• About Us
  • Advertise
  • Privacy & Policy
  • Contact Us
Friday, October 30, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ವಿಶೇಷ

ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 30, 2026
in ವಿಶೇಷ
ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!
Share on FacebookShare on TwitterShare on WhatsApp

ಶಿವಮೊಗ್ಗ: ಬಡ ಕುಟುಂಬಗಳ ಹಸಿವು ನೀಗಿಸಬೇಕಾದ ಪಡಿತರ ವ್ಯವಸ್ಥೆಯಲ್ಲೇ ಕಳಪೆ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ ಎಂಬ ಆರೋಪ ಹೊಸನಗರ ತಾಲೂಕಿನಲ್ಲಿ ಕೇಳಿಬಂದಿದೆ.

ನ್ಯಾಯಬೆಲೆ ಅಂಗಡಿಗಳ ಮೂಲಕ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ವಿತರಿಸಲಾಗುತ್ತಿರುವ ರಾಗಿಯಲ್ಲಿ ಕಲ್ಲು, ಮಣ್ಣು, ಕಸ ಹಾಗೂ ಧೂಳು ಹೆಚ್ಚಾಗಿದ್ದು, ತಿನ್ನಲು ಯೋಗ್ಯವಾಗಿಲ್ಲ ಎಂದು ಫಲಾನುಭವಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಾಟ್ಸಪ್‌ ಗ್ರೂಪ್‌ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿ 

ಹೊಸನಗರ ತಾಲೂಕಿನಲ್ಲಿ ಒಟ್ಟು 46 ನ್ಯಾಯಬೆಲೆ ಅಂಗಡಿಗಳಿದ್ದು, ಸುಮಾರು 26 ಸಾವಿರಕ್ಕೂ ಅಧಿಕ ಬಡ ಕುಟುಂಬಗಳು ಪಡಿತರ ವ್ಯವಸ್ಥೆಯನ್ನು ಅವಲಂಬಿಸಿವೆ. ಈ ಹಿಂದೆ ಫಲಾನುಭವಿಗಳಿಗೆ ತಲಾ 10 ಕೆ.ಜಿ ಅಕ್ಕಿ ವಿತರಿಸಲಾಗುತ್ತಿತ್ತು. ಆದರೆ ಆಹಾರ ಇಲಾಖೆಯ ಇತ್ತೀಚಿನ ಸುತ್ತೋಲೆಯಂತೆ ಪ್ರತಿ ಸದಸ್ಯರಿಗೆ 7 ಕೆ.ಜಿ ಅಕ್ಕಿ ಹಾಗೂ 3 ಕೆ.ಜಿ ರಾಗಿ ವಿತರಿಸಲಾಗುತ್ತಿದೆ.

ಆರೋಗ್ಯದ ದೃಷ್ಟಿಯಿಂದ ರಾಗಿ ವಿತರಿಸುವ ಸರ್ಕಾರದ ಕ್ರಮಕ್ಕೆ ಸಾರ್ವಜನಿಕರಿಂದ ವಿರೋಧವಿಲ್ಲ. ಆದರೆ ವಿತರಿಸಲಾಗುತ್ತಿರುವ ರಾಗಿಯ ಗುಣಮಟ್ಟ ತೀರಾ ಕಳಪೆಯಾಗಿದ್ದು, ಮೂಟೆ ತೆರೆದಾಗ ರಾಗಿಗಿಂತ ಕಲ್ಲು, ಮಣ್ಣು, ಕಸ ಹಾಗೂ ಧೂಳೇ ಹೆಚ್ಚಾಗಿ ಕಂಡುಬರುತ್ತಿದೆ. ಇದರಿಂದ ಪಡಿತರ ಪಡೆಯಲು ಬರುವ ಗ್ರಾಹಕರು ನ್ಯಾಯಬೆಲೆ ಅಂಗಡಿ ಮಾಲೀಕರೊಂದಿಗೆ ವಾಗ್ವಾದ ನಡೆಸುವಂತಾಗಿದೆ.

ಇದನ್ನೂ ಓದಿ > > ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

ಸರ್ಕಾರದ ಗೋದಾಮುಗಳಿಂದ ಸರಬರಾಜಾಗುವ ರಾಗಿಯನ್ನೇ ನ್ಯಾಯಬೆಲೆ ಅಂಗಡಿ ಮಾಲೀಕರು ವಿತರಿಸುತ್ತಿದ್ದು, ಸ್ಥಳೀಯ ವಿತರಕರಿಂದ ಯಾವುದೇ ಲೋಪವಾಗಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಹೀಗಾಗಿ ಕಳಪೆ ಆಹಾರ ಧಾನ್ಯ ಪೂರೈಕೆಯ ಹೊಣೆ ಹೊತ್ತಿರುವ ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ನಡುವೆ ರಾಗಿಯ ಗುಣಮಟ್ಟದ ಕುರಿತು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ಭರತ್‌ರಾಜ್, ಆಹಾರ ನಿರೀಕ್ಷಕರಾದ ಬಾಲಚಂದ್ರ ಹಾಗೂ ನಾಗರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ರಾಗಿಯ ಗುಣಮಟ್ಟದಲ್ಲಿ ಲೋಪವಿರುವುದು ಕಂಡುಬಂದಿದೆ ಎನ್ನಲಾಗಿದೆ.

