್ಟಿ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ > >ಶಿವಮೊಗ್ಗ, ಯತ್ನಾಳ್ ಅವರ ಹೇಳಿಕೆಗೆ ಕೆ.ಎಸ್.ಈಶ್ವರಪ್ಪ ತಿರುಗೇಟು!














