• About Us
  • Advertise
  • Privacy & Policy
  • Contact Us
Thursday, June 18, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಎನ್‌ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ

ಭಾಷೆ ಬೆಳೆದಾಗ ಮಾತ್ರ ಸಂಸ್ಕೃತಿ ಬೆಳೆಯುತ್ತದೆ | ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 17, 2026
in ಶಿವಮೊಗ್ಗ
ಎನ್‌ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ
Share on FacebookShare on TwitterShare on WhatsApp
ಶಿವಮೊಗ್ಗ: ಭಾಷೆಯ ವೈವಿಧ್ಯತೆಯನ್ನು ಬೆಳೆಸಿದಾಗ ಮಾತ್ರ, ನಮ್ಮ ಸಂಸ್ಕೃತಿ ನಿಜವಾಗಿಯೂ ಬೆಳೆಯುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.
ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಕಾಲೇಜಿನ ನವೀಕೃತ ಕಟ್ಟಡದ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಳೆದ 17 ವರ್ಷಗಳಲ್ಲಿ ಈ ವಿದ್ಯಾಸಂಸ್ಥೆ ಅನೇಕ ಸವಾಲುಗಳನ್ನು ಎದುರಿಸಿದರು, ಇಂದು ದೊಡ್ಡ ಹೆಮ್ಮರವಾಗಿ ಬೆಳೆದು ನಿಂತಿದ್ದು, ಸಾವಿರಾರು ವಿದ್ಯಾರ್ಥಿಗಳು ಇದರ ನೆರಳಿನಲ್ಲಿ ಸಾಧಕರಾಗಿ ಹೊರಹೊಮ್ಮಿದ್ದಾರೆ. ಇದರೊಂದಿಗೆ ಸಹನೆ ಇದ್ದವನು ಮಾತ್ರ ನಿಜವಾದ ಉತ್ತಮ ನಾಯಕನಾಗುತ್ತಾನೆ ಎಂಬ ಮಾತು ಸತ್ಯವಾಗಿದೆ.
ಇದನ್ನೂ ಓದಿ >  ಹಾವು ಬಿಟ್ಟು ಯುವತಿ ಕೊಲೆಗೆ ಯತ್ನ, ಇಬ್ಬರು ಆರೋಪಿಗಳ ಬಂಧನ!
ಮಕ್ಕಳಿಗೆ ಶಿಕ್ಚಣದ ಜೊತೆಗೆ ಸಂಸ್ಕಾರ ಬೇಕಿದೆ. ನಮ್ಮ ಆತ್ಮಸಾಕ್ಷಿಗೆ ಸದಾ ಗೌರವ ನೀಡಬೇಕು.‌ ಈ ಜಗತ್ತು ಎಂದಿಗೂ ಓದಲಾಗದ ಪುಸ್ತಕ. ಯಾವುದೇ ಶುಲ್ಕವಿಲ್ಲದೆ ಜೀವನದಲ್ಲಿ ಪಾಠ ಕಲಿಸುವ ಅತ್ಯುತ್ತಮ ಸಂಸ್ಥೆ ಬದುಕು. ಜೀವನಾನುಭವ ಒಬ್ಬೊಬ್ಬರಿಗೆ ಒಂದೊಂದು ಪಾಠ ಕಲಿಸುತ್ತದೆ‌. ಅಂತಹ ವಾಸ್ತವತೆಯ ಅರಿವಿನ ಮೂಲಕ ಬದುಕು ಮುನ್ನಡೆಸಿದಾಗ ಮಾತ್ರ ನಿಜವಾದ ಉನ್ನತಿ ಸಾಧ್ಯ ಎಂದು ಹೇಳಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಮಾತ್ರ ಉನ್ನತ ಶಿಕ್ಷಣದ ಬೆಳವಣಿಗೆಗೆ ಸಾಕಾಗುವುದಿಲ್ಲ. ಇಂದಿನ ಕಾಲದಲ್ಲಿ ಮಾಹಿತಿ ಎಲ್ಲೆಡೆ ಸುಲಭವಾಗಿ ಲಭ್ಯವಿದೆ. ಆದ್ದರಿಂದ ವಿದ್ಯಾರ್ಥಿಗಳು, ಕಾಲೇಜಿಗೆ ಏಕೆ ಬರಬೇಕು?, ಎಂಬ ಪ್ರಶ್ನೆ ಕೇಳುತ್ತಿದ್ದಾರೆ. ಈ ಪ್ರಶ್ನೆಗೆ ಉಪನ್ಯಾಸಕರು ಮತ್ತು ಶಿಕ್ಷಣ ಸಂಸ್ಥೆಗಳು ಉತ್ತರಿಸಬೇಕಾಗಿದೆ.