ಈ ಸಂಬಂಧ ತಹಶೀಲ್ದಾರ್ ಅವರು ಸರ್ಕಾರದ ಉನ್ನತ ಮಟ್ಟದ ಆಹಾರ ಸರಬರಾಜು ಅಧಿಕಾರಿಗಳಿಗೆ ಲಿಖಿತ ಪತ್ರ ಬರೆದು, ಮುಂದಿನ ತಿಂಗಳಿನಿಂದ ಫಲಾನುಭವಿಗಳಿಗೆ ಸ್ವಚ್ಛ ಹಾಗೂ ಗುಣಮಟ್ಟದ ರಾಗಿಯನ್ನೇ ಪೂರೈಸುವಂತೆ ಸೂಚಿಸಿದ್ದಾರೆ  ಎನ್ನಲಾಗಿದೆ.

ಇದನ್ನೂ ಓದಿ > > ತೀರ್ಥಹಳ್ಳಿ, ಸರ್ಕಾರಿ ಶಾಲೆಯ ಬೀಗ ಒಡೆದ ದುಷ್ಕರ್ಮಿಗಳು!

ಇದನ್ನೂ ಓದಿ > > ಜನತೆಗೆ ಶಾಕ್‌ ಕೊಟ್ಟ ಸರ್ಕಾರ, ಹೆಚ್ಚಳವಾಗಲಿದೆ ಹಾಲಿನ ದರ!

ಬಡವರ ಆಹಾರದ ವಿಚಾರದಲ್ಲಿ ನಿರ್ಲಕ್ಷ್ಯ ತೋರಬಾರದು. ತಕ್ಷಣವೇ ಕಳಪೆ ರಾಗಿ ವಿತರಣೆಯನ್ನು ಸ್ಥಗಿತಗೊಳಿಸಿ, ಉತ್ತಮ ಗುಣಮಟ್ಟದ ಆಹಾರ ಧಾನ್ಯ ಪೂರೈಸಬೇಕು. ಇಲ್ಲವಾದಲ್ಲಿ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರತಿಭಟನೆ ನಡೆಸುವುದರ ಜೊತೆಗೆ ತಾಲೂಕು ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಪಡಿತರ ಫಲಾನುಭವಿಗಳು ಎಚ್ಚರಿಕೆ ನೀಡಿದ್ದಾರೆ.

Tags: kannada newskannada news livelatest newsmalnad newsMore stones and soil than ragi! Ration beneficiaries express outrage!Ration beneficiariesshimogashivamoggaವಿಶೇಷ ವರದಿಶಿವಮೊಗ್ಗ
Previous Post

ತೀರ್ಥಹಳ್ಳಿ, ಸರ್ಕಾರಿ ಶಾಲೆಯ ಬೀಗ ಒಡೆದ ದುಷ್ಕರ್ಮಿಗಳು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!

ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!

October 30, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ತೀರ್ಥಹಳ್ಳಿ, ಸರ್ಕಾರಿ ಶಾಲೆಯ ಬೀಗ ಒಡೆದ ದುಷ್ಕರ್ಮಿಗಳು!

October 30, 2026
ಜನತೆಗೆ ಶಾಕ್‌ ಕೊಟ್ಟ ಸರ್ಕಾರ, ಹೆಚ್ಚಳವಾಗಲಿದೆ ಹಾಲಿನ ದರ!

ಜನತೆಗೆ ಶಾಕ್‌ ಕೊಟ್ಟ ಸರ್ಕಾರ, ಹೆಚ್ಚಳವಾಗಲಿದೆ ಹಾಲಿನ ದರ!

October 29, 2026
ಶಿವಮೊಗ್ಗ | ಯುವಕನಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 50 ಸಾವಿರ ರೂ. ದಂಡ!, ಏನಿದು ಪ್ರಕರಣ?

ಶಿವಮೊಗ್ಗ, 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1,01,000 ರೂ. ದಂಡ!

October 29, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!

ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!

October 30, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ತೀರ್ಥಹಳ್ಳಿ, ಸರ್ಕಾರಿ ಶಾಲೆಯ ಬೀಗ ಒಡೆದ ದುಷ್ಕರ್ಮಿಗಳು!

October 30, 2026

Copyright © 2026 Yuva Dhwani. Designed by KIPL