ಶಿವಮೊಗ್ಗ: ಗಾಜನೂರಿನಲ್ಲಿ ಗಾರೆ ಮೇಸ್ತ್ರಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ.
ಮೃತನನ್ನು ಶಿವಮೊಗ್ಗದ ಹೊಸಮನೆ ನಿವಾಸಿ ಶ್ರೀನಿವಾಸ್ (36) ಎಂದು ಗುರುತಿಸಲಾಗಿದೆ.
ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ವಾಸವಿದ್ದು, ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರು. ಗಾಜನೂರಿನ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ. ದುಷ್ಕರ್ಮಿಗಳು ಶ್ರೀನಿವಾಸ್ ಅವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ತುಂಗಾನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.