ಇದನ್ನೂ ಓದಿ >  ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?
ಇಂದಿನ ಬೋಧನಾ ವಿಧಾನದಲ್ಲಿ ಉಪನ್ಯಾಸಕರಿಗೂ ಹೊಸ ಸವಾಲುಗಳಿವೆ. ತರಗತಿ ಕೊಠಡಿಯಲ್ಲಿ ಕೇವಲ ಮಾಹಿತಿಯನ್ನು ನೀಡುವ ವ್ಯವಸ್ಥೆಯಿಂದ ಹೊರಬಂದು, ವಿಶ್ಲೇಷಿಸುವ ಹಾಗೂ ನಾವೀನ್ಯಯುತವಾಗಿ ಸಮಸ್ಯೆಗಳನ್ನು ಪರಿಹಾರ ಮಾಡುವಂತಹ ಕಲಿಕೆಗೆ ಒತ್ತು ನೀಡಬೇಕಿದೆ ಎಂದು ಹೇಳಿದರು.
ಇದೇ ವೇಳೆ ಕಾಲೇಜಿನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ 95 ಕ್ಕೂ ಹೆಚ್ಚು ಜಾತಿಯ ಹಣ್ಣಿನ ಗಿಡಗಳನ್ನು ಹೊಂದಿದ ನೂತನ ಉದ್ಯಾನವನವನ್ನು ಲೋಕಾರ್ಪಣೆಗೊಳಿಸಲಾಯಿತು. ಜೊತೆಯಲ್ಲಿ ಶಿಕ್ಷಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ, ನೂತನವಾಗಿ ನಿರ್ಮಾಣಗೊಂಡ ಕೊಠಡಿಗಳು, ಆಧುನಿಕ ಕಂಪ್ಯೂಟರ್ ಲ್ಯಾಬ್, ಸುಸಜ್ಜಿತ ಸಭಾಂಗಣ, ಪ್ರಾಂಶುಪಾಲರ ಕೊಠಡಿ, ನವೀಕೃತ ಗ್ರಂಥಾಲಯ ಹಾಗೂ ಕಿರು ಸಭಾಂಗಣಗಳನ್ನೂ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಪಿ.ಮೈಲಾರಪ್ಪ, ಎಚ್.ಸಿ.ಶಿವಕುಮಾರ್, ಎಂ‌.ಎಸ್.ಅನಂತದತ್ತಾ, ಕುಲಸಚಿವರಾದ ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎಸ್.ಶಿವಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.
Tags: kannada news livemalnad newsNES Advanced StudiesNES Advanced Studies Parma College Renovated Building Lokashimogashivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಜೂನ್ 20 ರಂದು ಉದ್ಯೋಗ ನೇರ ಸಂದರ್ಶನ

Next Post

ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

June 17, 2026
ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

June 17, 2026
ಎನ್‌ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ

ಎನ್‌ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ

June 17, 2026
JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

ಜೂನ್ 20 ರಂದು ಉದ್ಯೋಗ ನೇರ ಸಂದರ್ಶನ

June 17, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

June 17, 2026
ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

June 17, 2026

Copyright © 2026 Yuva Dhwani. Designed by KIPL