• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಎನ್ಇಎಸ್ |  ಜೆ.ಎನ್.ಎನ್.ಸಿ.ಇ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರ‍್ಯಾಂಕ್, ನಾಲ್ಕು ಚಿನ್ನದ ಪದಕ ಬಾಚಿದ ಪಾರ್ವತಿ ಸಾಲೇರ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 9, 2026
in ಶಿವಮೊಗ್ಗ
ಎನ್ಇಎಸ್ |  ಜೆ.ಎನ್.ಎನ್.ಸಿ.ಇ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರ‍್ಯಾಂಕ್, ನಾಲ್ಕು ಚಿನ್ನದ ಪದಕ ಬಾಚಿದ ಪಾರ್ವತಿ ಸಾಲೇರ
Share on FacebookShare on TwitterShare on WhatsApp
ಶಿವಮೊಗ್ಗ: ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಪಾರ್ವತಿ ಸಾಲೇರ ರವರು ಎಂಬಿಎ ವಿಭಾಗದಲ್ಲಿ ವಿಟಿಯು ವ್ಯಾಪ್ತಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ನಾಲ್ಕು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಮತ್ತೋರ್ವ ವಿದ್ಯಾರ್ಥಿ ಸಂಜಯ್ ಎಂ.ವಿ ಅವರು ಎಂಟೆಕ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ರ‍್ಯಾಂಕ್ ಗಳಿಸಿದ್ದಾರೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ (ಎನ್ಇಎಸ್) ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಅವರು ಸಂತಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಬೆಳಗಾವಿಯಲ್ಲಿ ಆಯೋಜಿಸಿದ್ದ 25ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಮತ್ತು ಬಂಗಾರದ ಪದಕ ನೀಡಿ ಅಭಿನಂದಿಸಿದ್ದಾರೆ ಎಂದು ತಿಳಿಸಿದರು.
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಪದವಿ ಪಡೆಯುವ ವೇಳೆಯು ಪಾರ್ವತಿ ಸಾಲೇರ ಅವರು ಆರು ಚಿನ್ನದ ಪದಕಗಳನ್ನು ಪಡೆದಿದ್ದರು. ಇದೀಗ ಎಂಬಿಎ ಸ್ನಾತಕೋತ್ತರ ಪದವಿಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಭದ್ರಾವತಿ ಕ್ಷೇತ್ರದ ಶಾಸಕರಾಗಿದ್ದ ಸಾಲೇರ ಸಿದ್ದಪ್ಪ ಅವರ ಮೊಮ್ಮಗಳು. ಅವರ ತಾಯಿ ಐಶ್ವರ್ಯ ಸಾಲೇರ ಕೂಡ ಜೆ.ಎನ್.ಎನ್.ಸಿ.ಇ ಹಿರಿಯ ವಿದ್ಯಾರ್ಥಿಯಾಗಿದ್ದು ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ ಐದನೇ ರ‍್ಯಾಂಕ್ ಪಡೆದಿದ್ದರು ಎಂದು ವಿವರಿಸಿದರು.

ಎನ್ಇಎಸ್ ಚಿನ್ನದ ಪದಕದ ಗರಿ

ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಪಾರ್ವತಿ ಸಾಲೇರ ಅವರಿಗೆ ಸಂಸ್ಥೆಯ ಅಮೃತಮಹೋತ್ಸವದ ಸ್ಮರಣಾರ್ಥವಾಗಿ, ಎನ್ಇಎಸ್ ಅಮೃತಮಹೋತ್ಸವ ಚಿನ್ನದ ಪದಕ ನೀಡಲಾಗುವುದು. ಫೆಬ್ರವರಿ ಕೊನೆಯ ವಾರದಲ್ಲಿ‌ ನಡೆಯುವ ಐಡಿಯಾ ಲ್ಯಾಬ್ ಉದ್ಘಾಟನಾ ಸಮಾರಂಭದಲ್ಲಿ ರ‍್ಯಾಂಕ್ ವಿಜೇತರನ್ನು ಆಡಳಿತ ಮಂಡಳಿಯಿಂದ ಅಭಿನಂದಿಸಲಾಗುವುದು. ಎನ್ಇಎಸ್ ಅಮೃತಮಹೋತ್ಸವ ಅಂಗವಾಗಿ, ವಿವಿಧ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯಾವುದೇ ವಿಭಾಗದ ವಿದ್ಯಾರ್ಥಿಗಳು, ವಿಶ್ವವಿದ್ಯಾಲಯ ಮಟ್ಟದಲ್ಲಿ ಮೊದಲ ರ‍್ಯಾಂಕ್ ಪಡೆದರೆ ಚಿನ್ನದ ಪದಕ ನೀಡಿ ಗೌರವಿಸಲಾಗುತ್ತಿದೆ.
                                                   -ಜಿ.ಎಸ್.ನಾರಾಯಣ ರಾವ್, ಅಧ್ಯಕ್ಷರು, ರಾಷ್ಟ್ರೀಯ ಶಿಕ್ಷಣ ಸಮಿತಿ

