• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸುದ್ದಿ ಸುತ್ತು 03-02-26 | ಸಾಗರ ಶ್ರೀ ಮಾರಿಕಾಂಬಾ ಜಾತ್ರೆ, ದರ್ಶನಕ್ಕೆ ಕಿ.ಮೀ.ಗಟ್ಟಲೆ ಸಾಲು | ನಗರಾಭಿವೃದ್ದಿ ಪ್ರಾಧಿಕಾರ ಕಾಮಗಾರಿ ತನಿಖೆಗೆ ಸಹಮತ | ಸಾಗರ-ಸಿಗಂದೂರು ಬಸ್‌ಗೆ ಚಾಲನೆ,

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 3, 2026
in ಶಿವಮೊಗ್ಗ
ಸುದ್ದಿ ಸುತ್ತು 03-02-26 | ಸಾಗರ ಶ್ರೀ ಮಾರಿಕಾಂಬಾ ಜಾತ್ರೆ, ದರ್ಶನಕ್ಕೆ ಕಿ.ಮೀ.ಗಟ್ಟಲೆ ಸಾಲು | ನಗರಾಭಿವೃದ್ದಿ ಪ್ರಾಧಿಕಾರ ಕಾಮಗಾರಿ ತನಿಖೆಗೆ ಸಹಮತ | ಸಾಗರ-ಸಿಗಂದೂರು ಬಸ್‌ಗೆ ಚಾಲನೆ,
Share on FacebookShare on TwitterShare on WhatsApp

ನಗರಾಭಿವೃದ್ದಿ ಪ್ರಾಧಿಕಾರ ಕಾಮಗಾರಿ ತನಿಖೆಗೆ ಸಹಮತ: ಸುಂದರೇಶ್

ಶಿವಮೊಗ್ಗ,ಫೆ.3: ಶಿವಮೊಗ್ಗ ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಯಾವುದೇ ಅವ್ಯವಹಾರ ನಡೆದಿದ್ದರೆ ಅದು ತನಿಖೆಯಾಗಲಿ, ಬೇಡ ಎಂದವರು ಯಾರು? ಆದರೆ, ಎಲ್ಲರ ಅಧ್ಯಕ್ಷಾವಧಿಯಲ್ಲಿ ನಡೆದ ಕಾಮಗಾರಿಗಳ ಬಗ್ಗೆಯೂ ತನಿಖೆಯಾಗಲಿ. ನನ್ನ ಅವಧಿಯಲ್ಲಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಯಾವ ಅಂಜಿಕೆಯೂ ನನಗಿಲ್ಲ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.

ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಸೂಡಾದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಅಧ್ಯಕ್ಷನಾಗಿ ಬರುವ ಮೊದಲೇ ಕಾಮಗಾರಿಗಳು ಮುಗಿದು ಹೋಗಿವೆ. ಕೆಲವು ಮಾತ್ರ ಉಳಿದಿದೆ ಅಷ್ಟೇ. ಪ್ರಸನ್ನಕುಮಾರ್ ಹೇಳಿದಂತೆ ಈಗಾಗಲೇ ಇದು ಲೋಕಾಯುಕ್ತ ತನಿಖೆಯಲ್ಲಿದೆ. ಲೋಕಾಯುಕ್ತರು ಖಂಡಿತ ತನಿಖೆ ಮಾಡುತ್ತಾರೆ. ಅವ್ಯವಹಾರವಾಗಿದ್ದರೆ ಶಿಕ್ಷೆಯಾಗಲಿ, ಬೇಡ ಎಂದವರು ಯಾರು? ಅಧಿಕಾರಿಗಳು ತಮ್ಮ ತಮ್ಮ ಕೆಲಸಗಳನ್ನು ಮಾಡಿದ್ದಾರೆ. ಟೆಂಡರ್ ಕರೆಯುವುದು ಸೇರಿದಂತೆ ಅಧಿಕಾರಿಗಳ ವ್ಯಾಪ್ತಿಯಲ್ಲಿ ಇವೆಲ್ಲವೂ ಪಾರದರ್ಶಕವಾಗಿ ನಿಯಮಬದ್ಧವಾಗಿ ನಡೆಯುತ್ತದೆ. ಆಕಸ್ಮಾತ್ ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರನ್ನು ಕಾಪಾಡುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಿ. ಇದಕ್ಕೆ ನನ್ನ ಸಹಮತವೂ ಇದೆ ಎಂದರು.
ದಿನೇಶ್ ಎಂಬ ಅಧಿಕಾರಿಯ ವರ್ಗಾವಣೆ ಕುರಿತಂತೆ ಮಾತನಾಡಿದ ಅವರು, ಅವರ ವರ್ಗಾವಣೆ ಬಗ್ಗೆ ನನಗೆ ಗೊತ್ತಿಲ್ಲ. ವರ್ಗಾವಣೆಯ ವ್ಯಾಪ್ತಿ ನಮಗೆ ಬರುವುದೂ ಇಲ್ಲ. ಆಕಸ್ಮಾತ್ ಆ ವ್ಯಕ್ತಿ ತಪ್ಪು ಮಾಡಿದ್ದರೆ ಅದನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ. ವರ್ಗಾವಣೆ ಆದರೆಂದರೆ ತಪ್ಪುಗಳು ವರ್ಗಾವಣೆ ಆಗುವುದಿಲ್ಲ. ಹೇಗಿದ್ದರೂ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ನಾವು ಇದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದರು.
ಒಟ್ಟಾರೆ ನನ್ನ ಅವಧಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆರೋಪ ಮಾಡುವವರು ಮಾಡಲಿ ಬಿಡಿ. ನಾನು ಬೇಡ ಎನ್ನುವುದಿಲ್ಲ. ಸೂಡಾಕ್ಕೆ ನಷ್ಟವಾಗುವುದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಬೋಗಸ್ ಬಿಲ್ ಮಾಡಿದ್ದರೆ ಎಲ್ಲರೂ ಮನೆಗೆ ಹೋಗುತ್ತಾರೆ. ಆದರೆ, ಇದಕ್ಕಾಗಿ ನಿರ್ದಿಷ್ಟ ಅವಧಿಯಲ್ಲಿ ಎಂದು ಹೇಳುವುದು ಸರಿಯಲ್ಲ. ಸೂಡಾದ ಆರಂಭದ ಕಾಲದಿಂದಲೂ ತನಿಖೆಯಾಗಲಿ ಎಂದು ಪುನರುಚ್ಛರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಆಯುಕ್ತ ವಿಶ್ವನಾಥ್ ಎಸ್. ಮುದ್ದಜಿ, ಸದಸ್ಯರಾದ ಪ್ರವೀಣ್ ಕುಮಾರ್, ಫ್ರಾನ್ಸಿಸ್, ಅರುಣಾಕುಮಾರಿ, ಇಂಜಿನಿಯರ್ ಗಳು ಸೇರಿದಂತೆ ಹಲವರಿದ್ದರು.

ಸಾಗರ-ಸಿಗಂದೂರು ಬಸ್‌ಗೆ ಚಾಲನೆ

ಸಾಗರ : ಈತನಕ ಬಸ್ ಸೌಲಭ್ಯವನ್ನೇ ಕಾಣದ ಕುಗ್ರಾಮ ಮರಾಠಿಗೆ ಬಸ್ ಸೌಲಭ್ಯ ಮೊದಲ ಬಾರಿಗೆ ಕಲ್ಪಿಸಲಾಗಿದೆ. ಇದರಿಂದಾಗಿ ಜನರಿಗೆ ಸಾರಿಗೆ ಸೌಲಭ್ಯ ಕಲ್ಪಿಸಿದ ತೃಪ್ತಿ ನಮಗೆ ಇದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಡಿಪೋದಲ್ಲಿ ಸೋಮವಾರ ಸಾಗರ-ಸಿಗಂದೂರು ಮತ್ತು ಸಾಗರ ನಗರ ಸಾರಿಗೆ ಬಸ್‌ಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಸಿಗಂದೂರು ಸೇತುವೆ ಆದ ನಂತರ ಹಿನ್ನೀರ ಭಾಗದ ಜನರು ನಮ್ಮ ಭಾಗಕ್ಕೆ ಸರ್ಕಾರಿ ಬಸ್ ಬರುತ್ತಿಲ್ಲ. ಇದರಿಂದ ಗ್ಯಾರಂಟಿ ಸೌಲಭ್ಯ ನಮಗೆ ಪಡೆಯಲು ಆಗುತ್ತಿಲ್ಲ ಎಂದು ಮಹಿಳೆಯರು ಸಹ ದೂರಿದ್ದರು. ಇದನ್ನು ಮನಗಂಡು ಸಿಗಂದೂರಿಗೆ ನೂತನ ಬಸ್ ಸೌಲಭ್ಯ ಒದಗಿಸಿದೆ. ಮರಾಠಿಯಂತಹ ಕುಗ್ರಾಮಕ್ಕೂ ಬಸ್ ಸೌಲಭ್ಯ ಸಿಕ್ಕಂತೆ ಆಗಿದೆ. ಜನರಿಗೆ ಸಾರಿಗೆ ಸಂಪರ್ಕ ಸಿಕ್ಕರೆ ಅವರ ಬದುಕು ಸುಧಾರಿಸುತ್ತದೆ ಎಂದು ತಿಳಿಸಿದರು.
ನಗರ ಸಾರಿಗೆ ಬೇಕು ಎನ್ನುವುದು ಬಹಳ ಜನರ ಬೇಡಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವರಿಗೆ ಮನವಿ ಮಾಡಿಕೊಂಡ ಮೇರೆಗೆ ಒಂದು ನಗರ ಸಾರಿಗೆ ಬಸ್‌ಗೆ ಅವಕಾಶ ಕಲ್ಪಿಸಿದ್ದಾರೆ.
ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಸುರೇಶ್ ಬಾಬು, ಗಣಪತಿ ಮಂಡಗಳಲೆ, ಚೇತನರಾಜ್ ಕಣ್ಣೂರು, ಮಧುಮಾಲತಿ, ದೇವರಾಜ್, ಕನ್ನಪ್ಪ, ಕೆ.ಎಸ್.ಆರ್.ಟಿ.ಸಿ.ಯ ಶ್ರೀಶೈ ಬಿರಾದಾರ್, ರಾಜಪ್ಪ ಇನ್ನಿತರರು ಹಾಜರಿದ್ದರು.

ಸಾಗರ ಶ್ರೀ ಮಾರಿಕಾಂಬಾ ಜಾತ್ರೆ, ದರ್ಶನಕ್ಕೆ ಕಿ.ಮೀ.ಗಟ್ಟಲೆ ಸಾಲು, ಹೇಗಿತ್ತು ಜಾತ್ರೆಯ ಸಂಭ್ರಮ?

ಸಾಗರ : ಇಲ್ಲಿನ ಶ್ರೀ ಮಾರಿಕಾಂಬಾ ದೇವಿಯ 8 ದಿನಗಳ ಜಾತ್ರೆಗೆ ಮಂಗಳವಾರ ಚಾಲನೆ ದೊರೆಯಿತು. ಬೆಳಿಗ್ಗೆ ಶ್ರೀ ದೇವಿಗೆ ವಿಶೇಷ ಪೂಜೆ ಜೊತೆಗೆ ಮಾಂಗಲ್ಯಧಾರಣೆ ಶಾಸ್ತ ನಡೆಯಿತು. ದೇವಸ್ಥಾನದ ಅರ್ಚಕ ವೃಂದ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮಾರಿಕಾಂಬಾ ತವರುಮನೆಯಲ್ಲಿ ಪ್ರತಿಷ್ಟಾಪನೆಗೊಂಡಿರುವ ಅಮ್ಮನವರು ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲು ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳದಲ್ಲಿಯೆ ಹಾಜರಿದ್ದರು. ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ಎಎಸ್ಪಿ ಡಾ. ಬೆನಕ ಪ್ರಸಾದ್ ಇನ್ನಿತರರು ಉಪಸ್ಥಿತರಿದ್ದರು.
ಅಮ್ಮನವರ ದರ್ಶನಕ್ಕೆ ಕಿ.ಮೀ.ಗಟ್ಟಲೆ ಸಾಲು : ಶ್ರೀ ಮಾರಿಕಾಂಬೆ ದರ್ಶನಕ್ಕೆ ಭಕ್ತರು ನೂಗುನುಗ್ಗಲು ಮಾಡಿದ್ದು ಕಂಡು ಬಂದಿದೆ. ರಾತ್ರಿ 9 ಗಂಟೆಯಿಂದಲೇ ಮಾರಿಕಾಂಬಾ ದೇವಿ ಪೂಜೆಗೆ ಜನರು ಸರದಿ ಸಾಲಿನಲ್ಲಿ ನಿಂತಿದ್ದರು. ರಾತ್ರಿ ನಿಂತವರಿಗೆ ಬೆಳಿಗ್ಗೆ 5 ಗಂಟೆಗೆ ಅಮ್ಮನ ದರ್ಶನವಾದರೆ ಬೆಳಿಗ್ಗೆ 5ರ ನಂತರ ಅಮ್ಮನ ದರ್ಶನಕ್ಕೆ ಬಂದವರಿಗೆ ಮಧ್ಯಾಹ್ನವಾದರೂ ದರ್ಶನ ಭಾಗ್ಯ ಸಿಗಲಿಲ್ಲ. ಅಮ್ಮನವರ ದರ್ಶನಕ್ಕೆ ದೇವಸ್ಥಾನದಿಂದ ಜೋಗ ರಸ್ತೆಯ ಸಣ್ಣಮನೆ ಸೇತುವೆ ದಾಟಿ ಸುಮಾರು 2ರಿಂದ 4 ಕಿ.ಮೀ.ವರೆಗೂ ಭಕ್ತರು ಸರದಿ ಸಾಲಿನಲ್ಲಿ ನಿಂತಿದ್ದರು.
ಪಾಸ್‌ಗಿಲ್ಲ ಕಿಮ್ಮತ್ತು : ಆರಂಭದಲ್ಲಿ ಪಾಸ್ ವ್ಯವಸ್ಥೆ ಇಲ್ಲ ಎಂದು ಹೇಳಿದ್ದ ಸಮಿತಿ ಭಕ್ತರ ಒತ್ತಾಯಕ್ಕೆ ಮಣಿದು ಪಾಸ್ ವ್ಯವಸ್ಥೆ ಕಲ್ಪಿಸಿತ್ತು. ಪಾಸ್ ವ್ಯವಸ್ಥೆ ಸಮಿತಿಗೆ ಮುಳುವಾಗಿದೆ ಎನ್ನುವ ಮಾತು ಕೇಳಿ ಬಂದಿದೆ. 1200 ರೂ. ಕೊಟ್ಟು ದೇವಿ ದರ್ಶನಕ್ಕೆ ವಿಶೇಷ ಪಾಸ್ ಪಡೆದವರಿಗೆ ಮಧ್ಯಾಹ್ನ ೨ ಗಂಟೆಯಾದರೂ ಅಮ್ಮನವರ ದರ್ಶನ ಭಾಗ್ಯ ಸಿಗಲಿಲ್ಲ. ದೇವಸ್ಥಾನದಿಂದ ಕೈನಲ್ಲಿ ಪಾಸ್ ಹಿಡಿದು ನಿಂತ ಭಕ್ತರ ಸರದಿ ನೆಹರೂ ಮೈದಾನ ದಾಟಿ ಹೋಗಿತ್ತು.
ಅನ್ನದಾಸೋಹ ಮತ್ತು ದೇವಿ ದರ್ಶನಕ್ಕೆ ೨೦೦೦ ರೂ. ಪಾಸ್ ಮಾಡಲಾಗಿತ್ತು. ಈ ಪಾಸ್ ಪಡೆದವರಿಗೆ ಸಹ ಅಮ್ಮನ ದರ್ಶನ ಸುಲಭವಾಗಿ ಸಿಗಲಿಲ್ಲ. ದೇವಸ್ಥಾನದಿಂದ ಸೊರಬ ರಸ್ತೆಯವರೆಗೂ ಬಿಸಿಲಿನಲ್ಲಿ ಪಾಸ್ ಇದ್ದರೂ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಫೆ. 05 ಮತ್ತು 06 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ,  ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಫೆ. 05 ಮತ್ತು 06 ರಂದು ಬೆಳಗ್ಗೆ 10 ರಿಂದ ಮ. 02 ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಸೋಮಯ್ಯ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಶಂಕರಮಠ ಎಡಭಾಗ, ಕೆಇಬಿ ಸರ್ಕಲ್, ಹಳೇ ಹೊನ್ನಳ್ಳಿರಸ್ತೆ, ರೈಲ್ವೆ ಸ್ಟೇಷನ್ ರಸ್ತೆ, ಎ.ಎ.ಕಾಲೋನಿ, ವಿನಾಯಕನಗರ, ಬಾಲರಾಜ್ ಅರಸು ರಸ್ತೆ, ಬಸವನಗುಡಿ ವಿನಾಯಕ ಪಾರ್ಕ್, ಬಸವನಗುಡಿ 5ನೇ ಕ್ರಾಸ್, ಕೋರ್ಟ್ ರಸ್ತೆ, ಒಳಾಂಗಣ ಕ್ರೀಡಾಂಗಣ, ಡಿ.ಸಿ.ಕಾಂಪೌAಡ್, ಟ್ಯಾಂಕ್ ಮೊಹಲ್ಲಾ, ಮೆಹದಿನಗರ, ಬಾಪೂಜಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Tags: HS sundreshkannada newskannada news livemalnad newsSAGARANEWSshimogashivamogga
Previous Post

JOB NEWS : ಶಿವಮೊಗ್ಗ | ಅಟೆಂಡೆಂಟ್ ಹುದ್ದೆಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ಅರ್ಜಿ | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Next Post

ತಹಶೀಲ್ದಾರ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆಗೆ ಯತ್ನ!: ವೈರಲ್ ಆದ ಪತ್ರದಲ್ಲೇನಿದೆ?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL