• About Us
  • Advertise
  • Privacy & Policy
  • Contact Us
Wednesday, June 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪು ಹಸ್ತಾಂತರ

ಡಾ. ಧನಂಜಯ ಸರ್ಜಿ ಅವರ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ನೆರವು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 21, 2026
in ಶಿವಮೊಗ್ಗ
ಶಿವಮೊಗ್ಗ, ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪು ಹಸ್ತಾಂತರ
Share on FacebookShare on TwitterShare on WhatsApp

ಶಿವಮೊಗ್ಗ: ಸಾರ್ವಜನಿಕರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸ್ ಇಲಾಖೆಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಉದ್ದೇಶದಿಂದ, 2025-26ನೇ ಸಾಲಿನ ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ, ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಗೆ ಮಂಜೂರಾಗಿದ್ದ ನೂತನ ‘ಪೊಲೀಸ್ ಜೀಪನ್ನು ಇಂದು ಅಧಿಕೃತವಾಗಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಯಿತು.

ನಗರದ ಮೆಗ್ಗಾನ್ ಆಸ್ಪತ್ರೆ ಮುಂಭಾಗದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ (ಎಸ್.ಪಿ ಆಫೀಸ್) ಆವರಣದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್ ಅವರು ಮತ್ತು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ನೂತನ ವಾಹನಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.

ಇದನ್ನೂ ಓದಿ >  ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ!, ಕಾರಣವೇನು?

ನೂತನ ವಾಹನ ಹಸ್ತಾಂತರಿಸಿ ಮಾತನಾಡಿದ ಡಾ. ಧನಂಜಯ ಸರ್ಜಿ ಅವರು, “ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದಿನೇ ದಿನೇ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ಅಪರಾಧಗಳ ನಿಯಂತ್ರಣ ಹಾಗೂ ಸಾರ್ವಜನಿಕರ ತುರ್ತು ಕರೆಗಳಿಗೆ ತ್ವರಿತವಾಗಿ ಸ್ಪಂದಿಸಲು ಪೊಲೀಸರಿಗೆ ಸುಸಜ್ಜಿತ ವಾಹನಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ನನ್ನ 2025-26ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಜಮ್ ಪೋರ್ಟಲ್ ಮೂಲಕ 7.2 ಲಕ್ಷದಲ್ಲಿ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪನ್ನು ಒದಗಿಸಿದ್ದೇವೆ, ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಶೇ 22% ರಿಂದ 25% ವಾಹನದ ಕೊರತೆ ಇದೆ, ಜಯನಗರ ಪೊಲೀಸ್ ಠಾಣೆ ಇರುವ ಜಾಗಕ್ಕೆ ಒಂದು ಇತಿಹಾಸ ಇದೆ, ಠಾಣೆ ಇರುವ ಜಾಗದಲ್ಲಿ ಜಿಲ್ಲೆಯ ಮೊದಲ ನ್ಯಾಯಾಲಯ ಇತ್ತು. ನಮ್ಮ ಸರ್ಜಿ ಆಸ್ಪತ್ರೆಯ ವತಿಯಿಂದ ನಾವು ಜಿಲ್ಲಾ ಪೊಲೀಸರಿಗೆ ವಾರ್ಷಿಕ ಹೆಲ್ತ್ ಚೆಕ್ ಅಪ್ ಅನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಪೊಲೀಸರ ಒತ್ತಡದ ಕೆಲಸ ನಡುವೆ ತಮ್ಮ ಆರೋಗ್ಯದ ಬಗ್ಗೆಯೂ ಗಮನ ಹರಿಸಬೇಕು. ಮುಂದಿನ ದಿನಗಳಲ್ಲೂ ಇಲಾಖೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು,” ಎಂದು ಭರವಸೆ ನೀಡಿದರು.

ನೂತನ ವಾಹನವನ್ನು ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದ ಶಿವಮೊಗ್ಗ ಎಸ್.ಪಿ.  ನಿಖಿಲ್ ಅವರು, “ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಇಂತಹ ಮೂಲಭೂತ ಸೌಕರ್ಯಗಳ ಸೇರ್ಪಡೆ ಅತ್ಯಗತ್ಯ. ಸಾರ್ವಜನಿಕರ ರಕ್ಷಣೆಗೆ ನಮ್ಮ ಸಿಬ್ಬಂದಿ ಸದಾ ಸಿದ್ಧರಿದ್ದು, ಈ ಹೊಸ ವಾಹನದಿಂದ ಜಯನಗರ ಠಾಣಾ ವ್ಯಾಪ್ತಿಯಲ್ಲಿ ಬೀಟ್ ವ್ಯವಸ್ಥೆಯನ್ನು (Beat System) ಮತ್ತಷ್ಟು ಚುರುಕುಗೊಳಿಸಲಾಗುವುದು. ಜಯನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಡಿ.ಸಿ ಆಫೀಸ್, ನ್ಯಾಯಾಲಯ, ಸರ್ಕಾರಿ ಕಚೇರಿಗಳು ಇರುವುದರಿಂದ ಠಾಣೆಗೆ ವಾಹನ ಅವಶ್ಯಕತೆ ಇತ್ತು. ಇಲಾಖೆಯ ಬೇಡಿಕೆಗೆ ತಕ್ಷಣ ಸ್ಪಂದಿಸಿ ತಮ್ಮ ಅನುದಾನದಲ್ಲಿ ವಾಹನ ಒದಗಿಸಿದ ಡಾ. ಧನಂಜಯ ಸರ್ಜಿ ಅವರಿಗೆ ಪೊಲೀಸ್ ಇಲಾಖೆ ಹಾಗೂ ಶಿವಮೊಗ್ಗ ಜನತೆಯ ಪರವಾಗಿ ವಿಶೇಷ ಧನ್ಯವಾದಗಳು,” ಎಂದು ತಿಳಿಸಿದರು.

ಈ ವೇಳೆ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ, ಡಿ.ವೈ.ಎಸ್.ಪಿ ಸಂಜೀವ್ ಕುಮಾರ್, ಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿ ಪಾಟೀಲ್, ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಅನಿಲ್ , ಪ್ರಮುಖರಾದ ಬೇಡರ ಹೊಸಹಳ್ಳಿ ಸಂದೀಪ್ , ಗಿರೀಶ್ ಮಲ್ಲಾಪುರ, ಶುಭಕರ್, ಸಂತೆಕಡೂರು ಹರೀಶ್, ರೇಣುಕಾರಾಧ್ಯ , ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳೀಧರ್ ರಾವ್ ಕುಲಕರ್ಣಿ, ವೈದ್ಯರಾದ ಡಾ. ವಿಜಯ ಕುಮಾರ ಮಾಯೆರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: felicitated by Jayanagar police stationJayanagar Police Stationkannada newskannada news livelatest newsmalnad newsNew jeep handed over to Shivamoggashimogashivamoggaಶಿವಮೊಗ್ಗ
Previous Post

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ!, ಕಾರಣವೇನು?

Next Post

ಶಿವಮೊಗ್ಗದಲ್ಲಿ 5,000 ಬಿಪಿಎಲ್ ಕಾರ್ಡ್ ರದ್ದು, ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026
ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

June 3, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

June 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026

Copyright © 2026 Yuva Dhwani. Designed by KIPL