ವಿದ್ಯಾಸಂಸ್ಥೆಗೆ ಅಭಾರಿ

ಬಿಇ ಮತ್ತು ಎಂಬಿಎನಲ್ಲಿ ಮೊದಲ ರ‍್ಯಾಂಕ್ ಪಡೆಯಲು ಕಾಲೇಜು ಮತ್ತು ಉಪನ್ಯಾಸಕರಿಂದ ಪೂರಕ ವಾತಾವರಣವಿತ್ತು. ಅದಕ್ಕಾಗಿ ವಿದ್ಯಾಸಂಸ್ಥೆಗೆ ಅಭಾರಿಯಾಗಿದ್ದೇನೆ. ಈಗಾಗಲೇ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಕಂಪನಿಯಲ್ಲಿ ಪ್ರಮುಖ ಹುದ್ದೆಯ ಅವಕಾಶ ದೊರೆತಿದ್ದು, ಇನ್ನಷ್ಟು ಉನ್ನತ ಹೆಜ್ಜೆಗಳ ಕುರಿತಾಗಿ ಯೋಜಿಸಲಿದ್ದೇನೆ.
                                          -ಪಾರ್ವತಿ ಸಾಲೇರ, ರ‍್ಯಾಂಕ್ ವಿಜೇತ ವಿದ್ಯಾರ್ಥಿನಿ
ಎನ್ಇಎಸ್ ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ ಮಾತನಾಡಿ, ಕಾಲೇಜಿನಲ್ಲಿ ನಾವೀನ್ಯತೆ ಹಾಗೂ ಸಂಶೋಧನಾ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. 2025ರಲ್ಲಿ ವಿವಿಧ ವಿಭಾಗಗಳ ಸುಮಾರು 14 ಉಪನ್ಯಾಸಕರು ಪಿಎಚ್.ಡಿ ಪದವಿ ಪಡೆದಿದ್ದು, ಇತ್ತೀಚೆಗೆ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪ್ರಮಾಣ ಪತ್ರ ಪಡೆದಿದ್ದಾರೆ. ಪ್ಲೇಸ್ಮೆಂಟ್ ಚಟುವಟಿಕೆಗಳು ವಿದ್ಯಾಸಂಸ್ಥೆಯಲ್ಲಿ ಸಕ್ರಿಯವಾಗಿ ನಡೆಯುತ್ತಿದೆ. ಟಿಸಿಎಸ್, ಐಬಿಎಂ ನಂತಹ ಪ್ರತಿಷ್ಟಿತ ಕಂಪನಿಗಳು ಈಗಾಗಲೇ ಉದ್ಯೋಗವಕಾಶ ನೀಡುವಂತಹ ಚಟುವಟಿಕೆಗಳಲ್ಲಿ ನಿರಂತರವಾಗಿ ನಡೆಯುತ್ತಿದೆ. ದೈನಂದಿನ ತರಗತಿಗಳ ಜೊತೆಯಲ್ಲಿ ಪ್ರಾಯೋಗಿಕ ಆಧಾರಿತ ಕಲಿಕೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ ಎಂದು ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿ, ನ್ಯೂಜೆನ್ ಐಇಡಿಸಿ ಮೂಲಕ ಕೇಂದ್ರ ಸರ್ಕಾರದ ಆರ್ಥಿಕ ಸಹಕಾರದೊಂದಿಗೆ, ವಿದ್ಯಾರ್ಥಿಗಳ ನಾವೀನ್ಯಯುತ ಯೋಚನೆಗಳನ್ನು, ಯೋಜನೆಯಾಗಿ ರೂಪಿಸಿ ಸ್ವಂತ ಕಂಪನಿಗಳನ್ನು ಸ್ಥಾಪಿಸುವಂತೆ ಪ್ರೇರಣೆ ನೀಡುವಂತಹ ಪೂರಕ ವೇದಿಕೆ ನೀಡುವಲ್ಲಿ ಕಾಲೇಜು ಕ್ರಿಯಾಶೀಲವಾಗಿದೆ ಎಂದು ಹೇಳಿದರು.
ಎನ್ಇಎಸ್ ಸಹಕಾರ್ಯದರ್ಶಿ ಡಾ.ಪಿ.ನಾರಾಯಣ್, ಸಂಶೋಧನಾ ಡೀನ್ ಡಾ.ಎಸ್. ವಿ.ಸತ್ಯನಾರಾಯಣ, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಕಾಂತ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಜಲೇಶ್ ಕುಮಾರ್, ಪೋಷಕರಾದ ಜ್ಯೋತಿ ಸಾಲೇರ, ಐಶ್ವರ್ಯ ಸಾಲೇರ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ, ಸುಭದ್ರ, ಸಂತೋಷ್ ಶಾನಭಾಗ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com
Previous Post

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

Next Post

18 ಪಾಸ್‌ಬುಕ್, 25 ಎಟಿಎಂ ಕಾರ್ಡ್, 7 ಚೆಕ್ ಬುಕ್ ವಶಕ್ಕೆ, 55 ಕೋಟಿ ವಂಚನೆ, ಏನಿದು ಪ್ರಕರಣ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
18 ಪಾಸ್‌ಬುಕ್, 25 ಎಟಿಎಂ ಕಾರ್ಡ್, 7 ಚೆಕ್ ಬುಕ್ ವಶಕ್ಕೆ, 55 ಕೋಟಿ ವಂಚನೆ, ಏನಿದು ಪ್ರಕರಣ?

18 ಪಾಸ್‌ಬುಕ್, 25 ಎಟಿಎಂ ಕಾರ್ಡ್, 7 ಚೆಕ್ ಬುಕ್ ವಶಕ್ಕೆ, 55 ಕೋಟಿ ವಂಚನೆ, ಏನಿದು ಪ್ರಕರಣ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL